ಅರಸನು ದಮಸ್ಕದಿಂದ ಬಂದ ಮೇಲೆ ಬಲಿಪೀಠವನ್ನು ನೋಡಿ ಬಲಿಪೀಠದ ಬಳಿಗೆ ಹೋಗಿ ಅದರ ಮೇಲೆ ಬಲಿ ಯನ್ನರ್ಪಿಸಿದನು.
Cross references
ಆದರೆ ಅವರು ನಿನ್ನ ಸಹಾಯಕರಾಗಿದ್ದು ಗುಡಾರದ ಎಲ್ಲಾ ಸೇವೆಗೋಸ್ಕರ ಸಭೆಯ ಗುಡಾರದ ಅಪ್ಪಣೆಯನ್ನು ಕಾಪಾಡಬೇಕು; ಪರಕೀಯನು ನಿಮ್ಮ ಸವಿಾಪಕ್ಕೆ ಬರ ಬಾರದು.
ಹೀಗೆಯೇ ಅವನು ತನ್ನ ಸ್ವಂತ ಹೃದಯದಲ್ಲಿ ಯೋಚಿಸಿದ ತಿಂಗಳಲ್ಲಿ ಎಂಟನೇ ತಿಂಗಳ ಹದಿನೈದನೇ ದಿವಸದಲ್ಲಿ ಅವನು ಬೇತೇಲಿನಲ್ಲಿ ಉಂಟುಮಾಡಿದ ಪೀಠದ ಮೇಲೆ ಬಲಿಗಳನ್ನರ್ಪಿಸಿ ಇಸ್ರಾಯೇಲಿನ ಮಕ್ಕಳಿಗೆ ಹಬ್ಬವನ್ನು ನೇಮಿಸಿದನು. ಇದಲ್ಲದೆ ತಾನೇ ಪೀಠದ ಮೇಲೆ ಬಲಿಗಳನ್ನರ್ಪಿಸಿ ಧೂಪವನ್ನು ಸುಟ್ಟನು.
ಯಾರೊಬ್ಬಾಮನು ಧೂಪವನ್ನರ್ಪಿಸಲು ಬಲಿಪೀಠದ ಬಳಿಯಲ್ಲಿ ನಿಂತಿರುವಾಗ ಇಗೋ, ಕರ್ತನ ಮಾತಿನಂತೆ ದೇವರ ಮನುಷ್ಯನು ಯೆಹೂದದಿಂದ ಬೇತೇಲಿಗೆ ಬಂದನು.
ಆದರೆ ಅವನು ಬಲ ಹೊಂದಿದ ಮೇಲೆ ಅವನ ಹೃದಯವು ನಾಶನಕ್ಕೆ ಎತ್ತಲ್ಪಟ್ಟಿತು. ಏನಂದರೆ, ಅವನು ಧೂಪಪೀಠದ ಮೇಲೆ ಧೂಪ ಸುಡುವದಕ್ಕೆ ಕರ್ತನ ಆಲಯದಲ್ಲಿ ಪ್ರವೇಶಿಸಿ ತನ್ನ ದೇವರಾದ ಕರ್ತ ನಿಗೆ ವಿರೋಧವಾಗಿ ಅಪರಾಧ ಮಾಡಿದನು.
ಏನಂದರೆ, ಅವನು ಅರಾಮಿನ ಅರಸುಗಳ ದೇವರುಗಳು ಅವರಿಗೆ ಸಹಾಯ ಕೊಟ್ಟದ್ದರಿಂದ--ಅವು ನನಗೆ ಸಹಾಯ ಕೊಡುವ ಹಾಗೆ ನಾನು ಅವುಗಳಿಗೆ ಬಲಿಯನ್ನು ಅರ್ಪಿಸುತ್ತೇನೆ ಎಂದು ಅಂದುಕೊಂಡು ತನ್ನನ್ನು ಹೊಡೆದ ದಮಸ್ಕ ದವರ ದೇವರುಗಳಿಗೆ ಬಲಿಗಳನ್ನು ಅರ್ಪಿಸಿದನು. ಆದರೆ ಅವು ಅವನನ್ನೂ ಸಮಸ್ತ ಇಸ್ರಾಯೇಲ್ಯರನ್ನೂ ಬೀಳುವಂತೆ ಮಾಡಿದವು.
ಯೆಹೂದದ ಸಮಸ್ತ ಪಟ್ಟಣಗಳಲ್ಲಿ ಅನ್ಯ ದೇವರುಗಳಿಗೆ ಧೂಪಸುಡುವದಕ್ಕಾಗಿ ಎತ್ತರ ಸ್ಥಳಗಳನ್ನು ಕಟ್ಟಿಸಿ ತನ್ನ ಪಿತೃಗಳ ದೇವರಾದ ಕರ್ತನಿಗೆ ಕೋಪವನ್ನೆಬ್ಬಿಸಿದನು.