Home Bibles 2 ಕೊರಿಂಥದವರಿಗೆ 8:2 · ಕನ್ನಡ ಬೈಬಲ್
2 ಕೊರಿಂಥದವರಿಗೆ 8:2 · ಕನ್ನಡ ಬೈಬಲ್

ಆ ಸಭೆಗಳವರು ಬಹಳ ಹಿಂಸೆಯನ್ನು ತಾಳುವವರಾದರೂ ವಿಪರೀತ ವಾದ ಬಡತನದಲ್ಲಿದ್ದರೂ ಬಹು ಆನಂದದಿಂದ ತುಂಬಿದವರಾಗಿ ಅತ್ಯಂತ ಔದಾರ್ಯವುಳ್ಳವರಾದರು.

Cross references

ದ್ವಿತೀಯೋಪದೇಶಕಾಂಡ 15:4

ಬಡತನವು ನಿನ್ನ ಮಧ್ಯದಲ್ಲಿರದ ಹಾಗೆ; ನಿನ್ನ ದೇವರಾದ ಕರ್ತನು ನಿನಗೆ ಸ್ವಾಧೀನಪಡಿಸಿಕೊಳ್ಳು ವದಕ್ಕೆ ಸ್ವಾಸ್ತ್ಯವಾಗಿ ಕೊಡುವ ದೇಶದಲ್ಲಿ ಕರ್ತನು ನಿನ್ನನ್ನು ಬಹಳವಾಗಿ ಆಶೀರ್ವದಿಸುವನು.

ನೆಹೆಮ್ಯ 8:10

ಇದಲ್ಲದೆ ಅವನು ಅವರಿಗೆ--ನೀವು ಹೋಗಿ ಕೊಬ್ಬಿದ್ದನ್ನು ತಿಂದು ಸಿಹಿ ಯಾದದ್ದನ್ನು ಕುಡಿದು ಯಾರಿಗೆ ಸಿದ್ಧಮಾಡಿದ್ದು ಏನೂ ಇಲ್ಲವೋ ಅವರಿಗೆ ಭಾಗಗಳನ್ನು ಕಳುಹಿಸಿ ಕೊಡಿರಿ. ಯಾಕಂದರೆ ಈ ದಿನವು ನಮ್ಮ ಕರ್ತನಿಗೆ ಪರಿಶುದ್ಧ ವಾಗಿದೆ. ಕರ್ತನ ಆನಂದವು ನಿಮ್ಮ ಬಲವಾಗಿರು ವದರಿಂದ ನೀವು ವ್ಯಥೆಪಡಬೇಡಿರಿ.

ಸಾಮೇತಿಗಳು 11:25

ಉದಾರಿಯು ಪುಷ್ಠನಾಗು ವನು; ನೀರು ಹಾಯಿಸುವವನಿಗೆ ನೀರು ದೊರೆಯು ವದು.

ಯೆಶಾಯ 32:5

ಇನ್ನು ಮೇಲೆ ನೀಚ ಮನುಷ್ಯನು ಘನವಂತನೆನಿಸಿಕೊಳ್ಳನು. ಇಲ್ಲವೆ ಜಿಪುಣನು ಉದಾರ ನೆಂದು ಹೇಳಲಾಗದು.

ಮಾರ್ಕ 12:42

ಆಗ ಅಲ್ಲಿ ಒಬ್ಬ ಬಡ ವಿಧವೆಯು ಬಂದು ಒಂದು ಫಾರ್ದಿಂಗದಷ್ಟು ಎರಡು ನಾಣ್ಯಗಳನ್ನು ಹಾಕಿದಳು.

ಲೂಕ 21:1

ಇದಲ್ಲದೆ ಐಶ್ವರ್ಯವಂತರು ತಮ್ಮ ಕಾಣಿಕೆಗಳನ್ನು ಬೊಕ್ಕಸದಲ್ಲಿ ಹಾಕುವದನ್ನು ಆತನು ಕಣ್ಣೆತ್ತಿ ನೋಡಿದನು.

ಅಪೋಸ್ತಲರ ಕೃತ್ಯಗಳು 2:45

ಅವರು ಚರಸ್ಥಿರಾಸ್ತಿಗಳನ್ನು ಮಾರಿ ಪ್ರತಿಯೊಬ್ಬನಿಗೆ ಅಗತ್ಯವಿದ್ದ ಹಾಗೆ ಹಂಚಿ ಕೊಟ್ಟರು.

ರೋಮಾಪುರದವರಿಗೆ 12:8

ಇಲ್ಲವೆ ಎಚ್ಚರಿಸುವವನು ಎಚ್ಚರಿಸುವದರಲ್ಲಿ ನಿರತನಾಗಿರಲಿ ಮತ್ತು ಕೊಡುವವನು ಯಥಾರ್ಥವಾಗಿ ಕೊಡಲಿ. ಆಳುವವನು ಶ್ರದ್ಧೆಯಿಂದ ಆಳಲಿ, ಕರುಣೆಯನ್ನು ತೋರಿಸುವವನು ಸಂತೋಷಪೂರ್ವಕವಾಗಿ ತೋರಿಸಲಿ.

2 ಕೊರಿಂಥದವರಿಗೆ 1:12

ನಾವು ಮನುಷ್ಯಜ್ಞಾನದಿಂದಲ್ಲ, ಆದರೆ ಸರಳತೆಯಿಂದಲೂ ಭಕ್ತಿಯ ನಿಷ್ಕಪಟದಿಂದಲೂ ದೇವರ ಕೃಪೆಯಿಂದಲೂ ಲೋಕದಲ್ಲಿ ಮತ್ತು ಇನ್ನೂ ಹೆಚ್ಚಾಗಿ ನಿಮ್ಮ ವಿಷಯದಲ್ಲಿ ನಡಕೊಂಡೆವೆಂದು ನಮ್ಮ ಮನಸ್ಸಿನ ಸಾಕ್ಷಿಯೇ ನಮ ಗಿರುವ ಸಂತೋಷವಾಗಿದೆ.

2 ಕೊರಿಂಥದವರಿಗೆ 6:10

ದುಃಖಪಡುವ ವರಾಗಿದ್ದರೂ ಯಾವಾಗಲೂ ಸಂತೋಷಪಡು ವವರೂ ಬಡವರಾಗಿದ್ದರೂ ಅನೇಕರಿಗೆ ಐಶ್ವರ್ಯ ವನ್ನುಂಟು ಮಾಡುವವರೂ ಏನೂ ಇಲ್ಲದವ ರಾಗಿದ್ದರೂ ಎಲ್ಲಾ ಇದ್ದವರೂ ಆಗಿದ್ದೇವೆ.

2 ಕೊರಿಂಥದವರಿಗೆ 9:11

ಹೀಗೆ ನೀವು ಎಲ್ಲಾ ವಿಷಯಗಳಲ್ಲಿ ಐಶ್ವರ್ಯವಂತರಾಗಿದ್ದು ಉದಾರವಾಗಿ ಕೊಡಲು ಶಕ್ತರಾಗುವಿರಿ; ಅದು ನಮ್ಮ ಮೂಲಕ ದೇವರಿಗೆ ಕೃತಜ್ಞತಾಸ್ತುತಿಯನ್ನುಂಟು ಮಾಡುವದು.

2 ಕೊರಿಂಥದವರಿಗೆ 9:13

ಈ ಸಹಾಯ ದಿಂದ ತೋರಿಬಂದ ನಿಮ್ಮ ಯೋಗ್ಯ ಭಾವವನ್ನು ಅವರು ನೋಡುವಾಗ ನೀವು ಕ್ರಿಸ್ತನ ಸುವಾರ್ತೆಗೆ ವಿಧೇಯರಾದದ್ದರಿಂದಲೂ ತಮಗೂ ಎಲ್ಲರಿಗೂ ನೀವು ಉದಾರವಾಗಿ ಸಹಾಯ ಮಾಡಿದ್ದರಿಂದಲೂ ದೇವರನ್ನು ಕೊಂಡಾಡುವರು.

1 ತೆಸಲೋನಿಕದವರಿಗೆ 1:6

ಇದಲ್ಲದೆ ನೀವು ಬಹಳ ಹಿಂಸೆಯನ್ನು ಅನುಭವಿಸಬೇಕಾಗಿದ್ದರೂ ಪವಿತ್ರಾತ್ಮನಿಂದುಂಟಾದ ಆನಂದದೊಡನೆ ವಾಕ್ಯವನ್ನು ಅಂಗೀಕರಿಸಿ ನಮ್ಮನ್ನೂ ಕರ್ತನನ್ನೂ ಅನುಸರಿಸುವವರಾದಿರಿ.

1 ತೆಸಲೋನಿಕದವರಿಗೆ 2:14

ಸಹೋ ದರರೇ, ನೀವು ಯೂದಾಯದಲ್ಲಿ ಕ್ರಿಸ್ತ ಯೇಸುವಿನ ಲ್ಲಿರುವ ದೇವರ ಸಭೆಗಳನ್ನು ಅನುಸರಿಸುವವರಾದಿರಿ. ಅವರು ಯೆಹೂದ್ಯರಿಂದ ಅನುಭವಿಸಿದಂಥ ಕಷ್ಟಗಳನ್ನು ನೀವೂ ನಿಮ್ಮ ಸ್ವದೇಶದವರಿಂದ ಅನುಭವಿಸಿದಿರಿ.

1 ತೆಸಲೋನಿಕದವರಿಗೆ 3:3

ಹೀಗಿರುವಲ್ಲಿ ಈ ಸಂಕಟಗಳಿಂದ ಒಬ್ಬರೂ ಚಂಚಲರಾಗಬೇಡಿರಿ; ಯಾಕಂದರೆ ಸಂಕಟ ಗಳನ್ನು ಅನುಭವಿಸುವದಕ್ಕಾಗಿ ನಾವು ನೇಮಿಸಲ್ಪಟ್ಟವ ರೆಂದು ನೀವೇ ಬಲ್ಲಿರಷ್ಟೆ.

ಯಾಕೋಬ 2:5

ನನ್ನ ಪ್ರಿಯ ಸಹೋದರರೇ, ಕೇಳಿರಿ; ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವ ರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯ ರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?

ಪ್ರಕಟನೆ 2:9

ನಾನು ನಿನ್ನ ಕೃತ್ಯಗಳನ್ನೂ ಸಂಕಟವನ್ನೂ ಬಡತನವನೂ ಬಲ್ಲೆನು; (ಆದರೂ ನೀನು ಐಶ್ವರ್ಯವಂತನೇ). ಇದಲ್ಲದೆ ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳು ವವರ ದೂಷಣೆಯನ್ನು ನಾನು ಬಲ್ಲೆನು; ಅವರು ಯೆಹೂದ್ಯರಲ್ಲ, ಸೈತಾನನ ಸಭಾಮಂದಿರದವರಾಗಿ ದ್ದಾರೆ.

Interlinear

Choose Theme