Home Bibles 2 ಅರಸುಗಳು 12:10 · ಕನ್ನಡ ಬೈಬಲ್
2 ಅರಸುಗಳು 12:10 · ಕನ್ನಡ ಬೈಬಲ್

ಪೆಟ್ಟಿಗೆ ಯಲ್ಲಿ ಬಹಳ ಹಣ ಉಂಟೆಂದು ಅವರು ನೋಡಿ ಅರಸನ ಲೇಖಕನೂ ಪ್ರಧಾನಯಾಜಕನೂ ಂದು ಕರ್ತನ ಮನೆಯಲ್ಲಿ ಸಿಕ್ಕಿದ ಹಣವನ್ನು ಎಣಿಸಿ ಚೀಲದಲ್ಲಿ ಹಾಕಿದರು.

Cross references

2 ಸಮುವೇಲ 8:17

ಅಹೀಟೂಬನ ಮಗನಾದ ಚಾದೋಕನೂ ಎಬ್ಯಾತಾರನ ಮಗನಾದ ಅಹೀಮೆಲೆಕನೂ ಯಾಜ ಕರಾಗಿದ್ದರು; ಸೆರಾಯನು ಮಂತ್ರಿಯಾಗಿದ್ದನು.ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯರ ಪೆಲೇತ್ಯರ ಮೇಲೆ ಯಜಮಾನನಾಗಿದ್ದನು. ಆದರೆ ದಾವೀದನ ಕುಮಾರರು ಮುಖ್ಯ ಪ್ರಭು ಗಳಾಗಿದ್ದರು.

2 ಸಮುವೇಲ 20:25

ಶೆವನು ಶಾಸ್ತ್ರಿಯಾಗಿದ್ದನು. ಚಾದೋಕನೂ ಎಬ್ಯಾತಾರನೂ ಯಾಜಕರಾಗಿದ್ದರು;ಯಾಯಾರಿನವನಾದ ಈರನೂ ದಾವೀದನ ಬಳಿಯಲ್ಲಿ ಮುಖ್ಯ ಅಧಿಪತಿಯಾಗಿದ್ದನು.

2 ಅರಸುಗಳು 5:23

ಆಗ ನಾಮಾನನು--ನೀನು ದಯಮಾಡಿ ಎರಡು ತಲಾಂತು ಗಳನ್ನು ತಕ್ಕೋ ಎಂದು ಹೇಳಿ ಅವನನ್ನು ಬಲವಂತ ಮಾಡಿದನು. ಹಾಗೆಯೇ ಎರಡು ತಲಾಂತು ಬೆಳ್ಳಿಯನ್ನು ಎರಡು ಚೀಲಗಳಲ್ಲಿ ಕಟ್ಟಿಸಿ ಅದರ ಸಂಗಡ ಎರಡು ದುಸ್ತು ಬಟ್ಟೆಗಳನ್ನು ಕೊಟ್ಟು ತನ್ನ ಸೇವಕರಲ್ಲಿ ಇಬ್ಬರ ಮೇಲೆ ಹೊರಿಸಿದನು; ಅವರು ಇವನ ಮುಂದೆ ಹೊತ್ತುಕೊಂಡು ಹೋದರು.

2 ಅರಸುಗಳು 19:2

ಇದಲ್ಲದೆ ಅವನು ಗೋಣೀತಟ್ಟನ್ನು ಮುಚ್ಚಿಕೊಂಡ ಮನೆವಾರ್ತೆಯವ ನಾದ ಎಲ್ಯಾಕೀಮನನ್ನೂ ಲೇಖಕನಾದ ಶೆಬ್ನನನ್ನೂ ಯಾಜಕರ ಹಿರಿಯರನ್ನೂ ಆಮೋಚನ ಮಗನಾದ ಪ್ರವಾದಿಯಾದ ಯೆಶಾಯನ ಬಳಿಗೆ ಕಳುಹಿಸಿದನು.

2 ಅರಸುಗಳು 22:3

ಅರಸನಾದ ಯೋಷೀಯನ ಆಳ್ವಿಕೆಯ ಹದಿನೆಂಟನೇ ವರುಷದಲ್ಲಿ ಏನಾಯಿತಂದರೆ, ಅರಸನು ಲೇಖಕನಾದ ಮೆಷುಲ್ಲಾ ಮನ ಮಗನಾದ ಅಚಲ್ಯನ ಮಗನಾದ ಶಾಫಾನನನ್ನು ಕರ್ತನ ಮನೆಗೆ ಕಳುಹಿಸಿ ಹೇಳಿದ್ದೇನಂದರೆ--

2 ಅರಸುಗಳು 22:4

ನೀನು ಪ್ರಧಾನ ಯಾಜಕನಾದ ಹಿಲ್ಕೀಯನ ಬಳಿಗೆ ಹೋಗು, ಅವನು ಕರ್ತನ ಮನೆಯಲ್ಲಿ ದ್ವಾರಪಾಲಕರು ಜನರಿಂದ ತೆಗೆದುಕೊಂಡು ಕೂಡಿಸಿದ ಹಣವನ್ನು ಲೆಕ್ಕ ಮಾಡಲಿ.

2 ಅರಸುಗಳು 22:12

ಇದಲ್ಲದೆ ಅರಸನು ಯಾಜಕನಾದ ಹಿಲ್ಕೀಯನಿಗೂ ಶಾಫಾನನ ಮಗನಾದ ಅಹೀಕಾಮ್‌ನಿಗೂ ವಿಾಕಾ ಯನ ಮಗನಾದ ಅಕ್ಬೋರ್‌ನಿಗೂ ಲೇಖಕನಾದ ಶಾಫಾನನಿಗೂ ಅರಸನ ಸೇವಕನಾದ ಅಸಾಯನಿಗೂ ಆಜ್ಞಾಪಿಸಿ ಹೇಳಿದ್ದೇನಂದರೆ--

2 ಅರಸುಗಳು 23:4

ಅರ ಸನು--ಬಾಳನಿಗೋಸ್ಕರವೂ ವಿಗ್ರಹದ ತೋಪುಗಳಿ ಗೋಸ್ಕರವೂ ಆಕಾಶದ ಸೈನ್ಯಕ್ಕೋಸ್ಕರವೂ ಮಾಡ ಲ್ಪಟ್ಟಿದ್ದ ಎಲ್ಲಾ ಪಾತ್ರೆಗಳನ್ನು ಕರ್ತನ ಆಲಯದಿಂದ ಹೊರಗೆ ತಕ್ಕೊಂಡು ಬರಬೇಕೆಂದು ಪ್ರಧಾನ ಯಾಜಕ ನಾದ ಹಿಲ್ಕೀಯನಿಗೂ ಎರಡನೇ ತರಗತಿಯ ಯಾಜಕ ರಿಗೂ ದ್ವಾರಪಾಲಕರಿಗೂ ಆಜ್ಞಾಪಿಸಿದನು ಮತ್ತು ಅವನು ಅವುಗಳನ್ನು ಯೆರೂಸಲೇಮಿನ ಹೊರಗೆ ಕಿದ್ರೋನ್‌ ಹೊಲಗಳಲ್ಲಿ ಸುಡಿಸಿ ಅವುಗಳ ಬೂದಿ ಯನ್ನು ಬೇತೇಲಿಗೆ ತರುವಂತೆ ಮಾಡಿದನು.

1 ದಿನವೃತ್ತಾಂತ 9:19

ಇದಲ್ಲದೆ ಕೋರಹನ ಮಗನಾದ ಎಬ್ಯಾಸಾಫನ ಮಗನಾದ ಕೋರೇಯ ಮಗನಾದ ಶಲ್ಲೂಮನೂ ಅವನ ತಂದೆಯ ಮನೆಯವರಾಗಿರುವ ತನ್ನ ಸಹೋ ದರರಾದ ಕೋರಹಿಯರೂ ಸೇವೆಯ ಕೆಲಸದ ಮೇಲೆ ಇದ್ದು ಗುಡಾರದ ಬಾಗಲಿನ ಕಾವಲುಗಾರರಾಗಿದ್ದರು. ಅವರ ಪಿತೃಗಳು ಕರ್ತನ ಸೈನ್ಯದ ಮೇಲೆ ಇದ್ದು ಪ್ರವೇಶ ಸ್ಥಳದ ಕಾವಲಿನವರಾಗಿದ್ದರು.

ಎಜ್ರಾ 3:7

ಇದಲ್ಲದೆ ಅವರು ಕಲ್ಲುಕುಟಿಕರಿಗೂ ಬಡಗಿಯ ವರಿಗೂ ಹಣವನ್ನು ಕೊಟ್ಟು ಪಾರಸಿಯ ಅರಸನಾದ ಕೋರೆಷನಿಂದ ಹೊಂದಿದ ಅಪ್ಪಣೆಯ ಪ್ರಕಾರ ಲೆಬನೋನಿನಿಂದ ಯೊಪ್ಪದ ಸಮುದ್ರದ ಮಟ್ಟಿಗೂ ದೇವದಾರು ಮರಗಳನ್ನು ತಕ್ಕೊಂಡು ಬರಲು ಚೀದೋ ನ್ಯರಿಗೂ ತೂರ್ಯರಿಗೂ ಅನ್ನ ಪಾನಗಳನ್ನೂ ಎಣ್ಣೆ ಯನ್ನೂ ಕೊಟ್ಟನು.

Interlinear

Choose Theme