ಯಾರು ನಮ್ಮನ್ನು ಶರೀರಾ ನುಸಾರವಾಗಿ ಎಣಿಸುತ್ತಾರೋ ಅವರಿಗೆ ದಿಟ್ಟತನವನ್ನು ತೋರಿಸಬೇಕೆಂದು ನಾನು ಯೋಚಿಸುತ್ತಾ ಇದ್ದೇನೆ: ನಾವು ನಿಮ್ಮಲ್ಲಿಗೆ ಬಂದಿರುವಾಗ ಅಂಥ ದಿಟ್ಟತನವನ್ನು ತೋರಿಸುವದಕ್ಕೆ ಅವಕಾಶವಾಗಬಾರದೆಂದು ನಿಮ್ಮನು ಬೇಡಿಕೊಳ್ಳುತ್ತೇನೆ.
Cross references
ಆದದರಿಂದ ಕ್ರಿಸ್ತ ಯೇಸುವಿನಲ್ಲಿ ರುವವರಿಗೆ ಅಪರಾಧ ನಿರ್ಣಯವು ಈಗ ಇಲ್ಲವೇ ಇಲ್ಲ; ಇವರು ಶರೀರಕ್ಕನುಸಾರವಾಗಿ ಅಲ್ಲ, ಆತ್ಮನಿಗನುಸಾರವಾಗಿಯೇ ನಡೆಯುವವರಾಗಿದ್ದಾರೆ.
ಶರೀರವನ್ನು ಅನುಸರಿಸುವವರು ಅದಕ್ಕೆ ಸಂಬಂಧ ಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ; ಆತ್ಮನನ್ನನುಸರಿ ಸುವವರಾದರೋ ಆತ್ಮನಿಗೆ ಸಂಬಂಧಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ.
ನಾನು ನಿಮ್ಮ ಬಳಿಗೆ ಬರುವದಿಲ್ಲವೇನೋ ಎಂದು ಕೆಲವರು ಉಬ್ಬಿಕೊಂಡಿದ್ದಾರೆ.
ನಾನು ನಿಮ್ಮಲ್ಲಿದ್ದು ಕೊರತೆಯುಳ್ಳವನಾಗಿದ್ದಾಗ ಯಾರ ಮೇಲೆಯೂ ಭಾರಹಾಕಲಿಲ್ಲ; ಮಕೆದೋನ್ಯ ದಿಂದ ಬಂದ ಸಹೋದರರು ನನಗೆ ಬೇಕಾದದ್ದೆಲ್ಲವನ್ನು ಕೊಟ್ಟರು; ನಾನು ನಿಮಗೆ ಯಾವದರಲ್ಲಿಯೂ ಭಾರವಾಗಿರಬಾರದೆಂದು ನೋಡಿಕೊಳ್ಳುತ್ತಿದ್ದೆನು, ಇನ್ನು ಮೇಲೆಯೂ ನೋಡಿಕೊಳ್ಳುವೆನು.
ಭಾರವನ್ನು ನಾನು ನಿಮ್ಮ ಮೇಲೆ ಹಾಕಲಿಲ್ಲವೆಂಬ ಒಂದೇ ವಿಷಯದಲ್ಲಿ ಹೊರತು ಇನ್ನಾವ ವಿಷಯ ದಲ್ಲಿಯೂ ನಿಮ್ಮನ್ನು ಮಿಕ್ಕಾದ ಸಭೆಗಳವರಿಗಿಂತ ಕಡಿಮೆ ಮಾಡಲಿಲ್ಲವಲ್ಲಾ; ನಾನು ಮಾಡಿದ ಈ ಅನ್ಯಾಯವನ್ನು ಕ್ಷಮಿಸಿರಿ.
ನಾನು ಎರಡನೆಯ ಸಾರಿ ನಿಮ್ಮಲ್ಲಿದ್ದಾಗ--ನಾನು ತಿರಿಗಿ ಬಂದರೆ ನಿಮ್ಮನ್ನು ಶಿಕ್ಷಿಸದೆ ಬಿಡುವದಿಲ್ಲವೆಂದು ಹೇಗೆ ಹೇಳಿದೆನೋ ಹಾಗೆಯೇ ಈಗಲೂ ಪೂರ್ವ ಪಾಪಕೃತ್ಯಗಳನ್ನು ಇನ್ನೂ ನಡಿಸುತ್ತಿರುವವರಿಗೂ ಮಿಕ್ಕಾದವರೆಲ್ಲರಿಗೂ ನಾನು ಬರೆಯುತ್ತೇನೆ.
ಇದಕ್ಕಾಗಿಯೇ ನಾನು ನಿಮ್ಮಲ್ಲಿ ಇಲ್ಲದಿರುವಾಗ ಈ ಮಾತುಗಳನ್ನು ಬರೆದಿದ್ದೇನೆ; ನಿಮ್ಮನ್ನು ಕೆಡವಿ ಹಾಕುವದಕ್ಕಲ್ಲ, ಕಟ್ಟುವದಕ್ಕಾಗಿ ಕರ್ತನು ನನಗೆ ಕೊಟ್ಟಿರುವ ಅಧಿಕಾರದ ಪ್ರಯೋಗದಲ್ಲಿ ನಿಮ್ಮ ಬಳಿಗೆ ಬಂದಾಗ ಕಾಠಿಣ್ಯವನ್ನು ತೋರಿಸುವದಕ್ಕೆ ಅವಕಾಶವಿರ ಬಾರದೆಂದು ಅಪೇಕ್ಷಿಸುತ್ತೇನೆ.
ನಾನು ಹೇಳುವದೇನಂದರೆ, ಆತ್ಮನನ್ನು ಅನು ಸರಿಸಿ ನಡೆದುಕೊಳ್ಳಿರಿ; ಆಗ ನೀವು ಶರೀರಭಾವದ ಅಭಿಲಾಷೆಯನ್ನು ಎಷ್ಟು ಮಾತ್ರಕ್ಕೂ ನೆರವೇರಿಸು ವದಿಲ್ಲ.
ನೀವು ಪೂರ್ವದಲ್ಲಿ ಅಪರಾಧ ಗಳನ್ನೂ ಪಾಪಗಳನ್ನೂ ಮಾಡುವವರಾಗಿದ್ದು ಇಹ ಲೋಕಾಚಾರಕ್ಕೆ ಅನುಸಾರವಾಗಿ ನಡೆದುಕೊಂಡಿರಿ; ವಾಯುಮಂಡಲದಲ್ಲಿ ಅಧಿಕಾರ ನಡಿಸುವ ಅಧಿಪತಿಗೆ ಅಂದರೆ ಅವಿಧೇಯತೆಯ ಮಕ್ಕಳಲ್ಲಿ ಈಗ ಕೆಲಸ ನಡಿಸುವ ಆತ್ಮನಿಗನುಸಾರವಾಗಿ ನಡೆದುಕೊಂಡಿರಿ;