Home Bibles 2 ಕೊರಿಂಥದವರಿಗೆ 3:12 · ಕನ್ನಡ ಬೈಬಲ್
2 ಕೊರಿಂಥದವರಿಗೆ 3:12 · ಕನ್ನಡ ಬೈಬಲ್

ನಮಗೆ ಇಂಥ ನಿರೀಕ್ಷೆ ಇರುವಲ್ಲಿ ನಾವು ಅತಿ ಸ್ಪಷ್ಟವಾಗಿ ಮಾತನಾಡುತ್ತೇವೆ.

Cross references

ಯೋಹಾನ 10:24

ಆಗ ಯೆಹೂದ್ಯರು ಆತನ ಸುತ್ತಲು ಬಂದು ಆತನಿಗೆ--ಇನ್ನು ಎಷ್ಟರ ವರೆಗೆ ನಮ್ಮನ್ನು ಸಂದೇಹಪಡಿಸುತ್ತೀ? ನೀನು ಕ್ರಿಸ್ತ ನಾಗಿದ್ದರೆ ನಮಗೆ ಸ್ಪಷ್ಟವಾಗಿ ಹೇಳು ಅಂದರು.

ಯೋಹಾನ 16:25

ಇವುಗಳನ್ನು ನಾನು ಸಾಮ್ಯಗಳಿಂದ ನಿಮಗೆ ಹೇಳಿದ್ದೇನೆ; ಆದರೆ ನಾನು ಇನ್ನು ಸಾಮ್ಯಗಳಿಂದ ಮಾತನಾಡದೆ ತಂದೆಯ ವಿಷಯ ನಿಮಗೆ ಸ್ಪಷ್ಟವಾಗಿ ತಿಳಿಸುವ ಸಮಯ ಬರುತ್ತದೆ.

ಯೋಹಾನ 16:29

ಆತನ ಶಿಷ್ಯರು ಆತನಿಗೆ--ಇಗೋ, ಈಗ ನೀನು ಸಾಮ್ಯರೂಪದಲ್ಲಿ ಮಾತನಾಡದೆ ಸ್ಪಷ್ಟವಾಗಿಯೇ ಮಾತನಾಡುತ್ತೀ.

ಅಪೋಸ್ತಲರ ಕೃತ್ಯಗಳು 4:13

ಅವರು ಪೇತ್ರ ಯೋಹಾನರ ಧೈರ್ಯವನ್ನು ನೋಡಿ ಇವರು ವಿದ್ಯೆಯಿಲ್ಲದವರೂ ತಿಳುವಳಿಕೆ ಯಿಲ್ಲದವರೂ ಎಂದು ಗ್ರಹಿಸಿ ಆಶ್ಚರ್ಯಪಟ್ಟು ಅವರು ಯೇಸುವಿನೊಂದಿಗೆ ಇದ್ದವರೆಂದು ತಿಳಿದುಕೊಂಡರು.

ಅಪೋಸ್ತಲರ ಕೃತ್ಯಗಳು 4:29

ಈಗ ಕರ್ತನೇ, ಅವರ ಬೆದರಿಕೆಗಳನ್ನು ನೋಡು; ನಿನ್ನ ಸೇವಕರು ನಿನ್ನ ವಾಕ್ಯವನ್ನು ಪೂರ್ಣ ಧೈರ್ಯದಿಂದ ಹೇಳುವ ಹಾಗೆ

ಅಪೋಸ್ತಲರ ಕೃತ್ಯಗಳು 9:27

ಆದರೆ ಬಾರ್ನಬನು ಅವನನ್ನು ಅಪೊಸ್ತಲರ ಬಳಿಗೆ ಕರೆದುಕೊಂಡು ಹೋಗಿ ಅವನು ಹೇಗೆ ದಾರಿಯಲ್ಲಿ ಕರ್ತನನ್ನು ಕಂಡದ್ದನ್ನೂ ಆತನು ಅವನ ಸಂಗಡ ಮಾತನಾಡಿ ದ್ದನ್ನೂ ದಮಸ್ಕದೊಳಗೆ ಯೇಸುವಿನ ಹೆಸರಿನಲ್ಲಿ ಧೈರ್ಯದಿಂದ ಮಾತನಾಡಿದ್ದನ್ನೂ ಅವರಿಗೆ ವಿವರವಾಗಿ ತಿಳಿಯಪಡಿಸಿದನು.

ಅಪೋಸ್ತಲರ ಕೃತ್ಯಗಳು 9:29

ಕರ್ತನಾದ ಯೇಸುವಿನ ಹೆಸರಿನಲ್ಲಿ ಧೈರ್ಯದಿಂದ ಮಾತನಾಡಿ ಗ್ರೀಕರೊಂದಿಗೆ ತರ್ಕಿಸುತ್ತಿ ದ್ದನು. ಆದರೆ ಅವರು ಅವನನ್ನು ಕೊಲ್ಲುವದಕ್ಕೆ ಪ್ರಯತ್ನ ಮಾಡಿದರು.

ಅಪೋಸ್ತಲರ ಕೃತ್ಯಗಳು 14:3

ಹೀಗಿರಲಾಗಿ ಕರ್ತನು ಅವರ ಕೈಯಿಂದ ಸೂಚಕಕಾರ್ಯಗಳೂ ಅದ್ಭುತಕಾರ್ಯ ಗಳೂ ಆಗುವಂತೆ ದಯಪಾಲಿಸಿ ತನ್ನ ಕೃಪಾವಾಕ್ಯಕ್ಕೆ ಸಾಕ್ಷಿಕೊಟ್ಟದ್ದರಿಂದ ಅವರು ಬಹುಕಾಲ ಅಲ್ಲಿದ್ದು ಆತನಲ್ಲಿ ಧೈರ್ಯದಿಂದ ಮಾತನಾಡುತ್ತಿದ್ದರು.

1 ಕೊರಿಂಥದವರಿಗೆ 14:19

ಆದರೂ ಸಭೆಯಲ್ಲಿ ಅನ್ಯಭಾಷೆಯಿಂದ ಹತ್ತುಸಾವಿರ ಮಾತು ಗಳನ್ನಾಡುವದಕ್ಕಿಂತ ನನ್ನ ಬುದ್ಧಿಯಿಂದ ಐದೇ ಮಾತು ಗಳನ್ನಾಡಿ ಇತರರಿಗೆ ಉಪದೇಶಮಾಡುವದು ನನಗೆ ಇಷ್ಟವಾದದ್ದು.

2 ಕೊರಿಂಥದವರಿಗೆ 4:2

ಆದರೆ ನಾಚಿಕೆಗೆ ಕಾರಣ ವಾಗುವ ಗುಪ್ತಕಾರ್ಯಗಳನ್ನು ನಾವು ಬಿಟ್ಟುಬಿಟ್ಟು ತಂತ್ರದಲ್ಲಿ ನಡೆಯದೆಯೂ ವಂಚನೆಯಿಂದ ದೇವರ ವಾಕ್ಯವನ್ನು ಕೆಡಿಸದೆಯೂ ಸತ್ಯವನ್ನು ಪರಿಷ್ಕಾರವಾಗಿ ಬೋಧಿಸುತ್ತಾ ನಾವು ಯೋಗ್ಯರೆಂದು ಪ್ರತಿ ಮನುಷ್ಯನ ಮನಸ್ಸಾಕ್ಷಿಯು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನ

2 ಕೊರಿಂಥದವರಿಗೆ 4:13

ಹೀಗಿದ್ದರೂ--ನಾನು ನಂಬಿದೆನು, ಆದದರಿಂದ ಮಾತನಾಡಿದೆನು ಎಂದು ಬರೆಯಲ್ಪಟ್ಟಿರುವ ಪ್ರಕಾರ ನಂಬಿಕೆಯ ಆತ್ಮವನ್ನೇ ಹೊಂದಿ ನಾವು ಸಹ ನಂಬುತ್ತೇವೆ; ಆದದರಿಂದ ಮಾತನಾಡುತ್ತೇವೆ.

2 ಕೊರಿಂಥದವರಿಗೆ 7:4

ನಿಮ್ಮೊಂದಿಗೆ ಮಾತನಾಡು ವದಕ್ಕೆ ನನಗೆ ಬಹಳ ಧೈರ್ಯವೂ ನಿಮ್ಮ ವಿಷಯದಲ್ಲಿ ನನಗೆ ಬಹಳ ಹೆಚ್ಚಳವೂ ಉಂಟು; ನಾನು ಆದರಣೆ ಯಿಂದ ತುಂಬಿದವನಾಗಿ ನಮಗಾಗುವ ಎಲ್ಲಾ ಸಂಕಟಗಳಲ್ಲಿ ಅತ್ಯಧಿಕವಾದ ಸಂತೋಷದಿಂದ ಇದ್ದೇನೆ.

2 ಕೊರಿಂಥದವರಿಗೆ 10:1

ನಿಮ್ಮೆದುರಿನಲ್ಲಿರುವಾಗ ದೀನನಾಗಿಯೂ ದೂರದಲ್ಲಿರುವಾಗ ನಿಮ್ಮ ಕಡೆಗೆ ದಿಟ್ಟತನ ತೋರಿಸುವವನಾಗಿಯೂ ಆಗಿದ್ದಾನೆಂದು ನೀವು ತಿಳಿಯುವ ಪೌಲನೆಂಬ ನಾನೇ ಕ್ರಿಸ್ತನ ಶಾಂತ ಮನಸ್ಸಿನಿಂದಲೂ ಸಾತ್ವಿಕತ್ವದಿಂದಲೂ ನಿಮ್ಮನ್ನು ಬೇಡಿಕೊಳ್ಳುತ್ತೇನೆ.

ಎಫೆಸದವರಿಗೆ 6:19

ನಾನು ಬಾಯಿ ತೆರೆಯುವಾಗ ಗುಪ್ತವಾಗಿದ್ದ ಸುವಾರ್ತೆಯ ಮರ್ಮವನ್ನು ಧೈರ್ಯವಾಗಿ ತಿಳಿಸುವದಕ್ಕೆ ಬೇಕಾದ ಮಾತನ್ನು ನನಗೆ ಅನುಗ್ರಹಿಸಬೇಕೆಂದು ಪ್ರಾರ್ಥಿಸಿರಿ.

ಫಿಲಿಪ್ಪಿಯವರಿಗೆ 1:20

ಹೇಗೆಂದರೆ, ನಾನು ಯಾವ ವಿಷಯದಲ್ಲಾದರೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ತುಂಬಾ ಧೈರ್ಯದಿಂದಿರುವದರಿಂದ ಬದುಕಿದರೂ ಸರಿಯೇ ಸತ್ತರೂ ಸರಿಯೇ ನನ್ನ ದೇಹದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂದು ನನಗೆ ಬಹಳ ಅಭಿಲಾಷೆಯೂ ನಿರೀಕ್ಷೆಯೂ ಉಂಟು.

ಕೊಲೊಸ್ಸೆಯವರಿಗೆ 4:4

ನಾನು ಅದನ್ನು ಹೇಳಬೇಕಾದ ರೀತಿಯಲ್ಲಿ ಪ್ರಕಟಿಸುವಂತೆ ಅನುಗ್ರಹ ಮಾಡಬೇಕೆಂದು ಬೇಡಿಕೊಳ್ಳಿರಿ;

1 ತೆಸಲೋನಿಕದವರಿಗೆ 2:2

ಫಿಲಿಪ್ಪಿ ಪಟ್ಟಣದಲ್ಲಿ ನಮಗೆ ಹಿಂಸೆ ಮತ್ತು ಅವಮಾನವು ಮೊದಲು ಸಂಭವಿಸಿದರೂ ನಾವು ನಮ್ಮ ದೇವರ ಮೂಲಕ ಧೈರ್ಯಗೊಂಡು ಬಹು ವಿರೋಧವನ್ನು ಅನುಭವಿಸುವವರಾಗಿ ನಿಮಗೆ ದೇವರ ಸುವಾರ್ತೆಯನ್ನು ತಿಳಿಸಿದೆವೆಂಬದನ್ನು ನೀವು ಬಲ್ಲಿರಿ.

1 ತಿಮೋಥೆಯ 3:13

ಸಭಾಸೇವಕರಾಗಿ ಚೆನ್ನಾಗಿ ಕೆಲಸಮಾಡಿದವರು ತಮಗೆ ಒಳ್ಳೇ ಪದವಿಯನ್ನೂ ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಸಂಬಂಧವಾಗಿ ಬಹು ಧೈರ್ಯವನ್ನೂ ಸಂಪಾದಿಸಿಕೊಳ್ಳುತ್ತಾರೆ.

Interlinear

Choose Theme