Home Bibles 2 ಅರಸುಗಳು 13:14 · ಕನ್ನಡ ಬೈಬಲ್
2 ಅರಸುಗಳು 13:14 · ಕನ್ನಡ ಬೈಬಲ್

ಆಗ ಎಲೀಷನು ಮರಣಕರವಾದ ವ್ಯಾಧಿ ಯಿಂದ ಬಿದ್ದು ಸತ್ತಾಗ ಇಸ್ರಾಯೇಲಿನ ಅರಸನಾದ ಯೋವಾಷನು ಅವನ ಬಳಿಗೆ ಬಂದು ಅವನ ಮುಂದೆ ಬಿದ್ದು ಅತ್ತು ಅವನಿಗೆ--ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಾಯೇಲಿನ ರಥವೂ ಅದರ ಕುದುರೆ ರಾಹುತನೂ ಆದವನೇ ಅಂದನು.

Cross references

ಆದಿಕಾಂಡ 48:1

ಇವುಗಳಾದ ಮೇಲೆ ಒಬ್ಬನು ಯೋಸೇಫನಿಗೆ--ಇಗೋ, ನಿನ್ನ ತಂದೆಯು ಅಸ್ವಸ್ಥ ನಾಗಿದ್ದಾನೆ ಎಂದು ಹೇಳಿದನು. ಆಗ ಅವನು ತನ್ನ ಇಬ್ಬರು ಕುಮಾರರಾದ ಮನಸ್ಸೆಯನ್ನೂ ಎಫ್ರಾಯಾಮ ನನ್ನೂ ಕರಕೊಂಡು ಬಂದನು.

ಆದಿಕಾಂಡ 49:33

ಯಾಕೋ ಬನು ತನ್ನ ಕುಮಾರರಿಗೆ ಆಜ್ಞಾಪಿಸಿ ಮುಗಿಸಿದ ಮೇಲೆ ತನ್ನ ಕಾಲುಗಳನ್ನು ಮಂಚದ ಮೇಲೆ ಮುದುರಿಕೊಂಡನು. ಅವನು ಪ್ರಾಣ ಬಿಟ್ಟು ತನ್ನ ಜನರೊಂದಿಗೆ ಸೇರಿಸಲ್ಪಟ್ಟನು.

ಆದಿಕಾಂಡ 50:1

ಆಗ ಯೋಸೇಫನು ತನ್ನ ತಂದೆಯ ಮುಖದ ಮೇಲೆ ಬಿದ್ದು ಅತ್ತು ಅವನಿಗೆ ಮುದ್ದಿಟ್ಟನು.

2 ಅರಸುಗಳು 2:12

ಎಲೀ ಷನು ಅದನ್ನು ನೋಡಿ--ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಾಯೇಲಿನ ರಥವೇ, ಅದರ ಕುದುರೆ ರಾಹುತರಾಗಿದ್ದವನೇ ಎಂದು ಕೂಗಿದನು. ಮತ್ತೆ ಅವ ನನ್ನು ಕಾಣಲಿಲ್ಲ. ಆಗ ಅವನು ತನ್ನ ವಸ್ತ್ರಗಳನ್ನು ತೆಗೆದು ಎರಡು ತುಂಡಾಗಿ ಹರಿದನು.

2 ಅರಸುಗಳು 6:21

ಇಸ್ರಾಯೇಲಿನ ಅರಸನು ಅವರನ್ನು ಕಂಡಾಗ ಎಲೀಷನಿಗೆ--ನನ್ನ ತಂದೆಯೇ, ನಾನು ಹೊಡೆಯಲೋ? ಹೊಡೆಯ ಲೋ? ಅಂದನು.

2 ಅರಸುಗಳು 20:1

ಆ ದಿವಸಗಳಲ್ಲಿ ಹಿಜ್ಕೀಯನು ಮರಣಕರರೋಗದಲ್ಲಿ ಬಿದ್ದಿದ್ದನು. ಆಗ ಆಮೋಚನ ಮಗನಾದ ಪ್ರವಾದಿಯಾದ ಯೆಶಾಯನು ಅವನ ಬಳಿಗೆ ಬಂದು ಅವನಿಗೆ--ನೀನು ನಿನ್ನ ಮನೆಯನ್ನು ವ್ಯವಸ್ಥೆ ಮಾಡಿಕೋ; ಯಾಕಂದರೆ ನೀನು ಬದುಕದೆ ಸಾಯುವಿ ಎಂದು ಕರ್ತನು ಹೇಳುತ್ತಾನೆ ಅಂದನು.

ಕೀರ್ತನೆಗಳು 12:1

ಕರ್ತನೇ, ಸಹಾಯಮಾಡು; ಯಾಕಂದರೆ ಭಕ್ತನು ಮುಗಿದು ಹೋಗುತ್ತಾನೆ; ನಂಬಿಗಸ್ತರು ಮನುಷ್ಯನ ಮಕ್ಕಳೊಳಗಿಂದ ಇಲ್ಲದೆ ಹೋಗುತ್ತಾರೆ.

ಸಾಮೇತಿಗಳು 11:11

ಯಥಾರ್ಥವಂತರ ಆಶೀರ್ವಾದದಿಂದ ಪಟ್ಟ ಣವು ಹೆಚ್ಚಿಸಲ್ಪಡುತ್ತದೆ. ದುಷ್ಟರ ಬಾಯಿಂದ ಅದು ಕೆಡವಲ್ಪಡುತ್ತದೆ.

ಯೆಶಾಯ 57:1

ನೀತಿವಂತನು ನಾಶವಾಗುವನು, ಅದನ್ನು ಯಾವ ಮನುಷ್ಯನು ಮನಸ್ಸಿಗೆ ತಾರನು. ಕರುಣೆಯುಳ್ಳ ಮನುಷ್ಯರು ತೆಗೆದುಹಾಕಲ್ಪಡುವರು, ನೀತಿವಂತನು ಮುಂದೆ ಬರುವ ಕೇಡಿನಿಂದ ಪಾರಾಗು ತ್ತಾನೆಂಬದನ್ನು ಯಾರೂ ಯೋಚಿಸರು.

ಯೆಹೆಜ್ಕೇಲ 14:14

ನೋಹ ದಾನಿಯೇಲ ಯೋಬ ಎಂಬ ಈ ಮೂವರು ಅದರಲ್ಲಿದ್ದರೂ ತಮ್ಮ ನೀತಿಯಿಂದ ತಮ್ಮ ಪ್ರಾಣಗಳನ್ನು ಉಳಿಸಿಕೊಳ್ಳುತ್ತಿದ್ದರು ಎಂದು ದೇವರಾದ ಕರ್ತನು ಹೇಳುತ್ತಾನೆ.

ಯೆಹೆಜ್ಕೇಲ 22:30

ಬೇಲಿ ಕಟ್ಟುವ ಮನುಷ್ಯನನ್ನು ದೇಶಕ್ಕೋಸ್ಕರ ನಾನು ಅದನು ನಾಶಮಾಡದ ಹಾಗೆ ಪೌಳಿಯ ಒಡಕಿನಲ್ಲಿ ನಿಲ್ಲತಕ್ಕ ವನನ್ನು ಹುಡುಕಿದೆನು, ಆದರೆ ಸಿಕ್ಕಲಿಲ್ಲ.ಆದದ ರಿಂದ ನನ್ನ ರೋಷವನ್ನು ಅವರ ಮೇಲೆ ಸುರಿಸಿದ್ದೇನೆ; ನನ್ನ ಸಿಟ್ಟಿನ ಬೆಂಕಿಯಿಂದ ಅವರನ್ನು ಸಂಹರಿಸಿದ್ದೇನೆ; ಅವರ ಮಾರ್ಗವನ್ನು ಅವರ ತಲೆಗಳ ಮೇಲೆ ಮುಯ್ಯಿ ತೀರಿಸಿದ್ದೇನೆಂದು ದೇವರಾದ ಕರ್ತನು ಹೇಳುತ್ತಾನೆ.

ಜೆಕರ್ಯ 1:5

ನಿಮ್ಮ ಪಿತೃ ಗಳೋ, ಅವರು ಎಲ್ಲಿ? ಪ್ರವಾದಿಗಳು, ಅವರು ನಿತ್ಯವಾಗಿ ಬದುಕುತ್ತಾರೋ?

ಮಾರ್ಕ 6:20

ಯಾಕಂದರೆ ಯೋಹಾನನು ನೀತಿವಂತನೂ ಪರಿಶುದ್ಧನೂ ಆದ ಮನುಷ್ಯನೆಂದು ಹೆರೋದನು ತಿಳಿದವನಾಗಿ ಅವನಿಗೆ ಭಯಪಟ್ಟು ಅವನನ್ನು ಕಾಪಾಡುತ್ತಿದ್ದನು; ಮತ್ತು ಅವನು ಹೇಳಿದ್ದನ್ನು ಕೇಳಿ ಆನೇಕ ಕಾರ್ಯಗಳನ್ನು ಮಾಡಿದ್ದಲ್ಲದೆ ಅವನು ಹೇಳುವದನ್ನು ಸಂತೋಷದಿಂದ ಕೇಳಿದನು.

ಯೋಹಾನ 11:3

ಆದದ ರಿಂದ ಅವನ ಸಹೋದರಿಯರು--ಕರ್ತನೇ, ಇಗೋ, ನೀನು ಪ್ರೀತಿಮಾಡುತ್ತಿರುವವನು ಅಸ್ವಸ್ಥನಾಗಿದ್ದಾನೆ ಎಂದು ಆತನಿಗೆ ಹೇಳಿಕಳುಹಿಸಿದರು.

ಅಪೋಸ್ತಲರ ಕೃತ್ಯಗಳು 13:36

ದಾವೀದನು ದೇವರ ಚಿತ್ತಕ್ಕನು ಸಾರವಾಗಿ ತನ್ನ ಸ್ವಂತ ಸಂತತಿಯವರಿಗೆ ಸೇವೆ ಮಾಡಿದ ನಂತರ ಅವನು ನಿದ್ರೆಹೋಗಿ ತನ್ನ ಪಿತೃಗಳ ಬಳಿಯಲಿ ಸೇರಿ ಕೊಳೆಯುವ ಅವಸ್ಥೆಯನ್ನು ನೋಡಿದನು.

ಫಿಲಿಪ್ಪಿಯವರಿಗೆ 2:26

ಅವನು ನಿಮ್ಮೆಲ್ಲರನ್ನು ಕುರಿತು ಹಂಬಲಿಸುತ್ತಿದ್ದನು, ತಾನು ಅಸ್ವಸ್ಥನಾಗಿದ್ದ ವರ್ತಮಾನವನ್ನು ನೀವು ಕೇಳಿದ್ದರಿಂದ ತುಂಬಾ ವ್ಯಸನಪಟ್ಟನು.

Interlinear

Choose Theme