Home Bibles 2 ಅರಸುಗಳು 17:22 · ಕನ್ನಡ ಬೈಬಲ್
2 ಅರಸುಗಳು 17:22 · ಕನ್ನಡ ಬೈಬಲ್

ಕರ್ತನು ಪ್ರವಾ ದಿಗಳಾದ ತನ್ನ ಸೇವಕರ ಮುಖಾಂತರ ಹೇಳಿದ ಹಾಗೆ ಅವನು ಇಸ್ರಾಯೇಲನ್ನು ತನ್ನ ಸಮ್ಮುಖದಿಂದ ತೆಗೆದು ಹಾಕುವ ವರೆಗೆ ಇಸ್ರಾಯೇಲಿನ ಮಕ್ಕಳು ಯಾರೊ ಬ್ಬಾಮನು ಮಾಡಿದ ಎಲ್ಲಾ ಪಾಪಗಳಲ್ಲಿ ನಡೆದರು; ಅವುಗಳನ್ನು ತೊರೆದು ಬಿಡಲಿಲ್ಲ.

Cross references

ನ್ಯಾಯಾಧಿಪತಿಗಳು 18:30

ಆದರೆ ಮೊದಲು ಆ ಪಟ್ಟಣಕ್ಕೆ ಲಯಿಷೆಂಬ ಹೆಸರು ಇತ್ತು. ಆಗ ದಾನನ ಮಕ್ಕಳು ಆ ಕೆತ್ತಿದ ವಿಗ್ರಹವನ್ನು ತಮಗೆ ಸ್ಥಾಪಿಸಿಕೊಂಡರು. ಮನಸ್ಸೆಯ ಮೊಮ್ಮಗನೂ ಗೆರ್ಷೋಮನ ಮಗನೂ ಯೋನಾ ತಾನನೂ ಅವನ ಮಕ್ಕಳೂ ಆ ದೇಶದವರು ಸೆರೆಯಾಗಿ ಒಯ್ಯಲ್ಪಡುವ ದಿವಸದ ವರೆಗೂ ದಾನನ ಗೋತ್ರದ ವರಿಗೆ ಯಾಜಕರಾಗಿದ್ದರು.ದೇವರ ಮನೆ ಶಿಲೋವಿ ನಲ್ಲಿ ಇರುವ ಮಟ್ಟಿಗೂ ವಿಾಕನು ಮಾಡಿದ ವಿಗ್ರಹ ವನ್ನು ಅವರು ಇಟ್ಟುಕೊಂಡಿದ್ದರು.

2 ಅರಸುಗಳು 3:3

ಆದರೂ ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳಿಗೆ ಅವನು ಅಂಟಿಕೊಂಡು ಅವುಗಳನ್ನು ಬಿಡದೇ ಇದ್ದನು.

2 ಅರಸುಗಳು 10:29

ಆದರೆ ಬೇತೇಲ್‌, ದಾನ್‌ನಲ್ಲಿಯೂ ಇರುವ ಬಂಗಾರದ ಹೋರಿಗಳಿಂದ ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನು ಯೇಹುವು ತೊರೆದುಬಿಡಲಿಲ್ಲ.

2 ಅರಸುಗಳು 10:31

ಆದರೆ ಯೇಹುವು ತನ್ನ ಪೂರ್ಣಹೃದಯ ದಿಂದ ಇಸ್ರಾಯೇಲಿನ ದೇವರಾದ ಕರ್ತನ ನ್ಯಾಯ ಪ್ರಮಾಣದಲ್ಲಿ ನಡೆಯುವ ಹಾಗೆ ಎಚ್ಚರಿಕೆಯಾಗಿರ ಲಿಲ್ಲ; ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿ ಸಿದ ಯಾರೊಬ್ಬಾಮನ ಪಾಪಗಳನ್ನು ತೊರೆದು ಬಿಡಲಿಲ್ಲ.

2 ಅರಸುಗಳು 13:2

ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನು ಬಿಟ್ಟುಬಿಡದೆ ಅವುಗಳನ್ನು ಹಿಂಬಾಲಿಸಿದನು.

2 ಅರಸುಗಳು 13:6

ಆದರೆ ಅವರು ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿಸಿದ ಯಾರೊಬ್ಬಾಮನ ಮನೆಯ ಪಾಪ ಗಳನ್ನು ಬಿಟ್ಟು ಬಿಡದೆ ಅವುಗಳಲ್ಲೇ ನಡೆದರು. ಇದಲ್ಲದೆ ಸಮಾರ್ಯದಲ್ಲಿ ತೋಪು ನೆಲೆಯಾಗಿತ್ತು.

2 ಅರಸುಗಳು 13:11

ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿ ಸಿದ ನೆಬಾಟನ ಮಗನಾದ ಯಾರೊಬ್ಬಾಮನ ಎಲ್ಲಾ ಪಾಪಗಳನ್ನು ತೊರೆದುಬಿಡದೆ ಅವುಗಳಲ್ಲೇ ನಡೆದನು.

2 ಅರಸುಗಳು 15:9

ಅವನು ತನ್ನ ಪಿತೃಗಳು ಮಾಡಿದ ಪ್ರಕಾರ ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು. ಅವನು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನು ತೊರೆದುಬಿಡಲಿಲ್ಲ.

Interlinear

Choose Theme