ಅವನು ಸಮಾರ್ಯಕ್ಕೆ ಬಂದ ತರುವಾಯ ಸಮಾ ರ್ಯದಲ್ಲಿ ಕರ್ತನು ಎಲೀಯನಿಗೆ ಹೇಳಿದ ವಾಕ್ಯದ ಪ್ರಕಾರ ಅವನನ್ನು ನಾಶಮಾಡುವ ಪರ್ಯಂತರ ಅಹಾಬನಿಗೆ ಉಳಿದವರೆಲ್ಲರನ್ನು ಸಂಹರಿಸಿದನು.
Cross references
ನೀನು ಕರ್ತನ ದೃಷ್ಟಿ ಯಲ್ಲಿ ಕೆಟ್ಟದ್ದನ್ನು ಮಾಡುವಂತೆ ನಿನ್ನನ್ನು ಮಾರಿಕೊಂಡ ದ್ದರಿಂದ ಇಗೋ, ನಾನು ನಿನ್ನ ಮೇಲೆ ಕೇಡನ್ನು ಬರಮಾಡಿ ನಿನ್ನ ಸಂತತಿಯನ್ನು ತೆಗೆದುಹಾಕಿ ಅಹಾಬ ನಿಗೆ ಒಬ್ಬ ಗಂಡಸಾದರೂ ಇಸ್ರಾಯೇಲಿನಲ್ಲಿ ಬಚ್ಚಿಡ ಲ್ಪಟ್ಟವನಾದರೂ ಉಳಿದವನಾದರೂ ಇರದ ಹಾಗೆ ತೆಗೆದುಬಿಡುವೆನು.
ಹಾಗೆಯೇ ಎಲೀ ಯನು ಹೇಳಿದ ಕರ್ತನ ವಾಕ್ಯದ ಪ್ರಕಾರವೇ ಅವನು ಸತ್ತು ಹೋದನು; ಅವನಿಗೆ ಮಗನು ಇಲ್ಲದ್ದರಿಂದ ಯೆಹೂದದ ಅರಸನಾದ ಯೆಹೋಷಾಫಾಟನ ಮಗ ನಾಗಿರುವ ಯೋರಾಮನ ಆಳ್ವಿಕೆಯ ಎರಡನೇ ವರುಷ ದಲ್ಲಿ ಯೋರಾಮನು ಅವನಿಗೆ ಬದಲಾಗಿ ಅರಸ ನಾದನು.ಅಹಜ್ಯನು ಮಾಡಿದ ಇತರ ಕ್ರಿಯೆಗಳು ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
ಅಹಾಬನ ಮನೆಯೆಲ್ಲಾ ನಾಶವಾಗಿ ಹೋಗುವದು. ಅಹಾಬನ ಸಂತಾನದ ಗಂಡಸರನ್ನೂ ಇಸ್ರಾಯೇಲಿ ನಲ್ಲಿ ಉಳಿದು ಬಚ್ಚಿಡಲ್ಪಟ್ಟವನನ್ನೂ ನಾನು ಕಡಿದು ಬಿಡುವೆನು.
ಆಗ ಯೇಹುವು ತನ್ನ ಅಧಿಪತಿ ಯಾದ ಬಿದ್ಕರನಿಗೆ--ನೀನು ಅವನನ್ನು ತೆಗೆದುಕೊಂಡು ಹೋಗಿ ಇಜ್ರೇಲ್ಯನಾದ ನಾಬೋತನ ಪಾಲಾಗಿರುವ ಹೊಲದಲ್ಲಿ ಹಾಕಿಬಿಡು.
ಆದರೆ ಇವರೆಲ್ಲರನ್ನು ಸಂಹರಿಸಿದವರಾರು? ಕರ್ತನು ಅಹಾ ಬನ ಮನೆಯನ್ನು ಕುರಿತು ಹೇಳಿದ ಕರ್ತನ ಮಾತು ಗಳಲ್ಲಿ ಒಂದೂ ವ್ಯರ್ಥವಾಗುವದಿಲ್ಲವೆಂದು ನೀವು ತಿಳಿದುಕೊಳ್ಳಿರಿ. ಕರ್ತನು ತನ್ನ ಸೇವಕನಾದ ಎಲೀಯನ ಮುಖಾಂತರ ಹೇಳಿದ್ದನ್ನು ನೆರವೇರಿಸಿದ್ದಾನೆ ಅಂದನು.
ಯೇಹುವು ಅಹಾಬನ ಮನೆಗೆ ನ್ಯಾಯತೀರಿಸುವಾಗ ಅವನು ಯೆಹೂದ್ಯರ ಪ್ರಧಾನರನ್ನೂ ಅಹಜ್ಯನನ್ನು ಸೇವಿಸು ತ್ತಿರುವ ಅಹಜ್ಯನ ಸಹೋದರರ ಮಕ್ಕಳನ್ನೂ ಹಿಡಿದು ಅವರನ್ನು ಕೊಂದುಹಾಕಿದನು.
ಅವನ ದಿವಸಗಳು ಸ್ವಲ್ಪವಾಗಿರಲಿ; ಅವನ ಉದ್ಯೋ ಗವನ್ನು ಬೇರೊಬ್ಬನು ತಕ್ಕೊಳ್ಳಲಿ.
ಇಗೋ, ಆ ದಿನವು ಬರುತ್ತದೆ; ಅದು ಒಲೆಯ ಹಾಗೆ ಉರಿಯುವದು; ಆಗ ಗರ್ವಿಷ್ಠರೆಲ್ಲರೂ ಹೌದು, ಕೆಟ್ಟದ್ದನ್ನು ಮಾಡುವವ ರೆಲ್ಲರೂ ಹುಲ್ಲಿನಂತಿರುವರು; ಬರುವ ಆ ದಿನವು ಅವರನ್ನು ಸುಟ್ಟುಬಿಡುವದು; ಬೇರನ್ನಾದರೂ ಕೊಂಬೆ ಯನ್ನಾದರೂ ಅವರಿಗೆ ಬಿಡದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.