Home Bibles 2 ಅರಸುಗಳು 13:7 · ಕನ್ನಡ ಬೈಬಲ್
2 ಅರಸುಗಳು 13:7 · ಕನ್ನಡ ಬೈಬಲ್

ಆದರೂ ಯೆಹೋವಾಹಾಜನಿಗೆ ಐವತ್ತು ಕುದುರೆ ರಾಹುತ ರನ್ನೂ ಹತ್ತು ರಥಗಳನ್ನೂ ಹತ್ತು ಸಾವಿರ ಕಾಲಾಳು ಗಳನ್ನೂ ಹೊರತು ಜನರಲ್ಲಿ ಏನೂ ಬಿಡಲಿಲ್ಲ. ಯಾಕಂದರೆ ಅರಾಮ್ಯರ ಅರಸನು ಅವರನ್ನು ಸಂಹ ರಿಸಿ ತುಳಿಯಲ್ಪಟ್ಟ ಧೂಳಿನ ಹಾಗೆ ಮಾಡಿದ್ದನು.

Cross references

ಲೇವ್ಯಕಾಂಡ 26:17

ನಾನು ನಿಮಗೆ ವಿಮುಖನಾಗಿರು ವೆನು. ನಿಮ್ಮ ಶತ್ರುಗಳ ಮುಂದೆ ನೀವು ಕೊಲ್ಲಲ್ಪಡುವಿರಿ. ನಿಮ್ಮ ವೈರಿಗಳು ನಿಮ್ಮ ಮೇಲೆ ದೊರೆತನ ಮಾಡುವರು. ಓಡಿಸುವವನು ಯಾರೂ ಇಲ್ಲದಿರುವಾಗ ಓಡಿ ಹೋಗುವಿರಿ.

1 ಸಮುವೇಲ 13:6

ಆಗ ಇಸ್ರಾಯೇಲ್‌ ಜನರು ತಮಗೆ ಶ್ರಮೆ ಉಂಟಾದ್ದದರಿಂದ ತಾವು ಇಕ್ಕಟ್ಟಿನಲ್ಲಿ ಇರುವದನ್ನು ನೋಡಿ ಗವಿಗಳಲ್ಲಿಯೂ ಮುಳ್ಳಿನ ಪೊದೆಗಳಲ್ಲಿಯೂ ಗುಡ್ಡಗಳಲ್ಲಿಯೂ ದುರ್ಗಗಳಲ್ಲಿಯೂ ಕುಣಿಗಳಲ್ಲಿಯೂ ಅಡಗಿಕೊಂಡರು.

1 ಸಮುವೇಲ 13:15

ಸಮು ವೇಲನು ಎದ್ದು ಗಿಲ್ಗಾಲಿನಿಂದ ಬೆನ್ಯಾವಿಾನ್‌ ದೇಶದ ಗಿಬೆಯಕ್ಕೆ ಹೋದನು. ಸೌಲನು ತನ್ನ ಸಂಗಡ ಇದ್ದ ಜನರನ್ನು ಲೆಕ್ಕಮಾಡಿದಾಗ ಅವರು ಸುಮಾರು ಆರು ನೂರು ಜನರಿದ್ದರು.

1 ಸಮುವೇಲ 13:19

ಆದರೆ ಇಬ್ರಿಯರು ತಮಗೆ ಕತ್ತಿಯನ್ನಾದರೂ ಈಟಿಯನ್ನಾ ದರೂ ಮಾಡಿಕೊಳ್ಳಬಾರದು ಎಂದು ಫಿಲಿಷ್ಟಿಯರು ಹೇಳಿಕೊಂಡದ್ದರಿಂದ ಆಗ ಇಸ್ರಾಯೇಲ್‌ ದೇಶದಲ್ಲಿ ಒಬ್ಬ ಕಮ್ಮಾರನಾದರೂ ಸಿಕ್ಕಲಿಲ್ಲ.

1 ಅರಸುಗಳು 20:15

ಅವನು ಪ್ರಾಂತಗಳ ಪ್ರಧಾನರ ಯೌವನಸ್ಥರನ್ನು ಲೆಕ್ಕ ಮಾಡಿದಾಗ ಅವರು ಇನ್ನೂರ ಮೂವತ್ತೆರಡು ಜನರಾಗಿದ್ದರು. ಅವರ ತರುವಾಯ ಇಸ್ರಾಯೇಲ್‌ ಮಕ್ಕಳಾದ ಸಕಲ ಜನರನ್ನು ಲೆಕ್ಕ ಮಾಡಿದಾಗ ಏಳು ಸಾವಿರ ಜನರಾಗಿದ್ದರು.

1 ಅರಸುಗಳು 20:27

ಆದದರಿಂದ ಇಸ್ರಾಯೇಲಿನ ಮಕ್ಕಳು ಲೆಕ್ಕ ಮಾಡಲ್ಪಟ್ಟು ಬೇಕಾದದ್ದನ್ನು ಸಿದ್ಧಮಾಡಿಕೊಂಡು ಅವರಿಗೆ ಎದುರಾಗಿ ಹೊರಟರು. ಇಸ್ರಾಯೇಲಿನ ಮಕ್ಕಳು ಅವರಿಗೆದುರಾಗಿ ದಂಡಿಳಿದಿರುವಾಗ ಅವರು ಮೇಕೆ ಮರಿಗಳ ಎರಡು ಮಂದೆಗಳ ಹಾಗಿದ್ದರು; ಆದರೆ ಅರಾಮ್ಯರು ದೇಶವನ್ನು ತುಂಬಿಕೊಂಡಿದ್ದರು.

2 ಅರಸುಗಳು 8:12

ಆಗ ಹಜಾಯೇ ಲನು--ನನ್ನ ಒಡೆಯನು ಅಳುವದೇನು ಅಂದನು.ಅದಕ್ಕವನು -- ಇಸ್ರಾಯೇಲ್‌ ಮಕ್ಕಳಿಗೆ ನೀನು ಮಾಡಲು ಹೋಗುವ ಕೇಡು ನನಗೆ ತಿಳಿದದೆ; ನೀನು ಅವರ ಕೋಟೆಗಳಿಗೆ ಬೆಂಕಿ ಹೊತ್ತಿಸಿ ಅವರ ಯೌವನ ಸ್ಥರನ್ನು ಕತ್ತಿಯಿಂದ ಕೊಂದು ಅವರ ಕೂಸುಗಳನ್ನು ಅಪ್ಪಳಿಸಿ ಅವರ ಗರ್ಭಿಣೀ ಸ್ತ್ರೀಯರನ್ನು ಸೀಳಿಬಿಡುವಿ ಅಂದನು.

2 ಅರಸುಗಳು 10:32

ಆ ದಿವಸಗಳಲ್ಲಿ ಕರ್ತನು ಇಸ್ರಾಯೇಲನ್ನು ಕಡಿಮೆ ಮಾಡಲು ಆರಂಭಿಸಿದನು. ಯಾಕಂದರೆ ಹಜಾಯೇ ಲನು ಇಸ್ರಾಯೇಲಿನ ಎಲ್ಲಾ ಮೇರೆಗಳಲ್ಲಿ ಅವರನ್ನು ಸಂಹರಿಸಿದನು.

ಕೀರ್ತನೆಗಳು 18:42

ಗಾಳಿಯ ಮುಂದಿನ ಧೂಳಿನಹಾಗೆ ಅವ ರನ್ನು ಹೊಡೆದು ಪುಡಿಪುಡಿ ಮಾಡಿದನು; ಬೀದಿಯ ಕೆಸರಿನಹಾಗೆ ಅವರನ್ನು ಹೊರಗೆ ಚೆಲ್ಲಿಬಿಟ್ಟನು.

ಯೆಶಾಯ 36:8

ಹಾಗಾದರೆ ಈಗ ನನ್ನ ಯಜಮಾನನಾದ ಅಶ್ಶೂ ರಿನ ಅರಸನಿಗೆ ಹೊಣೆಗಾರರನ್ನು ಕೊಡು ಎಂದು ಬೇಡಿಕೊಳ್ಳುತ್ತೇನೆ. ಆಗ ನೀನು ಅವುಗಳ ಮೇಲೆ ಸವಾರಿಮಾಡುವದಕ್ಕೆ ಜನರನ್ನು ಕೊಡುವದಕ್ಕಾದರೆ ನಿನಗೆ ಎರಡು ಸಾವಿರ ಕುದುರೆಗಳನ್ನು ನಾನು ಕೊಡು ವೆನು.

ಯೆಶಾಯ 41:2

ಮೂಡಣದಿಂದ ನೀತಿವಂತ ನನ್ನು ಎಬ್ಬಿಸಿ, ಅವನನ್ನು ತನ್ನ ಪಾದಸನ್ನಿಧಿಗೆ ಕರೆದು ಜನಾಂಗಗಳನ್ನು ಅವನ ಮುಂದೆ ಕೊಟ್ಟುಬಿಟ್ಟು ಅವ ನನ್ನು ರಾಜರ ಮೇಲೆ ಆಳುವದಕ್ಕೆ ಮಾಡಿದವನು ಯಾರು? ಅವನ ಕತ್ತಿಗೆ ದೂಳನ್ನಾಗಿಯೂ ಅವನ ಬಿಲ್ಲಿಗೆ ಹಾರಿ ಹೋಗುವ ಹೊಟ್ಟಿನಂತೆಯೂ ಅವ ರನ್ನು ಕೊಟ್ಟನು.

ಯೆಶಾಯ 41:15

ಇಗೋ, ನಿನ್ನನ್ನು ಹದವಾದ, ಹೊಸ, ಮೊನೆಹಲ್ಲಿನ ಹಂತಿಕುಂಟೆಯನ್ನಾಗಿ (ಹೊಕ್ಕುವ ಯಂತ್ರ) ಮಾಡು ವೆನು, ನೀನು ಬೆಟ್ಟಗಳನ್ನು ಹೊಕ್ಕು ಪುಡಿಪುಡಿ ಮಾಡಿ ಗುಡ್ಡಗಳನ್ನು ಹೊಟ್ಟಿನಂತೆ ಮಾಡುವಿ.

ಯೋವೇಲ 3:14

ನಿರ್ಣಯದ ತಗ್ಗಿನಲ್ಲಿ ಗುಂಪುಗಳು, ಗುಂಪುಗಳು; ಕರ್ತನ ದಿನವು ನಿರ್ಣ ಯದ ತಗ್ಗಿನಲ್ಲಿ ಸವಿಾಪವಾಗಿದೆ.

ಆಮೋಸ 1:3

ಕರ್ತನು ಹೀಗೆ ಹೇಳುತ್ತಾನೆ--ದಮಸ್ಕದ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತ ನಾನು ಅವರನ್ನು ದಂಡಿಸದೆ ಹಿಂತಿರುಗುವದಿಲ್ಲ; ಅವರು ಕಬ್ಬಿಣದ ಆಯುಧಗಳಿಂದ ಗಿಲ್ಯಾದನ್ನು ಬಡಿದಿರುವರು.

ಆಮೋಸ 4:10

ಐಗುಪ್ತದ ವ್ಯಾಧಿಗಳಂಥ ವ್ಯಾಧಿಯನ್ನು ನಿಮ್ಮೊಳಗೆ ಕಳುಹಿಸಿದ್ದೇನೆ.ನಿಮ್ಮ ಕುದುರೆಗಳನ್ನು ತೆಗೆದುಕೊಂಡು ಹೋದವರ ಜೊತೆಯಲ್ಲಿ ನಿಮ್ಮ ಯೌವನಸ್ಥರನ್ನು ಕತ್ತಿಯಿಂದ ಕೊಂದುಹಾಕಿದ್ದೇನೆ. ನಿಮ್ಮ ದಂಡುಗಳ ದುರ್ವಾಸ ನೆಯು ನಿಮ್ಮ ಮೂಗುಗಳಲ್ಲಿ ಸೇರುವ ಹಾಗೆ ಮಾಡಿ ದ್ದೇನೆ. ಆದಾಗ್ಯೂ ನೀವು ನನ್ನ ಕಡೆಗೆ ಹಿಂತಿರುಗಿ ಕೊಳ್ಳಲಿಲ್ಲವೆಂದು ಕರ್ತನು ಹೇಳುತ್ತಾನೆ.

Interlinear

Choose Theme