ಹೇಗಂದರೆ ಕ್ಷಣಮಾತ್ರ ವಿರುವ ನಮ್ಮ ಹಗುರವಾದ ಸಂಕಟವು ಅತ್ಯಂತಾಧಿಕ ವಾದ ಮತ್ತು ನಿರಂತರವಾಗಿರುವ ಗೌರವವುಳ್ಳ ಮಹಿಮೆಯನ್ನುಂಟು ಮಾಡುತ್ತದೆ.ನಾವು ಕಾಣು ವಂಥವುಗಳನ್ನು ದೃಷ್ಟಿಸದೆ ಕಾಣದಿರುವಂಥವುಗಳನ್ನು ದೃಷ್ಟಿಸುವವರಾಗಿದ್ದೇವೆ; ಯಾಕಂದರೆ ಕಾಣುವಂಥ ವುಗಳು ಸ್ವಲ್ಪಕಾಲ ಮಾತ್ರ ಇರುವವು; ಕಾಣದಿರುವಂಥ ವುಗಳು ಸದಾಕಾಲವೂ ಇರುವವು.
Cross references
ಇವುಗಳಾದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಕರ್ತನ ವಾಕ್ಯವು ಬಂದು--ಅಬ್ರಾಮನೇ, ಭಯಪಡಬೇಡ; ನಾನೇ ನಿನ್ನ ಗುರಾಣಿಯೂ ನಿನ್ನ ಅತ್ಯಧಿಕವಾದ ಬಹುಮಾನವೂ ಆಗಿದ್ದೇನೆ.
ಆದರೆ ಆ ಸ್ತ್ರೀ ಅಶುದ್ಧಳಲ್ಲದೆ ಶುದ್ಧಳಾಗಿದ್ದರೆ ಅವಳು ನಿರಪರಾಧಿ ಯಾಗಿದ್ದು ಸಂತಾನವನ್ನು ಪಡೆಯುವಳು.
ಆತನ ಕೋಪವು ಕ್ಷಣಮಾತ್ರ. ಆತನ ಕಟಾಕ್ಷವು ಜೀವವೇ; ರಾತ್ರಿಯಲ್ಲಿ ದುಃಖವು ತಂಗಬಹುದಾದರೂ ಬೆಳಿಗ್ಗೆ ಆನಂದವು ಬರುವದು.
ನಿನಗೆ ಭಯಪಡುವವರಿಗೋಸ್ಕರ ಮನುಷ್ಯ ಪುತ್ರರ ಮುಂದೆ ನಿನ್ನಲ್ಲಿ ಭರವಸೆ ಇಟ್ಟವರಿಗೋಸ್ಕರ ನೀನು ಇಟ್ಟಿರುವ ಒಳ್ಳೇತನವು ಎಷ್ಟೋ ದೊಡ್ಡದು.
ನಿನ್ನ ಆಲೋಚನೆಯಂತೆ ನನ್ನನ್ನು ನಡಿಸಿದ ತರು ವಾಯ ಮಹಿಮೆಗೆ ನನ್ನನ್ನು ಅಂಗೀಕರಿಸುವಿ.
ನಾನು ಶ್ರಮೆಪಡು ವದಕ್ಕಿಂತ ಮುಂಚೆ ತಪ್ಪಿಹೋಗುತ್ತಿದ್ದೆನು; ಆದರೆ ಈಗ ನಿನ್ನ ವಾಕ್ಯವನ್ನು ಕೈಕೊಂಡಿದ್ದೇನೆ.
ನಿನ್ನ ನಿಯಮಗಳನ್ನು ಕಲಿಯುವ ಹಾಗೆ ನಾನು ಶ್ರಮೆಪಟ್ಟದ್ದು ನನಗೆ ಒಳ್ಳೇದು.
ರೌದ್ರವೇರಿದಾಗ ನನ್ನ ಮುಖವನ್ನು ನಿನಗೆ ಕ್ಷಣ ಮಾತ್ರವೇ ಮರೆಮಾಡಿಕೊಂಡೆನು; ಆದರೆ ನಿರಂತರ ವಾದ ದಯದಿಂದ ನಿನ್ನ ಮೇಲೆ ಕರುಣೆಯನ್ನು ಇಟ್ಟಿ ದ್ದೇನೆ ಎಂದು ನಿನ್ನ ವಿಮೋಚಕನಾದ ಕರ್ತನು ಹೇಳು ತ್ತಾನೆ.
ದೇವರೇ, ನಿನಗೋಸ್ಕರ ಕಾದುಕೊಳ್ಳುವವನಿಗೆ ನೀನು ಮಾಡು ವದನ್ನು, ಲೋಕದ ಉತ್ಪತ್ತಿಗೆ ಮುಂಚೆ ನಿನ್ನ ಹೊರ ತಾಗಿ ಯಾರೂ ಕೇಳಲಿಲ್ಲ ಇಲ್ಲವೆ ಯಾರ ಕಿವಿ ಯಲ್ಲಿಯೂ ಬೀಳಲಿಲ್ಲ, ಯಾರ ಕಣ್ಣು ನೋಡಲಿಲ್ಲ.
ಸಂತೋಷಿಸಿರಿ, ಅತಿ ಉಲ್ಲಾಸದಿಂದಿರ್ರಿ; ಯಾಕಂದರೆ ಪರಲೋಕದಲ್ಲಿ ನಿಮ್ಮ ಪ್ರತಿಫಲವು ದೊಡ್ಡದಾಗಿದೆ; ನಿಮಗಿಂತ ಮುಂಚೆ ಇದ್ದ ಪ್ರವಾದಿ ಗಳನ್ನು ಅವರು ಹೀಗೆಯೇ ಹಿಂಸಿಸಿದರಲ್ಲಾ.
ಆ ದಿನದಲ್ಲಿ ನೀವು ಸಂತೋಷ ಪಡಿರಿ. ಉಲ್ಲಾಸದಿಂದ ಕುಣಿದಾಡಿರಿ; ಯಾಕಂದರೆ ಇಗೋ, ಪರಲೋಕದಲ್ಲಿ ನಿಮ್ಮ ಬಹುಮಾನವು ದೊಡ್ಡದು; ಅವರ ಪಿತೃಗಳು ಪ್ರವಾದಿಗಳಿಗೆ ಅದೇ ರೀತಿಯಲ್ಲಿ ಮಾಡಿದರು.
ಆದರೂ ಎಲ್ಲಾ ಪಟ್ಟಣಗಳಲ್ಲಿ ನನಗೆ ಬೇಡಿಗಳೂ ಸಂಕಟಗಳೂ ಕಾದುಕೊಂಡಿವೆ ಎಂದು ಪವಿತ್ರಾತ್ಮನು ಸಾಕ್ಷಿ ಕೊಡುವದನ್ನು ಮಾತ್ರ ಬಲ್ಲೆನು.
ಯಾರು ಒಳ್ಳೆಯದನ್ನು ಮಾಡುವದರಲ್ಲಿ ತಾಳ್ಮೆಯಿಂದಿದ್ದು ಮಹಿಮೆ ಮಾನ ಮತ್ತು ನಿರ್ಲಯತ್ವವನ್ನು ಹುಡುಕು ತ್ತಾರೋ ಅವರಿಗೆ ನಿತ್ಯಜೀವವನ್ನೂ