Home Bibles 2 ಕೊರಿಂಥದವರಿಗೆ 9:13 · ಕನ್ನಡ ಬೈಬಲ್
2 ಕೊರಿಂಥದವರಿಗೆ 9:13 · ಕನ್ನಡ ಬೈಬಲ್

ಈ ಸಹಾಯ ದಿಂದ ತೋರಿಬಂದ ನಿಮ್ಮ ಯೋಗ್ಯ ಭಾವವನ್ನು ಅವರು ನೋಡುವಾಗ ನೀವು ಕ್ರಿಸ್ತನ ಸುವಾರ್ತೆಗೆ ವಿಧೇಯರಾದದ್ದರಿಂದಲೂ ತಮಗೂ ಎಲ್ಲರಿಗೂ ನೀವು ಉದಾರವಾಗಿ ಸಹಾಯ ಮಾಡಿದ್ದರಿಂದಲೂ ದೇವರನ್ನು ಕೊಂಡಾಡುವರು.

Cross references

ರೂತ 2:19

ಆಗ ಅವಳ ಅತ್ತೆಯು ಆಕೆಗೆ ನೀನು ಈ ಹೊತ್ತು ಎಲ್ಲಿ ಹಕ್ಕಲಾದುಕೊಂಡಿ? ಎಲ್ಲಿ ಕೆಲಸ ಮಾಡಿದಿ? ನಿನ್ನನ್ನು ಪರಾಮರಿಸಿದವನು ಆಶೀರ್ವದಿಸಲ್ಪಡಲಿ ಅಂದಳು. ಅದಕ್ಕವಳು ತಾನು ಯಾವನ ಹತ್ತಿರ ಕೆಲಸ ಮಾಡಿ ದಳೋ ಅದನ್ನು ತನ್ನ ಅತ್ತೆಗೆ ತಿಳಿಸಿ ನಾನು ಈ ಹೊತ್ತು ಕೆಲಸಮಾಡಿದವನ ಹೆಸರು ಬೋವಜ ಎಂದು ಹೇಳಿದಳು.

ಕೀರ್ತನೆಗಳು 50:23

ಸ್ತೊತ್ರವನ್ನು ಅರ್ಪಿಸುವವನು ನನ್ನನ್ನು ಘನ ಪಡಿಸುತ್ತಾನೆ; ತನ್ನ ನಡವಳಿಕೆಯನ್ನು ಕ್ರಮಪಡಿಸಿ ಕೊಳ್ಳುವವನಿಗೆ ದೇವರ ರಕ್ಷಣೆಯನ್ನು ನಾನು ತೋರಿಸುವೆನು.

ಮತ್ತಾಯ 5:16

ಅದರಂತೆಯೇ ಜನರು ನಿಮ್ಮ ಒಳ್ಳೇ ಕ್ರಿಯೆಗಳನ್ನು ನೋಡಿ ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಮಹಿಮೆಪಡಿಸುವ ಹಾಗೆ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ.

ಮತ್ತಾಯ 9:8

ಆದರೆ ಜನರ ಸಮೂಹಗಳು ಅದನ್ನು ನೋಡಿ ಆಶ್ಚರ್ಯಪಟ್ಟು ಮನುಷ್ಯರಿಗೆ ಇಂಥ ಅಧಿಕಾರವನ್ನು ಕೊಟ್ಟ ದೇವರನ್ನು ಮಹಿಮೆಪಡಿಸಿದರು.

ಲೂಕ 6:46

ನನ್ನನ್ನು ನೀವು--ಕರ್ತನೇ, ಕರ್ತನೇ ಎಂದು ಕರೆದು ನಾನು ಹೇಳುವವುಗಳನ್ನು ನೀವು ಮಾಡದೆ ಇರುವದು ಯಾಕೆ?

ಯೋಹಾನ 15:8

ನೀವು ಬಹಳ ಫಲವನ್ನು ಕೊಡುವ ದರಿಂದ ನನ್ನ ತಂದೆಗೆ ಮಹಿಮೆ ಉಂಟಾಗುವದು; ಹೀಗೆ ನೀವು ನನ್ನ ಶಿಷ್ಯರಾಗುವಿರಿ.

ಅಪೋಸ್ತಲರ ಕೃತ್ಯಗಳು 4:21

ಹೀಗೆ ಜನರ ದೆಸೆಯಿಂದ ಅವರನ್ನು ಶಿಕ್ಷಿಸುವದಕ್ಕೆ ಯಾವ ವಿಧಾನವನ್ನೂ ಕಾಣದೆ ಇನ್ನಷ್ಟು ಬೆದರಿಸಿ ಬಿಟ್ಟುಬಿಟ್ಟರು; ನಡೆದ ಅದ್ಭುತಕಾರ್ಯಕ್ಕಾಗಿ ಎಲ್ಲರೂ ದೇವರನ್ನು ಮಹಿಮೆಪಡಿಸಿದರು.

ಅಪೋಸ್ತಲರ ಕೃತ್ಯಗಳು 11:18

ಅವರು ಇವುಗಳನ್ನು ಕೇಳಿ ಮೌನವಾಗಿದ್ದು ದೇವ ರನ್ನು ಕೊಂಡಾಡಿ--ಹಾಗಾದರೆ ಅನ್ಯ ಜನಾಂಗದವ ರಿಗೂ ಜೀವಕ್ಕಾಗಿ ಮಾನಸಾಂತರವನ್ನು ದೇವರು ದಯಪಾಲಿಸಿದ್ದಾನೆ ಎಂದು ಹೇಳಿದರು.

ಅಪೋಸ್ತಲರ ಕೃತ್ಯಗಳು 21:19

ಅವನು ಅವರನ್ನು ವಂದಿಸಿ ತನ್ನ ಸೇವೆಯ ಮೂಲಕ ದೇವರು ಪ್ರತ್ಯೇಕವಾಗಿ ಅನ್ಯ ಜನರಲ್ಲಿ ಎಂಥ ಕಾರ್ಯಗಳನ್ನು ಮಾಡಿಸಿದನೆಂದು ವಿವರಿಸಿದನು.

ರೋಮಾಪುರದವರಿಗೆ 10:16

ಆದರೆ ಅವರೆಲ್ಲರೂ ಸುವಾರ್ತೆಗೆ ವಿಧೇಯರಾಗಲಿಲ್ಲ. ಆದದರಿಂದ ಯೆಶಾಯನು--ಕರ್ತನೇ, ನಮ್ಮ ವಾರ್ತೆಯನ್ನು ಯಾರು ನಂಬಿದರು ಅನ್ನುತ್ತಾನೆ.

ರೋಮಾಪುರದವರಿಗೆ 16:26

ಅನಾದಿಯಿಂದ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಗ್ರಂಥಗಳ ಮೂಲಕ ಅನ್ಯಜನರೆಲ್ಲರಿಗೆ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವದಕ್ಕೋಸ್ಕರ ತಿಳಿಸ ಲ್ಪಟ್ಟಿದೆ.ಜ್ಞಾನಿಯಾದ ಒಬ್ಬನೇ ದೇವರಿಗೆ ಯೇಸು ಕ್ರಿಸ್ತನ ಮೂಲಕ ಎಂದೆಂದಿಗೂ ಮಹಿಮೆ ಉಂಟಾಗಲಿ. ಆಮೆನ್‌.

2 ಕೊರಿಂಥದವರಿಗೆ 2:12

ಇದಲ್ಲದೆ ಕ್ರಿಸ್ತನ ಸುವಾರ್ತೆಯನ್ನು ಸಾರುವ ದಕ್ಕಾಗಿ ನಾನು ತ್ರೋವಕ್ಕೆ ಬಂದಾಗ ಕರ್ತನಿಂದ ನನಗೆ ಬಾಗಲು ತೆರೆಯಲ್ಪಟ್ಟಿತು.

2 ಕೊರಿಂಥದವರಿಗೆ 8:4

ಪರಿಶುದ್ಧರಿಗೆ ದಾನ ಕೊಡುವ ಅನ್ಯೋನ್ಯತೆಯಲ್ಲಿ ತಾವು ಪಾಲುಗಾರ ರಾಗುವಂತೆ ನಮ್ಮನ್ನು ಬಹಳವಾಗಿ ಬೇಡಿಕೊಂಡರು.

2 ಕೊರಿಂಥದವರಿಗೆ 10:5

ನಾವು ಊಹೆಗಳನ್ನು ದೇವಜ್ಞಾನವನ್ನೂ ವಿರೋಧಿ ಸುವದಕ್ಕೆ ಏರಿಸಲ್ಪಟ್ಟಿರುವ ಉನ್ನತವಾದವುಗಳೆಲ್ಲವನ್ನೂ ಕೆಡವಿಹಾಕಿ ಎಲ್ಲಾ ಯೋಚನೆಗಳನ್ನು ಕ್ರಿಸ್ತನಿಗೆ ವಿಧೇಯವಾಗುವಂತೆ ಸೆರೆಹಿಡಿದು

ಗಲಾತ್ಯದವರಿಗೆ 1:24

ನನ್ನ ದೆಸೆಯಿಂದ ದೇವರನ್ನು ಕೊಂಡಾಡಿದರು.

1 ತಿಮೋಥೆಯ 6:12

ನಂಬಿಕೆಯ ಶ್ರೇಷ್ಠ ಹೋರಾಟವನ್ನು ಮಾಡು, ನಿತ್ಯಜೀವವನ್ನು ಹಿಡಿದುಕೋ; ಅದಕ್ಕಾಗಿಯೇ ನೀನು ಕರೆಯಲ್ಪಟ್ಟಿದ್ದೀ. ನೀನು ಅನೇಕ ಸಾಕ್ಷಿಗಳ ಮುಂದೆ ಒಳ್ಳೇ ಅರಿಕೆಯನ್ನು ಮಾಡಿದ್ದೀಯಲ್ಲಾ.

ಹೆಬ್ರಿಯರಿಗೆ 3:1

ಆದದರಿಂದ ಪರಿಶುದ್ಧರಾದ ಸಹೋ ದರರೇ, ಪರಲೋಕದ ಕರೆಯುವಿಕೆಯಲ್ಲಿ ಪಾಲುಗಾರರೇ, ನಾವು ಒಪ್ಪಿಕೊಂಡಿರುವ ಅಪೊ ಸ್ತಲನೂ ಮಹಾಯಾಜಕನೂ ಆಗಿರುವ ಕ್ರಿಸ್ತ ಯೇಸುವನ್ನು ಆಲೋಚಿಸಿರಿ.

ಹೆಬ್ರಿಯರಿಗೆ 4:14

ಆಕಾಶಗಳನ್ನು ದಾಟಿಹೋದ ದೇವಕುಮಾರ ನಾದ ಯೇಸುವೆಂಬ ಶ್ರೇಷ್ಠ ಮಹಾಯಾಜಕನು ನಮಗಿರುವದರಿಂದ ನಾವು ಮಾಡಿರುವ ಅರಿಕೆಯನ್ನು ಬಿಗಿಯಾಗಿ ಹಿಡಿಯೋಣ.

ಹೆಬ್ರಿಯರಿಗೆ 5:9

ಇದಲ್ಲದೆ ಸಿದ್ಧಿಗೆ ಬಂದು ತನಗೆ ವಿಧೇಯ ರಾಗಿರುವವರೆಲ್ಲರಿಗೂ ನಿರಂತರವಾದ ರಕ್ಷಣೆಗೆ ಆತನು ಕರ್ತನಾದನು.

ಹೆಬ್ರಿಯರಿಗೆ 10:23

ನಮ್ಮ ನಂಬಿಕೆಯಿಂದಾದ ಅರಿಕೆಯನ್ನು ನಿಶ್ಚಂಚಲ ದಿಂದ ಬಲವಾಗಿ ಹಿಡಿಯೋಣ. (ಯಾಕಂದರೆ ವಾಗ್ದಾನ ಮಾಡಿದಾತನು ನಂಬಿಗಸ್ತನು).

ಹೆಬ್ರಿಯರಿಗೆ 13:16

ಇದಲ್ಲದೆ ಒಳ್ಳೆಯದನ್ನು ಮಾಡುವದನ್ನೂ ಉದಾರವಾಗಿ ಕೊಡುವದನ್ನೂ ಮರೆಯಬೇಡಿರಿ; ಇವೇ ದೇವರಿಗೆ ಮೆಚ್ಚಿಕೆಯಾದ ಯಜ್ಞಗಳು.

1 ಪೇತ್ರ 2:9

ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.

1 ಪೇತ್ರ 4:11

ಒಬ್ಬನು ಬೋಧಿಸು ವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರಿಂದ ಶಕ್ತಿಯನ್ನು ಹೊಂದಿದವನಾಗಿ ಮಾಡಲಿ. ಇದರಿಂದ ಎಲ್ಲಾದರಲ್ಲಿ ಯೇಸು ಕ್ರಿಸ್ತನ ಮೂಲಕ ದೇವರಿಗೆ ಮಹಿಮೆ ಉಂಟಾಗುವದು. ಯೇಸು ಕ್ರಿಸ್ತನಿಗೆ ಸ್ತೋತ್ರವೂ ಆಧಿಪತ್ಯವೂ

Interlinear

Choose Theme