ನಿಮಗೆ ದುಃಖವಾಗಬೇಕಂತಲ್ಲ, ನಿಮ್ಮ ಮೇಲೆ ನನಗಿರುವ ಅಧಿಕವಾದ ಪ್ರೀತಿಯನ್ನು ನೀವು ತಿಳಿದು ಕೊಳ್ಳಬೇಕೆಂತಲೇ ನಾನು ಬಹಳ ಕಣ್ಣೀರಿನಿಂದಲೂ ಹೃದಯದ ಬಹುಸಂಕಟದಿಂದಲೂ ವ್ಯಾಕುಲ ದಿಂದಲೂ ನಿಮಗೆ ಬರೆದೆನು.
Cross references
ನಿನ್ನ ಹೃದಯ ದಲ್ಲಿ ನಿನ್ನ ಸಹೋದರನನ್ನು ದ್ವೇಷಿಸಬೇಡ; ಹೇಗಾ ದರೂ ನಿನ್ನ ನೆರೆಯವನ ಪಾಪವು ನಿನ್ನ ಮೇಲೆ ಬಾರದಂತೆ ಅವನನ್ನು ತಪ್ಪದೆ ಗದರಿಸು.
ಅವರು ನಿನ್ನ ನ್ಯಾಯಪ್ರಮಾಣವನ್ನು ಕೈ ಕೊಳ್ಳದ ನಿಮಿತ್ತ ಹೊಳೆಗಳಂತೆ ನನ್ನ ಕಣ್ಣೀರು ಹರಿಯುತ್ತದೆ.
ರಹಸ್ಯವಾದ ಪ್ರೀತಿಗಿಂತಲೂ ಬಹಿರಂಗವಾದ ಗದರಿಕೆಯೇ ಲೇಸು.
ಆದದರಿಂದ ಕರ್ತನು ತಾನು ಕಳುಹಿಸದೆ ತನ್ನ ಹೆಸರಿನಲ್ಲಿ ಪ್ರವಾದಿಸುವಂಥ ಮತ್ತು ಈ ದೇಶದಲ್ಲಿ ಕತ್ತಿಯೂ ಬರವೂ ಇರುವದಿಲ್ಲವೆಂದು ಹೇಳುವಂಥ ಪ್ರವಾದಿಗಳನ್ನು ಕುರಿತು ಹೇಳುವದೇನಂದರೆ--ಕತ್ತಿ ಯಿಂದಲೂ ಕ್ಷಾಮದಿಂದಲೂ ಆ ಪ್ರವಾದಿಗಳು ತಾವೇ ನಿರ್ಮೂಲವಾಗುತ್ತಾರೆ.
ತರುವಾಯ ಆತನು ಸವಿಾಪಿಸಿದಾಗ ಪಟ್ಟಣ ವನ್ನು ನೋಡಿ ಅದರ ವಿಷಯವಾಗಿ ಅತ್ತು--
ಅದೇನಂದರೆ ನನ್ನ ಹೃದಯದಲ್ಲಿ ದೊಡ್ಡ ಭಾರವೂ ಎಡೆಬಿಡದ ದುಃಖವೂ ಉಂಟು.
ನಾನು ಪತ್ರದಿಂದ ನಿಮ್ಮನ್ನು ದುಃಖಪಡಿಸಿದಕ್ಕೆ ನನಗೆ ವ್ಯಸನವಾದರೂ ನಾನು ಪಶ್ಚಾತ್ತಾಪಪಡು ವದಿಲ್ಲ, ಯಾಕಂದರೆ ಆ ಪತ್ರಿಕೆಯು ನಿಮ್ಮನ್ನು ದುಃಖ ಪಡಿಸಿದಾಗ್ಯೂ ಅದು ಸ್ವಲ್ಪ ಕಾಲಕ್ಕೆ ಎಂದು ನಾನು ತಿಳಿಯುತ್ತೇನೆ.
ನಾನು ಹೀಗೆ ನಿಮಗೆ ಬರೆದದ್ದು ಅನ್ಯಾಯ ಮಾಡಿದವನಿ ಗೋಸ್ಕರವಲ್ಲ, ಅನ್ಯಾಯ ಸಹಿಸಿದವನಿಗೋಸ್ಕರವೂ ಅಲ್ಲ; ದೇವರ ದೃಷ್ಟಿಯಲ್ಲಿ ನಿಮಗೋಸ್ಕರ ನಮಗಿರುವ ಚಿಂತೆಯು ನಿಮಗೆ ತೋರಿ ಬರುವದಕ್ಕೋಸ್ಕರವೇ ಬರೆದೆನು.
ದೈವಾಸಕ್ತಿಯಿಂದಲೇ ನಾನು ನಿಮ್ಮ ವಿಷಯದಲ್ಲಿ ಆಸಕ್ತನಾಗಿದ್ದೇನೆ; ನಿಮ್ಮನ್ನು ಕ್ರಿಸ್ತನೆಂಬ ಒಬ್ಬನೇ ಪುರುಷನಿಗೆ ಶುದ್ದ ಕನ್ಯೆಯಾಗಿ ಒಪ್ಪಿಸಬೇಕೆಂದು ನಿಮ್ಮನ್ನು ಆತನಿಗೆ ನಿಶ್ಚಯ ಮಾಡಿದೆನಲ್ಲಾ.
ನಾನಂತೂ ನನಗಿರುವದನ್ನು ನಿಮಗೋಸ್ಕರ ಅತಿ ಸಂತೋಷದಿಂದ ವೆಚ್ಚಮಾಡುತ್ತೇನೆ, ನನ್ನನ್ನೇ ವೆಚ್ಚ ಮಾಡಿಕೊಳ್ಳುತ್ತೇನೆ. ನಾನು ನಿಮ್ಮನ್ನು ಹೆಚ್ಚಾಗಿ ಪ್ರೀತಿಸಿದರೆ ನೀವು ನನ್ನನ್ನು ಕಡಿಮೆಯಾಗಿ ಪ್ರೀತಿಸುತ್ತೀರಿ.
(ಅನೇಕರು ಕ್ರಿಸ್ತನ ಶಿಲುಬೆಗೆ ವಿರೋಧಿಗಳಾಗಿ ನಡೆಯುತ್ತಾರೆ; ಅವರ ವಿಷಯದಲ್ಲಿ ನಾನು ನಿಮಗೆ ಎಷ್ಟೋ ಸಾರಿ ಹೇಳಿದೆನು, ಈಗಲೂ ಅಳುತ್ತಾ ಹೇಳುತ್ತೇನೆ.