ಆದಾಗ್ಯೂ ಅವರ ಹೃದಯವು ಕರ್ತನ ಕಡೆಗೆ ತಿರುಗಿಕೊಂಡಾಗಲೇ ಆ ಮುಸುಕು ತೆಗೆಯಲ್ಪಡುವದು.
Cross references
ಆದರೆ ಮೋಶೆಯು ಕರ್ತನ ಸನ್ನಿಧಿಯಲ್ಲಿ ಆತನ ಸಂಗಡ ಮಾತನಾಡಲು ಒಳಗೆ ಪ್ರವೇಶಿಸಿ ಹೊರಗೆ ಬರುವ ವರೆಗೆ ಆ ಮುಸುಕನ್ನು ತೆಗೆದಿಡುತ್ತಿ ದ್ದನು. ಅವನು ಹೊರಗೆ ಬಂದು ತನಗೆ ಆಜ್ಞಾಪಿಸಿದ್ದನ್ನು ಇಸ್ರಾಯೇಲ್ ಮಕ್ಕಳಿಗೆ ತಿಳಿಸುವನು.ಮೋಶೆಯ ಮುಖವು ಪ್ರಕಾಶಿಸುವದನ್ನು ಇಸ್ರಾಯೇಲ್ ಮಕ್ಕಳು ನೋಡುತ್ತಿದ್ದರು. ಮೋಶೆಯು ದೇವರ ಸಂಗಡ ಮಾತ ನಾಡುವದಕ್ಕೆ ತಿರಿಗಿ ಹೋಗುವ ವರೆಗೆ ಅವನು ತನ್ನ ಮುಖದ ಮೇಲೆ ತಿರಿಗಿ ಮುಸುಕನ್ನು ಹಾಕಿ ಕೊಳ್ಳುತ್ತಿದ್ದನು.
ನೀನು ಇಕ್ಕಟ್ಟಿಗೆ ಗುರಿಯಾಗಿ ಇವೆಲ್ಲವುಗಳು ನಿನಗೆ ಸಂಭವಿಸಿದಾಗ ಕಡೇ ದಿವಸ ಗಳಲ್ಲಿ ನಿನ್ನ ದೇವರಾದ ಕರ್ತನ ಕಡೆಗೆ ತಿರುಗಿಕೊಂಡು
ನೀನು ನಿನ್ನ ದೇವರಾದ ಕರ್ತನ ಮಾತನ್ನು ಕೇಳಿ ಈ ನ್ಯಾಯಪ್ರಮಾಣದ ಪುಸ್ತಕದಲ್ಲಿ ಬರೆದಿರುವ ಆತನ ಆಜ್ಞೆ ನಿಯಮಗಳನ್ನು ಕಾಪಾಡಿ ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣ ದಿಂದಲೂ ನಿನ್ನ ದೇವರಾದ ಕರ್ತನ ಕಡೆಗೆ ತಿರುಗಿ ಕೊಂಡರೆ ಕರ್ತನು ನಿನ್ನ ಪಿತೃಗಳಲ್ಲಿ ಸಂತೋಷಿಸಿದ ಹಾಗೆ ನಿನ್ನಲ್ಲಿ ಒಳ್ಳೇದಕ್ಕೋಸ್ಕರ ಸಂತೋಷಿಸುವನು.
ಸಮಸ್ತ ಜನಾಂಗಗಳನ್ನು ಮುಚ್ಚಿರುವ ಮುಸುಕನ್ನೂ ಸಕಲ ದೇಶಿಯರ ಮೇಲೆ ಹರಡಿರುವ ತೆರೆಯನ್ನೂ ಇದೇ ಪರ್ವತದಲ್ಲಿ (ನಾಶ) ತೆಗೆದುಹಾಕುವನು.
ಆ ದಿನದಲ್ಲಿ ಕಿವುಡರು ಪುಸ್ತಕದ ಮಾತುಗಳನ್ನು ಕೇಳುವರು ಕುರುಡರ ಕಣ್ಣುಗಳು ಕತ್ತಲೆಯೊಳಗಿಂದಲೂ ಅಂಧಕಾರದೊಳಗಿಂದಲೂ ನೋಡುವವು.
ನಿನ್ನ ಮಕ್ಕಳೆಲ್ಲಾ ಕರ್ತನಿಂದ ಬೋಧಿಸಲ್ಪಡು ವರು; ನಿನ್ನ ಮಕ್ಕಳ ಸಮಾಧಾನವು ಅಧಿಕವಾಗಿರು ವದು.
ಆದರೆ ನನ್ನ ಹೆಸರಿನಿಂದ ಕರೆಯ ಲ್ಪಟ್ಟಿರುವ ಮನೆಯಲ್ಲಿ ಅದನ್ನು ಅಪವಿತ್ರ ಮಾಡುವ ಹಾಗೆ ತಮ್ಮ ಅಸಹ್ಯಗಳನ್ನು ಇಟ್ಟಿದ್ದಾರೆ.
ನಾವು ನಮ್ಮ ಮಾರ್ಗಗಳನ್ನು ಶೋಧಿಸಿ ಪರೀಕ್ಷಿಸಿ ಕೊಂಡು ಮತ್ತೆ ಕರ್ತನ ಬಳಿಗೆ ತಿರುಗಿಕೊಳ್ಳೋಣ.
ಇಸ್ರಾಯೇಲಿನ ಮಕ್ಕಳು ಬಹಳ ದಿವಸಗಳ ವರೆಗೆ ಅರಸನಿಲ್ಲದೆ ಪ್ರಧಾ ನನಿಲ್ಲದೆ ಬಲಿ ಇಲ್ಲದೆ ವಿಗ್ರಹವಿಲ್ಲದೆ ಎಫೋದ್ ಇಲ್ಲದೆ ವಿಗ್ರಹಗಳು ಇಲ್ಲದೆ ಇರುವರು.ಆಮೇಲೆ ಇಸ್ರಾಯೇಲಿನ ಮಕ್ಕಳು ತಿರುಗಿಕೊಂಡು ಅವರ ದೇವ ರಾದ ಕರ್ತನನ್ನು ಮತ್ತು ಅವರ ಅರಸನಾದ ದಾವೀದ ನನ್ನು ಹುಡುಕಿಕೊಂಡು ಅಂತ್ಯ ದಿವಸಗಳಲ್ಲಿ ಕರ್ತನನ್ನೂ ಆತನ ದಯೆಯನ್ನೂ ಭಯದಿಂದ ಮರೆಹೋಗುವರು.
ಅವರೆಲ್ಲರು ದೇವರಿಂದ ಬೋಧಿಸಲ್ಪಡುವರೆಂದು ಪ್ರವಾದನೆಗಳಲ್ಲಿ ಬರೆಯಲ್ಪಟ್ಟಿದೆ. ಆದಕಾರಣ ತಂದೆಯಿಂದ ಕೇಳಿ ಕಲಿತ ಪ್ರತಿಯೊಬ್ಬ ಮನುಷ್ಯನು ನನ್ನ ಬಳಿಗೆ ಬರುತ್ತಾನೆ.
ಅವರು ಕೂಡ ಇನ್ನು ಅಪ ನಂಬಿಕೆಯಲ್ಲಿ ನಿಲ್ಲದ ಪಕ್ಷಕ್ಕೆ ಕಸಿಕಟ್ಟಲ್ಪಡುವರು; ಯಾಕಂದರೆ ದೇವರು ಅವರನ್ನು ತಿರಿಗಿ ದೇವರು ಕಸಿಕಟ್ಟುವದಕ್ಕೆ ಸಮರ್ಥನಾಗಿದ್ದಾನೆ.
ಸಹೋದರರೇ, ನಿಮ್ಮನ್ನು ನೀವೇ ಬುದ್ಧಿವಂತ ರೆಂಬದಾಗಿ ಎಣಿಸಿಕೊಳ್ಳದಂತೆ ಗುಪ್ತವಾಗಿದ್ದ ಒಂದು ಸಂಗತಿ ನಿಮಗೆ ತಿಳಿದಿರಬೇಕೆಂದು ಅಪೇಕ್ಷಿಸುತ್ತೇನೆ. ಅದೇನಂದರೆ, ಇಸ್ರಾಯೇಲ್ಯರಲ್ಲಿ ಒಂದು ಪಾಲು ಜನರಿಗೆ ಉಂಟಾದ ಕುರುಡುತನವು ಅನ್ಯಜನಗಳು ಸಂಪೂರ್ಣವಾಗಿ ದೇವರ ರಾಜ್ಯದಲ್ಲಿ ಸೇರುವ ತನಕ