Home Bibles 2 ಅರಸುಗಳು 11:15 · ಕನ್ನಡ ಬೈಬಲ್
2 ಅರಸುಗಳು 11:15 · ಕನ್ನಡ ಬೈಬಲ್

ಆದರೆ ಯಾಜಕನಾದ ಯೆಹೋಯಾದಾವನು ನೂರರ ಅಧಿಪತಿಗಳಿಗೂ ಸೈನ್ಯದ ಅಧಿಕಾರಿಗಳಿಗೂಸಾಲುಗಳ ಹೊರಗೆ ಅವಳನ್ನು ಹೊರಡಿಸಿರಿ ಎಂದೂ ಅವಳನ್ನು ಹಿಂಬಾಲಿಸುವವನು ಕತ್ತಿಯಿಂದ ಕೊಲ್ಲ ಲ್ಪಡಲಿ ಎಂದೂ ಹೇಳಿ ಆಜ್ಞಾಪಿಸಿದನು. ಯಾಕಂದರೆ ಅವಳು ಕರ್ತನ ಮಂದಿರದಲ್ಲಿ ಕೊಲೆಯಾಗಬಾರ ದೆಂದು ಯಾಜಕನು ಹೇಳಿದನು.

Cross references

ನಿರ್ಗಮಕಾಂಡ 21:14

ಒಬ್ಬನು ತನ್ನ ನೆರೆಯವನನ್ನು ಕೊಲ್ಲಬೇಕೆಂಬ ಉದ್ದೇಶ ಇಟ್ಟುಕೊಂಡು ಮೋಸತನದಿಂದ ಕೊಂದರೆ ಅವನು ಸಾಯುವಂತೆ ನೀನು ಅವನನ್ನು ನನ್ನ ಯಜ್ಞ ವೇದಿಯಿಂದ ತೆಗೆಯಬೇಕು.

2 ಅರಸುಗಳು 11:4

ಆದರೆ ಏಳನೇ ವರುಷದಲ್ಲಿ ಯೆಹೋಯಾದಾ ವನು ನೂರಕ್ಕೆ ಅಧಿಪತಿಯಾದವರನ್ನೂ ರಾಣುವೆಯ ಅಧಿಪತಿಗಳನ್ನೂ ಕಾವಲುಗಾರರ ಸಹಿತವಾಗಿ ಕರೆಯ ಕಳುಹಿಸಿ ತನ್ನ ಬಳಿಗೆ ಕರ್ತನ ಮನೆಗೆ ಕರಕೊಂಡು ಅವರ ಸಂಗಡ ಒಡಂಬಡಿಕೆಯನ್ನು ಮಾಡಿ ಕರ್ತನ ಮನೆಯಲ್ಲಿ ಅವರಿಂದ ಪ್ರಮಾಣ ತೆಗೆದುಕೊಂಡು ಅವರಿಗೆ ಅರಸನ ಮಗನನ್ನು ತೋರಿಸಿ

2 ಅರಸುಗಳು 11:9

ಹಾಗೆಯೇ ನೂರಕ್ಕೆ ಅಧಿಪತಿಯಾದವರು ಯಾಜಕನಾದ ಯೆಹೋಯಾದಾ ವನು ಆಜ್ಞಾಪಿಸಿದ ಎಲ್ಲಾದರ ಪ್ರಕಾರ ಮಾಡಿ ಪ್ರತಿ ಮನುಷ್ಯನು ಸಬ್ಬತ್‌ ದಿವಸದಲ್ಲಿ ಪ್ರವೇಶಿಸಬೇಕಾದ ತನ್ನ ಜನರನ್ನೂ ಸಬ್ಬತ್‌ ದಿವಸದಲ್ಲಿ ಹೊರಗೆ ಹೋಗಲು ಬೇಕಾದವರನ್ನೂ ಯಾಜಕನಾದ ಯೆಹೋ ಯಾದಾವನ ಬಳಿಗೆ ಕರಕೊಂಡು ಬಂದರು.

2 ದಿನವೃತ್ತಾಂತ 23:9

ಇದಲ್ಲದೆ ಯಾಜಕನಾದ ಯೆಹೋಯಾದನು ದೇವರ ಆಲಯದಲ್ಲಿದ್ದ ಅರಸ ನಾದ ದಾವೀದನ ಈಟಿಗಳನ್ನೂ ಗುರಾಣಿಗಳನ್ನೂ ಡಾಲುಗಳನ್ನೂ ಶತಾಧಿಪತಿಗಳಾದವರಿಗೆ ಕೊಟ್ಟು

2 ದಿನವೃತ್ತಾಂತ 23:14

ಆಗ ಯಾಜಕನಾದ ಯೆಹೋ ಯಾದನು ಸೈನ್ಯದ ಮೇಲೆ ಇರುವ ಶತಾಧಿಪತಿಗ ಳನ್ನು ಹೊರಗೆ ಕರತಂದು ಅವರಿಗೆ--ಅವಳನ್ನು ಸಾಲುಗಳ ಹೊರಗೆ ಹೊರಡಿಸಿರಿ, ಅವಳನ್ನು ಹಿಂಬಾಲಿಸುವವರನ್ನು ಕತ್ತಿಯಿಂದ ಕೊಂದುಹಾಕಿರಿ ಅಂದನು. ಯಾಕಂದರೆ ಕರ್ತನ ಆಲಯದಲ್ಲಿ ಅವ ಳನ್ನು ಕೊಲ್ಲಬೇಡಿರಿ ಎಂದು ಯಾಜಕನು ಹೇಳಿದನು.

ಯೆಹೆಜ್ಕೇಲ 9:7

ಆತನು ಅವರಿಗೆ--ಆಲಯವನ್ನು ಅಶುದ್ಧ ಮಾಡಿರಿ, ಹತರಾದವರಿಂದ ಅಂಗಳಗಳನ್ನು ತುಂಬಿಸಿ, ಹೊರಡಿರಿ ಎಂದು ಹೇಳಿದನು. ಅವರು ಹೊರಟು ನಗರದಲ್ಲಿದ್ದವರನ್ನು ಹತಮಾಡಿದರು.

ಯೆಹೆಜ್ಕೇಲ 21:14

ಆದದರಿಂದ ಮನುಷ್ಯ ಪುತ್ರನೇ ನೀನು ಚಪ್ಪಾಳೆ ತಟ್ಟಿ ಪ್ರವಾದಿಸು; ಹತ ರಾದವರ ಕತ್ತಿಯು ಮೂರನೆಯ ಸಾರಿಯೂ ಎರಡ ರಷ್ಟು ಮಾಡಲಿ; ಅದು ತಮ್ಮ ರಹಸ್ಯ ಕೋಣೆಗಳಲ್ಲಿ ಪ್ರವೇಶಿಸಿ ಮಹಾ ಪ್ರಜೆಗಳನ್ನು ಸಂಹರಿಸಿದ ಕತ್ತಿಯೇ.

Interlinear

Choose Theme