Home Bibles ☰ Books 2 ಕೊರಿಂಥದವರಿಗೆ 12:2 · ಕನ್ನಡ ಬೈಬಲ್
2 ಕೊರಿಂಥದವರಿಗೆ 12:2 · ಕನ್ನಡ ಬೈಬಲ್

ಕ್ರಿಸ್ತನಲ್ಲಿದ್ದ ಒಬ್ಬ ಮನುಷ್ಯನನ್ನು ಬಲ್ಲೆನು, ಅವನು ಹದಿನಾಲ್ಕು ವರುಷಗಳ ಹಿಂದೆ ಮೂರನೇ ಪರಲೋಕಕ್ಕೆ ಒಯ್ಯಲ್ಪಟ್ಟನು. (ಅವನ ದೇಹಸಹಿತನಾಗಿ ಒಯ್ಯಲ್ಪಟ್ಟನೋ ದೇಹರಹಿತನಾಗಿ ಒಯ್ಯಲ್ಪಟ್ಟನೋ ನಾನು ಹೇಳಲಾರೆನು; ದೇವರೇ ಬಲ್ಲನು.)

Cross references

ಆದಿಕಾಂಡ 1:14

ದೇವರು--ಹಗಲನ್ನು ರಾತ್ರಿಯಿಂದ ಬೇರೆ ಮಾಡುವದಕ್ಕೆ ಆಕಾಶದ ವಿಶಾಲದಲ್ಲಿ ಬೆಳಕುಗಳಿರಲಿ; ಅವು ಹಗಲಿರುಳುಗಳನ್ನೂ ಸಮಯ ದಿನ ಸಂವತ್ಸರ ಗಳನ್ನೂ ತೋರಿಸುವದಕ್ಕೆ ಗುರುತುಗಳಾಗಿರಲಿ;

1 ಅರಸುಗಳು 8:27

ಆದರೆ ದೇವರು ನಿಶ್ಚಯವಾಗಿ ಭೂಮಿಯ ಮೇಲೆ ವಾಸವಾಗಿರುವನೋ? ಇಗೋ, ಆಕಾಶಗಳೂ ಆಕಾಶಾ ಕಾಶಗಳೂ ನಿನ್ನನ್ನು ಹಿಡಿಯಲಾರವು; ಹಾಗಾದರೆ ನಾನು ಕಟ್ಟಿಸಿದ ಈ ಮಂದಿರವು ಹಿಡಿಯುವದು ಹೇಗೆ?

1 ಅರಸುಗಳು 18:12

ನಾನು ನಿನ್ನನ್ನು ಬಿಟ್ಟು ಹೋಗುವಾಗ ಆಗುವದೇನಂದರೆ, ಕರ್ತನ ಆತ್ಮನು ನಾನರಿಯದ ಸ್ಥಳಕ್ಕೆ ನಿನ್ನನ್ನು ಒಯ್ಯು ವನು. ನಾನು ಬಂದು ಅಹಾಬನಿಗೆ ತಿಳಿಸಿದಾಗ ಅವನು ನಿನ್ನನ್ನು ಕಾಣದೆ ಹೋದರೆ ನನ್ನನ್ನು ಕೊಂದುಹಾಕು ವನು. ಆದರೆ ನಿನ್ನ ಸೇವಕನಾದ ನಾನು ನನ್ನ ಚಿಕ್ಕತನ ದಿಂದ ಕರ್ತನಿಗೆ ಭಯಪಡುತ್ತೇನೆ.

2 ಅರಸುಗಳು 2:16

ಇದ ಲ್ಲದೆ ಅವರು ಅವನಿಗೆ--ಇಗೋ, ನಿನ್ನ ಸೇವಕರ ಸಂಗಡ ಐವತ್ತು ಮಂದಿ ಬಲಿಷ್ಠರಾದವರಿದ್ದಾರೆ; ಅವರು ಹೋಗಿ ನಿನ್ನ ಯಜಮಾನನನ್ನು ಹುಡುಕಲು ಅಪ್ಪಣೆ ಯಾಗಲಿ, ಒಂದು ವೇಳೆ ಕರ್ತನ ಆತ್ಮನು ಅವನನ್ನು ಎತ್ತಿಕೊಂಡು ಹೋಗಿ ಬೆಟ್ಟದ ಮೇಲಾದರೂ ತಗ್ಗಿನ ಲ್ಲಾದರೂ ಹಾಕಿರಬಹುದು ಅಂದರು.

ಕೀರ್ತನೆಗಳು 148:4

ಆಕಾಶಗಳ ಆಕಾಶಗಳೇ, ಆಕಾಶಗಳ ಮೇಲೆ ಇರುವ ನೀರುಗಳೇ, ಆತನನ್ನು ಸ್ತುತಿಸಿರಿ.

ಯೆಶಾಯ 45:24

ಕರ್ತನಲ್ಲಿ ಮಾತ್ರ ನನಗೆ ನೀತಿಯೂ ಬಲವೂ ಉಂಟೆಂದು ಮನುಷ್ಯರೂ ಸಹ ಆತನ ಬಳಿಗೆ ಬರುವರು; ಆತನ ಮೇಲೆ ಉರಿಗೊಂಡವ ರೆಲ್ಲರೂ ನಾಚಿಕೆಗೆ ಈಡಾಗುವರು ಎಂದು ಒಬ್ಬನು ನಿಶ್ಚಯವಾಗಿ ಹೇಳುತ್ತಾನೆ.ಇಸ್ರಾಯೇಲಿನ ಸಂತಾನದವರೆಲ್ಲರೂ ಕರ್ತನಲ್ಲಿ ನೀತಿವಂತರಾಗಿ ಹೆಚ್ಚಳಪಡುವರು.

ಯೆಶಾಯ 57:15

ಉನ್ನತನೂ ಎತ್ತರವಾದವನೂ ನಿತ್ಯವಾಗಿ ವಾಸಿ ಸುವವನೂ ಪರಿಶುದ್ಧನೆಂದು ಹೆಸರುಳ್ಳಾತನೂ ಹೀಗೆ ಹೇಳುತ್ತಾನೆ--ಉನ್ನತವಾದ ಪರಿಶುದ್ಧ ಸ್ಥಳದಲ್ಲಿ ವಾಸಿ ಸುವ ನಾನು ಪಶ್ಚಾತ್ತಾಪದೊಂದಿಗೆ ಮತ್ತು ದೀನನ ಆತ್ಮದೊಂದಿಗೆ ಇದ್ದುಕೊಂಡು ಅವರನ್ನು ಉಜ್ಜೀ ವಿಸುವವನಾಗಿದ್ದೇನೆ.

ಯೆಹೆಜ್ಕೇಲ 8:1

ಆರನೇ ವರುಷದ ಆರನೆಯ ತಿಂಗಳಿನ ಐದನೆಯ ದಿನದಲ್ಲಿ ಆಗಿದ್ದೇನಂದರೆ--ನಾನೂ ಯೆಹೂದದ ಹಿರಿಯರೂ ನನ್ನ ಮನೆಯಲ್ಲಿ ಕುಳಿತುಕೊಂಡಿರುವಾಗ ಅಲ್ಲಿ ದೇವರಾದ ಕರ್ತನ ಹಸ್ತವು ನನ್ನ ಮೇಲೆ ಬಿತ್ತು.

ಯೆಹೆಜ್ಕೇಲ 11:24

ಅನಂತರ ಆತ್ಮನು ನನ್ನನ್ನು ಎತ್ತಿ ದೇವರ ಆತ್ಮದಿಂದಾದ ದರ್ಶನದಿಂದ ಕಸ್ದೀಯರ ದೇಶಕ್ಕೆ ಸೆರೆಯವರ ಬಳಿಗೆ ಕರೆದುಕೊಂಡು ಹೋದನು; ಆಗ ನಾನು ನೋಡಿದ ದರ್ಶನವು ನನ್ನಿಂದ ಇಲ್ಲದೆ ಹೋಯಿತು.ಆಮೇಲೆ ಕರ್ತನು ನನಗೆ ತೋರಿಸಿದ ಎಲ್ಲಾ ಸಂಗತಿಗಳನ್ನು ಸೆರೆಯವರೊಂದಿಗೆ ನಾನು ಮಾತನಾಡಿದೆನು.

ಲೂಕ 24:51

ಇದಾದ ಮೇಲೆ ಆತನು ಅವರನ್ನು ಆಶೀರ್ವದಿಸುತ್ತಿರುವಾಗ ಆತನು ಅವರಿಂದ ಪ್ರತ್ಯೇಕಿಸಲ್ಪಟ್ಟು ಮೇಲಕ್ಕೆ ಪರಲೋಕದೊಳಗೆ ಒಯ್ಯ ಲ್ಪಟ್ಟನು.

ಯೋಹಾನ 6:56

ಯಾವನು ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುತ್ತಾನೋ ಅವನು ನನ್ನಲ್ಲಿ ವಾಸಿಸುತ್ತಾನೆ; ನಾನು ಅವನಲ್ಲಿ ವಾಸಿ ಸುತ್ತೇನೆ.

ಯೋಹಾನ 15:4

ನನ್ನಲ್ಲಿ ನೆಲೆಗೊಂಡಿರ್ರಿ, ನಾನು ನಿಮ್ಮಲ್ಲಿ ನೆಲೆ ಗೊಂಡಿರುವೆನು. ಕೊಂಬೆಯು ದ್ರಾಕ್ಷೇಯಬಳ್ಳಿಯಲ್ಲಿ ನೆಲೆಗೊಂಡಿರದಿದ್ದರೆ ಹೇಗೆ ತನ್ನಷ್ಟಕ್ಕೆ ತಾನೇ ಫಲ ಕೊಡಲಾರದೋ ಹಾಗೆಯೇ ನೀವೂ ನನ್ನಲಿ ನೆಲೆಗೊಂಡಿರದಿದ್ದರೆ ಫಲಕೊಡಲಾರಿರಿ.

Interlinear

Choose Theme