Home Bibles 2 ಅರಸುಗಳು 13:20 · ಕನ್ನಡ ಬೈಬಲ್
2 ಅರಸುಗಳು 13:20 · ಕನ್ನಡ ಬೈಬಲ್

ಎಲೀಷನು ಸತ್ತ ತರುವಾಯ ಅವನನ್ನು ಹೂಣಿ ಟ್ಟರು. ವರುಷದ ಆರಂಭದಲ್ಲಿ ಮೋವಾಬ್ಯರ ದಂಡು ಗಳು ದೇಶದಲ್ಲಿ ಪ್ರವೇಶಿಸಿದವು.

Cross references

ಆದಿಕಾಂಡ 48:1

ಇವುಗಳಾದ ಮೇಲೆ ಒಬ್ಬನು ಯೋಸೇಫನಿಗೆ--ಇಗೋ, ನಿನ್ನ ತಂದೆಯು ಅಸ್ವಸ್ಥ ನಾಗಿದ್ದಾನೆ ಎಂದು ಹೇಳಿದನು. ಆಗ ಅವನು ತನ್ನ ಇಬ್ಬರು ಕುಮಾರರಾದ ಮನಸ್ಸೆಯನ್ನೂ ಎಫ್ರಾಯಾಮ ನನ್ನೂ ಕರಕೊಂಡು ಬಂದನು.

ಆದಿಕಾಂಡ 49:33

ಯಾಕೋ ಬನು ತನ್ನ ಕುಮಾರರಿಗೆ ಆಜ್ಞಾಪಿಸಿ ಮುಗಿಸಿದ ಮೇಲೆ ತನ್ನ ಕಾಲುಗಳನ್ನು ಮಂಚದ ಮೇಲೆ ಮುದುರಿಕೊಂಡನು. ಅವನು ಪ್ರಾಣ ಬಿಟ್ಟು ತನ್ನ ಜನರೊಂದಿಗೆ ಸೇರಿಸಲ್ಪಟ್ಟನು.

ನ್ಯಾಯಾಧಿಪತಿಗಳು 3:12

ಇಸ್ರಾಯೇಲ್‌ ಮಕ್ಕಳು ಕರ್ತನ ಮುಂದೆ ತಿರಿಗಿ ಕೆಟ್ಟತನ ಮಾಡಿದರು. ಅವರು ಕರ್ತನ ಮುಂದೆ ಕೆಟ್ಟತನ ಮಾಡಿದ್ದರಿಂದ ಕರ್ತನು ಮೋವಾಬ್ಯರ ಅರಸನಾದ ಎಗ್ಲೋನನನ್ನು ಇಸ್ರಾಯೇಲಿಗೆ ವಿರೋಧವಾಗಿ ಬಲ ಪಡಿಸಿದನು.

ನ್ಯಾಯಾಧಿಪತಿಗಳು 6:3

ಇಸ್ರಾಯೇಲ್ಯರು ಬೀಜ ಬಿತ್ತಿದ ತರುವಾಯ ಮಿದ್ಯಾನ್ಯರೂ ಅಮಾಲೇ ಕ್ಯರೂ ಮೂಡಣದ ಮಕ್ಕಳೂ ಅವರಿಗೆ ವಿರೋಧವಾಗಿ ಬಂದು ದಂಡಿಳಿದು

2 ಅರಸುಗಳು 3:5

ಅಹಾ ಬನು ಸತ್ತ ತರುವಾಯ ಏನಾಯಿತಂದರೆ, ಮೋವಾ ಬಿನ ಅರಸನು ಇಸ್ರಾಯೇಲಿನ ಅರಸನಿಗೆ ವಿರೋಧ ವಾಗಿ ತಿರುಗಿಬಿದ್ದನು.

2 ಅರಸುಗಳು 3:7

ಇದಲ್ಲದೆ ಅವನು ಹೋಗಿಮೋವಾಬಿನ ಅರಸನು ನನಗೆ ವಿರೋಧವಾಗಿ ತಿರುಗಿ ಬಿದ್ದಿದ್ದಾನೆ; ನೀನು ನನ್ನ ಸಂಗಡ ಮೋವಾಬಿನ ಮೇಲೆ ಯುದ್ಧಮಾಡಲು ಬರುವಿಯೋ ಎಂದು ಯೆಹೂದದ ಅರಸನಾದ ಯೆಹೋಷಾಫಾಟನಿಗೆ ಹೇಳಿ ಕಳುಹಿಸಿ ದನು. ಅದಕ್ಕವನು--ನಾನು ಬರುವೆನು; ನಾನು ನಿನ್ನ ವನೇ, ನನ್ನ ಜನರು ನಿನ್ನ ಜನರೇ, ಹಾಗೆಯೇ ನನ್ನ ಕುದುರೆಗಳು ನಿನ್ನ ಕುದುರೆಗಳಂತೆಯೇ ಅಂದನು.

2 ಅರಸುಗಳು 3:24

ಅವರು ಇಸ್ರಾಯೇಲಿನ ದಂಡಿಗೆ ಬಂದಾಗ ಇಸ್ರಾಯೇಲ್ಯರು ಎದ್ದು ಮೋವಾಬ್ಯರು ತಮ್ಮ ಮುಂದೆ ಓಡಿಹೋಗುವ ಹಾಗೆ ಅವರನ್ನು ಹೊಡೆದು ಮೋವಾಬ್ಯರನ್ನು ಅವರ ದೇಶದ ವರೆಗೂ ಹೊಡೆಯುತ್ತಾ ಬಂದರು.

2 ಅರಸುಗಳು 5:2

ಅರಾಮ್ಯರು ಗುಂಪುಗುಂಪಾಗಿ ಹೊರಟು ಇಸ್ರಾಯೇಲ್‌ ದೇಶದಿಂದ ಒಬ್ಬ ಹುಡುಗಿಯನ್ನು ಸೆರೆಯಾಗಿ ಹಿಡುಕೊಂಡು ಬಂದರು. ಅವಳು ನಾಮಾ ನನ ಹೆಂಡತಿಗೆ ಸೇವಕಳಾಗಿದ್ದಳು.

2 ಅರಸುಗಳು 6:23

ಆಗ ಅರಸನು ಅವರಿಗೋಸ್ಕರ ದೊಡ್ಡ ಔತಣ ಮಾಡಿಸಿದನು. ಅವರು ತಿಂದು ಕುಡಿದ ತರುವಾಯ ಅವರನ್ನು ಕಳುಹಿಸಿ ಬಿಟ್ಟನು. ಅವರು ತಮ್ಮ ಯಜಮಾನನ ಬಳಿಗೆ ಹೋದರು. ಅರಾಮ್ಯರ ದಂಡುಗಳು ಇಸ್ರಾಯೇಲ್‌ ದೇಶದಲ್ಲಿ ತಿರಿಗಿ ಬಾರದೆ ಹೋದವು.

2 ಅರಸುಗಳು 24:2

ಆದರೆ ಕರ್ತನು ಕಸ್ದೀಯರ, ಅರಾಮ್ಯರ, ಮೋವಾಬ್ಯರ, ಅಮ್ಮೋನ್ಯರ ಗುಂಪುಗಳನ್ನೂ ಅವನ ಮೇಲೆ ಕಳುಹಿಸಿದನು. ಕರ್ತನು ಪ್ರವಾದಿಗಳಾದ ತನ್ನ ಸೇವಕರ ಮುಖಾಂತರ ಹೇಳಿದ ಮಾತಿನ ಪ್ರಕಾರ ಯೆಹೂದವನ್ನು ನಾಶ ಮಾಡುವಂತೆ ಅದರ ಮೇಲೆ ಅವರನ್ನು ಬರಮಾಡಿದನು.

2 ದಿನವೃತ್ತಾಂತ 24:16

ಅವನು ದೇವರಿಗೋಸ್ಕರವಾಗಿಯೂ ಆತನ ಆಲಯಕ್ಕೋಸ್ಕರ ವಾಗಿಯೂ ಇಸ್ರಾಯೇಲಿನಲ್ಲಿ ಒಳ್ಳೇದನ್ನು ಮಾಡಿ ದ್ದದ್ದರಿಂದ ಅವರು ಅವನನ್ನು ದಾವೀದನ ಪಟ್ಟಣ ದಲ್ಲಿ ಅರಸುಗಳ ಬಳಿಯಲ್ಲಿ ಹೂಣಿಟ್ಟರು.

ಜೆಕರ್ಯ 1:5

ನಿಮ್ಮ ಪಿತೃ ಗಳೋ, ಅವರು ಎಲ್ಲಿ? ಪ್ರವಾದಿಗಳು, ಅವರು ನಿತ್ಯವಾಗಿ ಬದುಕುತ್ತಾರೋ?

ಅಪೋಸ್ತಲರ ಕೃತ್ಯಗಳು 8:2

ಭಕ್ತರಾದ ಜನರು ಸ್ತೆಫನನನ್ನು ಹೊತ್ತುಕೊಂಡು ಹೋಗಿ ಹೂಣಿಟ್ಟು ಅವನಿಗೋಸ್ಕರ ಬಹಳವಾಗಿ ಗೋಳಾಡಿದರು.

Interlinear

Choose Theme