Home Bibles ☰ Books 2 ಅರಸುಗಳು 11:20 · ಕನ್ನಡ ಬೈಬಲ್
2 ಅರಸುಗಳು 11:20 · ಕನ್ನಡ ಬೈಬಲ್

ಆಗ ದೇಶದ ಜನರೆಲ್ಲರೂ ಸಂತೋಷಪಟ್ಟರು; ಪಟ್ಟಣವು ಶಾಂತವಾಗಿತ್ತು. ಆದರೆ ಅತಲ್ಯಳನ್ನು ಅರಮನೆಯ ಬಳಿಯಲ್ಲಿ ಕತ್ತಿಯಿಂದ ಕೊಂದುಹಾಕಿ ದರು.ಯೆಹೋವಾಷನು ಏಳು ವರುಷದವನಾ ಗಿದ್ದಾಗ ಆಳಲು ಆರಂಭಿಸಿದನು.

Cross references

ಆದಿಕಾಂಡ 9:6

ಎಲ್ಲಾ ಮೃಗಗಳಿಂದ ಅದನ್ನು ವಿಚಾರಿಸುವೆನು. ಮನುಷ್ಯನ ಪ್ರಾಣವನ್ನು ಮನುಷ್ಯನಿಂದಲೂ ಅವ ನವನ ಸಹೋದರನಿಂದಲೂ ವಿಚಾರಿಸುವೆನು. ಯಾವನು ಮನುಷ್ಯನ ರಕ್ತವನ್ನು ಸುರಿಸುವನೋ ಅವನ ರಕ್ತವು ಮನುಷ್ಯನಿಂದಲೇ ಸುರಿಸಲ್ಪಡುವದು. ಯಾಕಂದರೆ ದೇವರು ತನ್ನ ಸ್ವರೂಪದಲ್ಲಿ ಮನುಷ್ಯ ನನ್ನು ಉಂಟುಮಾಡಿದನು.

2 ಅರಸುಗಳು 11:14

ಅವಳು ದೃಷ್ಟಿಸಿ ನೋಡುವಾಗ ಇಗೋ, ಅರಸನು ಪದ್ಧತಿಯ ಪ್ರಕಾರ ಸ್ತಂಭದ ಬಳಿ ಯಲ್ಲಿ ನಿಂತಿದ್ದನು. ಪ್ರಧಾನರೂ ತುತೂರಿ ಊದು ವವರೂ ಅರಸನ ಬಳಿಯಲ್ಲಿ ನಿಂತಿದ್ದರು. ಇದಲ್ಲದೆ ದೇಶದ ಜನರೆಲ್ಲರೂ ಸಂತೋಷಪಟ್ಟು ತುತೂರಿಗಳನ್ನು ಊದಿದರು. ಆಗ ಅತಲ್ಯಳು ತನ್ನ ವಸ್ತ್ರಗಳನ್ನು ಹರಿದು ಕೊಂಡು--ದ್ರೋಹ, ದ್ರೋಹ ಎಂದು ಕೂಗಿದಳು.

2 ದಿನವೃತ್ತಾಂತ 23:21

ಅವರು ಅತಲ್ಯಳನ್ನು ಕತ್ತಿ ಯಿಂದ ಕೊಂದ ತರುವಾಯ ದೇಶದ ಜನರೆಲ್ಲರೂ ಸಂತೋಷಪಟ್ಟರು, ಪಟ್ಟಣವು ಶಾಂತವಾಯಿತು.

ಸಾಮೇತಿಗಳು 11:10

ನೀತಿವಂತರು ಚೆನ್ನಾಗಿದ್ದರೆ ಪಟ್ಟಣವು ಉಲ್ಲಾಸಿಸುತ್ತದೆ; ದುಷ್ಟರು ನಾಶವಾದರೆ ಆರ್ಭಟವಿರು ತ್ತದೆ.

ಸಾಮೇತಿಗಳು 29:2

ನೀತಿವಂತರು ಅಧಿಕಾರದಲ್ಲಿ ದ್ದಾಗ ಜನರು ಹರ್ಷಿಸುತ್ತಾರೆ; ದುಷ್ಟನು ಆಳಿದರೆ ಜನರು ಶೋಕಿಸುತ್ತಾರೆ.

Interlinear

Choose Theme