ಕರ್ತನು ಇಸ್ರಾಯೇಲಿಗೆ ಒಬ್ಬ ರಕ್ಷಕ ನನ್ನು ಕೊಟ್ಟಿದ್ದರಿಂದ ಅವರು ಅರಾಮ್ಯರ ಕೈಯಿಂದ ತಪ್ಪಿಸಿಕೊಂಡು ಹೋದರು. ಇಸ್ರಾಯೇಲ್ ಮಕ್ಕಳು ಮುಂಚಿನ ಹಾಗೆ ತಮ್ಮ ಡೇರೆಗಳಲ್ಲಿ ವಾಸವಾಗಿದ್ದರು.
Cross references
ಮೋಶೆಯು ಕರ್ತನಿಗೆ--ಓ ನನ್ನ ಕರ್ತನೇ, ನಾನು ಮೊದಲಿನಿಂದಲೂ ನೀನು ನಿನ್ನ ದಾಸನ ಸಂಗಡ ಮಾತನಾಡಿದಂದಿನಿಂದಲೂ ವಾಕ್ಚಾತುರ್ಯವಿ ಲ್ಲದವನು. ನನ್ನ ಮಾತೂ ನಾಲಿಗೆಯೂ ಮಂದವಾಗಿವೆ ಅಂದನು.
ಬದುಕುವ ಹಾಗೆ ಅಲ್ಲಿಗೆ ಓಡಿಹೋಗತಕ್ಕ ಕೊಲೆ ಪಾತಕನ ವಿವರವೇನಂದರೆ -- ತಿಳಿಯದೆ ಇಲ್ಲವೆ ಪೂರ್ವಕಾಲದಲ್ಲಿ ಹಗೆಮಾಡದೆ ತನ್ನ ನೆರೆಯವನನ್ನು ಹೊಡೆದವನೇ.
ಆಗ ಕರ್ತನು ಯೆರುಬ್ಬಾಳನನ್ನೂ ಬೆದಾನನನ್ನೂ ಯೆಫ್ತಾಹನನ್ನೂ ಸಮುವೇಲನನ್ನೂ ಕಳುಹಿಸಿ ನಿಮ್ಮನ್ನು ಸಮಸ್ತ ದಿಕ್ಕಿನಲ್ಲಿರುವ ನಿಮ್ಮ ಶತ್ರು ಗಳ ಕೈಯಿಂದ ಬಿಡಿಸಿ ನೀವು ಸುರಕ್ಷಿತವಾಗಿ ವಾಸಿಸು ವಂತೆ ಮಾಡಿದನು.
ಆಗ ಯೋನಾತಾ ನನು ದಾವೀದನನ್ನು ಕರೆದು ಆ ಮಾತುಗಳನ್ನೆಲ್ಲಾ ಅವನಿಗೆ ತಿಳಿಸಿ ದಾವೀದನನ್ನು ಸೌಲನ ಬಳಿಗೆ ಕರ ತಂದನು; ಅವನು ಮುಂಚಿನ ಹಾಗೆಯೇ ಅವನ ಬಳಿಯಲ್ಲಿ ಇದ್ದನು.
ಆಗ ಯೆಹೋವಾಹಾಜನ ಮಗನಾದ ಯೋವಾ ಷನು ಯುದ್ಧದಲ್ಲಿ ತನ್ನ ತಂದೆಯಾದ ಯೆಹೋ ವಾಹಾಜನ ಕೈಯಿಂದ ಹಜಾಯೇಲನು ತಕ್ಕೊಂಡಿದ್ದ ಪಟ್ಟಣಗಳನ್ನು ಅವನ ಮಗನಾದ ಬೆನ್ಹದದನ ಕೈ ಯಿಂದ ತಿರಿಗಿ ತಕ್ಕೊಂಡನು. ಯೋವಾಷನು ಅವನನ್ನು ಮೂರು ಸಾರಿ ಹೊಡೆದು ಇಸ್ರಾಯೇಲಿನ ಪಟ್ಟಣ ಗಳನ್ನು ತಿರಿಗಿ ತಕ್ಕೊಂಡನು.
ಇದ ಲ್ಲದೆ ಇಸ್ರಾಯೇಲಿನ ದೇವರಾದ ಕರ್ತನು ಗತ್‌ಹೇಫೆ ರಿನವನಾದ ಪ್ರವಾದಿಯಾಗಿರುವ ಅಮಿತ್ತೈನ ಮಗ ನಾದ ಯೋನನೆಂಬ ತನ್ನ ಸೇವಕನ ಮುಖಾಂತರ ಹೇಳಿದ ವಾಕ್ಯದ ಪ್ರಕಾರವೇ ಅವನು ಹಮಾತಿನ ಪ್ರವೇಶ ಮೊದಲುಗೊಂಡು ಬಯಲಿನ ಸಮುದ್ರದ ವರೆಗೂ ಇರುವ ಇಸ್ರಾಯೇಲಿನ ಮೇರೆಯನ್ನು ತಿರಿಗಿ ತಕ್ಕೊಂಡನು.
ಇದಲ್ಲದೆ ಇಸ್ರಾಯೇಲಿನ ನಾಮವನ್ನು ಆಕಾಶದ ಕೆಳಗಿನಿಂದ ಅಳಿಸಿ ಬಿಡುವೆನೆಂದು ಕರ್ತನು ಹೇಳಿದ್ದಿಲ್ಲ; ಆದರೆ ಯೋವಾಷನ ಮಗನಾದ ಯಾರೊಬ್ಬಾಮನ ಕೈಯಿಂದ ಅವರನ್ನು ರಕ್ಷಿಸಿದನು.
ಇದಲ್ಲದೆ ಪೂರ್ವದಲ್ಲಿ ಸೌಲನು ಅರಸನಾಗಿದ್ದಾಗ ನೀನು ಇಸ್ರಾಯೇಲನ್ನು ಹೊರಗೆ ನಡಿಸುವವನಾಗಿಯೂ ಒಳಗೆ ತರುವವ ನಾಗಿಯೂ ಇದ್ದಿ; ಕರ್ತನಾದ ನಿನ್ನ ದೇವರು ನಿನಗೆ ಹೇಳಿದ್ದು--ನೀನು ನನ್ನ ಜನರಾದ ಇಸ್ರಾಯೇಲ್ಯರನ್ನು ಮೇಯಿಸುವವನಾಗಿಯೂ; ಇಸ್ರಾಯೇಲ್ಯರ ಮೇಲೆ ಅಧಿಕಾರಿಯಾಗಿರುವಿ ಎಂಬದು.
ಆದದರಿಂದ ನೀನು ಬಾಧಿಸುವ ವಿರೋಧಿಗಳ ಕೈಯಲ್ಲಿ ಅವರನ್ನು ಒಪ್ಪಿಸಿದಿ. ಆದರೆ ತಮ್ಮ ಇಕ್ಕಟ್ಟಿನ ಕಾಲದಲ್ಲಿ ಅವರು ನಿನ್ನನ್ನು ಕೂಗಿದಾಗ ನೀನು ಪರಲೋಕದಿಂದ ಕೇಳಿ, ನಿನ್ನ ಅಧಿಕವಾದ ಕರುಣೆಯ ಪ್ರಕಾರ ಅವರ ವೈರಿಗಳ ಕೈಯಿಂದ ರಕ್ಷಿಸುವದಕ್ಕೆ, ರಕ್ಷಕರನ್ನು ಅವರಿಗೆ ಕೊಟ್ಟಿ.
ಅದು ಸೈನ್ಯಗಳ ಕರ್ತನಿಗೆ ಐಗುಪ್ತ ದೇಶದಲ್ಲಿ ಗುರುತಾಗಿಯೂ ಸಾಕ್ಷಿ ಯಾಗಿಯೂ ಇರುವವು. ಹಿಂಸಕರ ದೆಸೆಯಿಂದ ಕರ್ತನನ್ನು ಕೂಗಿ ಕೊಳ್ಳಲು ಆತನು ಅವರಿಗೆ ಒಬ್ಬ ಶೂರನಾದ ರಕ್ಷಕ ನನ್ನು ಕಳುಹಿಸಿ ಅವರನ್ನು ಬಿಡುಗಡೆ ಮಾಡುವನು.
ಇದಲ್ಲದೆ ಚೀಯೋನ್ ಪರ್ವತದಲ್ಲಿ ರಕ್ಷಕರು ಏಸಾವಿನ ಬೆಟ್ಟಕ್ಕೆ ನ್ಯಾಯ ತೀರಿಸುವದಕ್ಕೋಸ್ಕರ ಏಳುವರು; ಆಗ ರಾಜ್ಯವು ಕರ್ತನದಾಗಿರುವದು.
ಈ ದಿನ ದಾವೀದನ ಪಟ್ಟಣದಲ್ಲಿ ನಿಮಗೋಸ್ಕರ ಒಬ್ಬ ರಕ್ಷಕನು ಹುಟ್ಟಿದ್ದಾನೆ; ಆತನು ಕರ್ತನಾಗಿರುವ ಕ್ರಿಸ್ತನೇ.