Home Bibles 2 ಕೊರಿಂಥದವರಿಗೆ 4:2 · ಕನ್ನಡ ಬೈಬಲ್
2 ಕೊರಿಂಥದವರಿಗೆ 4:2 · ಕನ್ನಡ ಬೈಬಲ್

ಆದರೆ ನಾಚಿಕೆಗೆ ಕಾರಣ ವಾಗುವ ಗುಪ್ತಕಾರ್ಯಗಳನ್ನು ನಾವು ಬಿಟ್ಟುಬಿಟ್ಟು ತಂತ್ರದಲ್ಲಿ ನಡೆಯದೆಯೂ ವಂಚನೆಯಿಂದ ದೇವರ ವಾಕ್ಯವನ್ನು ಕೆಡಿಸದೆಯೂ ಸತ್ಯವನ್ನು ಪರಿಷ್ಕಾರವಾಗಿ ಬೋಧಿಸುತ್ತಾ ನಾವು ಯೋಗ್ಯರೆಂದು ಪ್ರತಿ ಮನುಷ್ಯನ ಮನಸ್ಸಾಕ್ಷಿಯು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನ

Cross references

1 ಅರಸುಗಳು 18:34

ಎರಡನೇ ಸಾರಿ ಹೊಯ್ಯಿರಿ ಅಂದನು. ಮೂರನೇ ಸಾರಿ ಹೊಯ್ಯಿರಿ ಅಂದನು; ಮೂರನೇ ಸಾರಿಯೂ ಹೊಯ್ದರು.

ರೋಮಾಪುರದವರಿಗೆ 1:16

ಕ್ರಿಸ್ತನ ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೆಪಡುವದಿಲ್ಲ; ಅದು ಮೊದಲು ಯೆಹೂದ್ಯ ರಿಗೂ ತರುವಾಯ ಗ್ರೀಕರಿಗೂ ಅಂತೂ ನಂಬುವ ಪ್ರತಿಯೊಬ್ಬನಿಗೂ ರಕ್ಷಣೆಗಾಗಿ ದೇವರ ಶಕ್ತಿಯಾಗಿದೆ.

ರೋಮಾಪುರದವರಿಗೆ 6:21

ನೀವು ಆಗ ಮಾಡಿ ದವುಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯುಂಟಷ್ಟೆ; ಅವುಗಳ ಅಂತ್ಯವು ಮರಣವೇ.

1 ಕೊರಿಂಥದವರಿಗೆ 4:5

ಆದದರಿಂದ ಕಾಲಕ್ಕೆ ಮೊದಲು ಕರ್ತನು ಬರುವತನಕ ಯಾವದನ್ನೂ ಕುರಿತು ತೀರ್ಪು ಮಾಡಬೇಡಿರಿ; ಆತನು ಕತ್ತಲೆಯ ಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು; ಹೃದಯದ ಯೋಚನೆಗಳನ್ನು ಪ್ರತ್ಯಕ್ಷಪಡಿಸುವನು; ಆಗ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವ ರಿಂದ ಬರುವದು.

2 ಕೊರಿಂಥದವರಿಗೆ 1:12

ನಾವು ಮನುಷ್ಯಜ್ಞಾನದಿಂದಲ್ಲ, ಆದರೆ ಸರಳತೆಯಿಂದಲೂ ಭಕ್ತಿಯ ನಿಷ್ಕಪಟದಿಂದಲೂ ದೇವರ ಕೃಪೆಯಿಂದಲೂ ಲೋಕದಲ್ಲಿ ಮತ್ತು ಇನ್ನೂ ಹೆಚ್ಚಾಗಿ ನಿಮ್ಮ ವಿಷಯದಲ್ಲಿ ನಡಕೊಂಡೆವೆಂದು ನಮ್ಮ ಮನಸ್ಸಿನ ಸಾಕ್ಷಿಯೇ ನಮ ಗಿರುವ ಸಂತೋಷವಾಗಿದೆ.

2 ಕೊರಿಂಥದವರಿಗೆ 2:17

ನಾವು ದೇವರ ವಾಕ್ಯವನ್ನು ಕಲಬೆರಿಕೆ ಮಾಡುವವರಾದ ಹೆಚ್ಚು ಪಾಲಿನ ಜನರ ಹಾಗಿರದೆ ನಿಷ್ಕಪಟಿಗಳಾಗಿ ದೇವರಿಂದ ಹೊಂದಿದ ವರಿಗೆ ತಕ್ಕ ಹಾಗೆ ಕ್ರಿಸ್ತನಲ್ಲಿದ್ದುಕೊಂಡು ದೇವರ ಸಮಕ್ಷಮದಲ್ಲಿಯೇ ಮಾತನಾಡುತ್ತೇವೆ.

2 ಕೊರಿಂಥದವರಿಗೆ 5:11

ನಾವು ಕರ್ತನ ಭಯವನ್ನು ಅರಿತವರಾದ ಕಾರಣ ಮನುಷ್ಯರನ್ನು ಒಡಂಬಡಿಸುತ್ತೇವೆ; ಆದರೆ ನಾವು ದೇವರಿಗೂ ನಿಮ್ಮ ಮನಸ್ಸಾಕ್ಷಿಗಳಿಗೂ ತೋರಿ ಬಂದಿದ್ದೇವೆಂದು ನಾನು ಭರವಸವುಳ್ಳವನಾಗಿದ್ದೇನೆ.

2 ಕೊರಿಂಥದವರಿಗೆ 6:4

ಆದರೆ ಎಲ್ಲಾ ಸಂಗತಿಗಳಲ್ಲಿ ಹೆಚ್ಚು ತಾಳ್ಮೆಯಲ್ಲಿಯೂ ಸಂಕಟ ಗಳಲ್ಲಿಯೂ ಕೊರತೆಗಳಲ್ಲಿಯೂ ಇಕ್ಕಟ್ಟುಗಳಲ್ಲಿಯೂ

2 ಕೊರಿಂಥದವರಿಗೆ 7:14

ಯಾಕಂದರೆ ನಾನು ಅವನ ಮುಂದೆ ನಿಮ್ಮನ್ನು ಹೊಗಳಿದ್ದರಲ್ಲಿ ನಾಚಿಕೆಪಡಬೇಕಾಗಿ ಬರಲಿಲ್ಲ. ನಾವು ನಿಮಗೆ ಹೇಳಿದವುಗಳೆಲ್ಲಾ ಹೇಗೆ ಸತ್ಯವಾಗಿದ್ದವೋ ಹಾಗೆಯೇ ನಾವು ತೀತನ ಮುಂದೆ ಆಡಿದ ಹೊಗಳಿಕೆಯೂ ಸತ್ಯವೆಂದು ಕಂಡುಬಂತು.

2 ಕೊರಿಂಥದವರಿಗೆ 11:3

ಆದರೆ ಹವ್ವಳು ಸರ್ಪದ ಕುಯುಕ್ತಿಗೆ ಒಳಬಿದ್ದು ಹೇಗೆ ಮೋಸ ಹೋದಳೋ ಹಾಗೆಯೇ ನಿಮ್ಮ ಮನಸ್ಸುಗಳು ಕ್ರಿಸ್ತನ ವಿಷಯದಲ್ಲಿರಬೇಕಾದ ಸರಳತೆಯನ್ನು ಬಿಟ್ಟು ಕೆಟ್ಟು ಹೋದೀತೆಂದು ನನಗೆ ಭಯವುಂಟು.

2 ಕೊರಿಂಥದವರಿಗೆ 11:6

ನಾನು ಮಾತನಾಡು ವದರಲ್ಲಿ ಒರಟಾಗಿದ್ದರೂ ಜ್ಞಾನದಲ್ಲಿ ಅಲ್ಲ, ಎಲ್ಲವು ಗಳಲ್ಲಿ ನಿಮ್ಮ ಮಧ್ಯದಲ್ಲಿ ನಾವು ನಮ್ಮನ್ನು ತೋರ್ಪಡಿಸಿದ್ದೇವೆ.

2 ಕೊರಿಂಥದವರಿಗೆ 11:13

ಅಂಥವರು ಸುಳ್ಳು ಅಪೊಸ್ತಲರೂ ಮೋಸಗಾರರಾದ ಕೆಲಸದವರೂ ಕ್ರಿಸ್ತನ ಅಪೊಸ್ತಲರಂತೆ ಕಾಣಿಸಿಕೊಳ್ಳು ವದಕ್ಕೆ ತಮ್ಮನ್ನು ತಾವೇ ಮಾರ್ಪಡಿಸಿಕೊಳ್ಳುವವರೂ ಆಗಿದ್ದಾರೆ.

ಎಫೆಸದವರಿಗೆ 4:14

ನಾವು ಇನ್ನು ಮೇಲೆ ಹೊಂಚು ಹಾಕುವವರ ವಂಚನೆಗೂ ಮನುಷ್ಯರ ಕಪಟದಿಂದಲೂ ಮೋಸದ ಉಪಾಯ ಮಾಡುವ ತಂತ್ರದಿಂದಲೂ ಬೋಧನೆಯ ಪ್ರತಿಯೊಂದು ಗಾಳಿ ಯಿಂದಲೂ ಬಡಿಯಲ್ಪಟ್ಟು ಅತ್ತಿತ್ತ ನೂಕಾಡಲ್ಪಡುವ ಬಾಲಕರಂತೆ ಇರಬಾರದು.

ಎಫೆಸದವರಿಗೆ 5:12

ಅವರು ರಹಸ್ಯವಾಗಿ ನಡಿಸುವ ಕೆಲಸ ಗಳನ್ನು ಕುರಿತು ಮಾತನಾಡುವದಾದರೂ ನಾಚಿಕೆಗೆ ಕಾರಣವಾಗಿದೆ.

1 ತೆಸಲೋನಿಕದವರಿಗೆ 2:3

ಯಾಕಂದರೆ ನಮ್ಮ ಬೋಧನೆಯು ಮೋಸ ವಲ್ಲ, ಅಶುದ್ಧವಲ್ಲ, ವಂಚನೆಯಲ್ಲ;

Interlinear

Choose Theme