ಆದರೆ ಅವನ ಸೇವಕರು ಎದ್ದು ಒಳಸಂಚುಮಾಡಿ ಸಿಲ್ಲಾಗೆ ಇಳಿದು ಹೋಗುವ ಮಾರ್ಗವಾದ ಮಿಲ್ಲೋವು ಎಂಬ ಮನೆಯಲ್ಲಿ ಯೆಹೋವಾಷನನ್ನು ಕೊಂದುಹಾಕಿದರು.ಅವನ ಸೇವಕರಾದ ಶಿಮೆಯಾತನ ಮಗನಾದ ಯೊಜಾಕಾರನೂ, ಶೋಮೇರನ ಮಗನಾದ ಯೆಹೋ ಜಾಬಾದನೂ ಅವನನ್ನು ಹೊಡೆದದ್ದರಿಂದ ಅವನು ಸತ್ತುಹೋದನು. ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಅವನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು; ಅವನ ಮಗನಾದ ಅಮಚ್ಯನು ಅವನಿಗೆ ಬದಲಾಗಿ ಅರಸನಾದನು.
Cross references
ಶೆಕೆಮಿನ ಜನರೆಲ್ಲರೂ ಮಿಲ್ಲೋನಿನ ಮನೆಯವರೆಲ್ಲರೂ ಕೂಡಿಕೊಂಡು ಹೋಗಿ ಶೆಕೆಮಿನ ಬೈಲಲ್ಲಿ ಇರುವ ಸ್ತಂಭದ ಬಳಿಯಲ್ಲಿ ಅಬೀಮೆಲೆಕನನ್ನು ಅರಸನನ್ನಾಗಿ ನೇಮಿಸಿದರು.
ದಾವೀದನು ಕೋಟೆಯಲ್ಲಿ ವಾಸಮಾಡಿ ಅದಕ್ಕೆ ದಾವೀದನ ಪಟ್ಟಣವೆಂದು ಹೆಸರಿಟ್ಟನು. ಇದಲ್ಲದೆ ದಾವೀದನು ಮಿಲ್ಲೋವಿನ ಸುತ್ತಲಾಗಿ ಪ್ರಾರಂಭಿಸಿ ಒಳಪಾರ್ಶ್ವದಲ್ಲಿ ಇರುವದನ್ನು ಕಟ್ಟಿಸಿದನು.
ಅವನು ಅರಸನಿಗೆ ವಿರೋಧವಾಗಿ ತನ್ನ ಕೈಯನ್ನು ಎತ್ತಿದ ಕಾರಣವೇನಂದರೆ, ಸೊಲೊಮೋನನು ಮಿಲ್ಲೋಕೋಟೆಯನ್ನು ಕಟ್ಟಿಸಿ ತನ್ನ ತಂದೆಯಾದ ದಾವೀದನ ಪಟ್ಟಣದಲ್ಲಿ ಬಿದ್ದುಹೋದವುಗಳನ್ನು ಕಟ್ಟಿ ಸುತ್ತಿರುವಾಗ
ಆದರೆ ರೆಹಬ್ಬಾಮನ ಮಿಕ್ಕಾದ ಕ್ರಿಯೆಗಳೂ ಅವನು ಮಾಡಿದ ಸಮಸ್ತವೂ ಯೆಹೂದ ಅರಸುಗಳ ವೃತ್ತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
ಯೆಹೋರಾಮನ ಇತರ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ ಯೆಹೂದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪ ಡಲಿಲ್ಲವೋ?
ರಾಜ್ಯವು ತನ್ನ ಕೈಯಲ್ಲಿ ಸ್ಥಿರಪಟ್ಟ ತರುವಾಯ ಅರಸ ನಾಗಿದ್ದ ತನ್ನ ತಂದೆಯನ್ನು ಕೊಂದ ತನ್ನ ಸೇವಕರನ್ನು ಕೊಂದುಹಾಕಿದನು.
ಅವರು ತಮ್ಮ ಪಿತೃಗಳ ದೇವರಾದ ಕರ್ತನನ್ನು ಬಿಟ್ಟದ್ದರಿಂದ ಅರಾಮ್ಯರು ಅಲ್ಪಜನವಾದ ಸೈನ್ಯದ ಸಂಗಡ ಬಂದಾಗ ಕರ್ತನು ಬಹು ಅಧಿಕ ವಾದ ಸೈನ್ಯವನ್ನು ಅವರ ಕೈಯಲ್ಲಿ ಒಪ್ಪಿಸಿದನು. ಹೀಗೆ ಅವರು ಯೆಹೋವಾಷನಿಗೆ ವಿರೋಧವಾಗಿ ನ್ಯಾಯ ತೀರ್ವಿಕೆ ಮಾಡಿದರು. ಅವನು ಕಠಿಣ ರೋಗದಲ್ಲಿ ಬಿದ್ದಿರುವಾಗ ಅವನನ್ನು ಬಿಟ್ಟುಹೋದರು.
ಆದರೆ ಅಮಚ್ಯನು ಕರ್ತನ ಕಡೆಯಿಂದ ತೊಲಗಿಹೋದ ತರುವಾಯ ಅವರು ಯೆರೂಸಲೇಮಿ ನಲ್ಲಿ ಅವನ ಮೇಲೆ ಒಳಸಂಚು ಮಾಡಿದರು. ಆದ ಕಾರಣ ಅವನು ಲಾಕೀಷಿಗೆ ಓಡಿಹೋದನು; ಆದರೆ ಅವರು ಅವನ ಹಿಂದೆ ಲಾಕೀಷಿಗೆ ಕಳುಹಿಸಿ ಅಲ್ಲಿ ಅವನನ್ನು ಕೊಂದುಹಾಕಿದರು.ಅವರು ಅವನನ್ನು ಕುದುರೆಗಳ ಮೇಲೆ ತಕ್ಕೊಂಡು ಬಂದು ಯೆಹೂದದ ಪಟ್ಟಣದಲ್ಲಿ ಅವನ ಪಿತೃಗಳ ಬಳಿಯಲ್ಲಿ ಅವನನ್ನು ಹೂಣಿಟ್ಟರು.
ಆದದರಿಂದ ಅವನ ಸೇವಕರು ಅವನ ಮೇಲೆ ಒಳಸಂಚು ಮಾಡಿ ಅವನ ಸ್ವಂತ ಮನೆಯಲ್ಲಿ ಅವನನ್ನು ಕೊಂದುಹಾಕಿದರು.ಆದರೆ ದೇಶದ ಜನರು ಅರಸನಾದ ಆಮೋನನ ಮೇಲೆ ಒಳಸಂಚು ಮಾಡಿದವರನ್ನೆಲ್ಲಾ ಕೊಂದುಹಾಕಿ ಅವನ ಮಗನಾದ ಯೋಷೀಯನನ್ನು ಅವನಿಗೆ ಬದ ಲಾಗಿ ಅರಸನನ್ನಾಗಿ ಮಾಡಿದರು.