Home Bibles 2 ಅರಸುಗಳು 17:37 · ಕನ್ನಡ ಬೈಬಲ್
2 ಅರಸುಗಳು 17:37 · ಕನ್ನಡ ಬೈಬಲ್

ಇದಲ್ಲದೆ ಆತನು ನಿಮಗೆ ಬರೆದುಕೊಟ್ಟ ಕಟ್ಟಳೆಗಳನ್ನೂ ನೀತಿಗಳನ್ನೂ ನ್ಯಾಯಪ್ರಮಾಣವನ್ನೂ ಆಜ್ಞೆಯನ್ನೂ ನೀವು ನಿರಂತರವಾಗಿ ಕೈಕೊಳ್ಳಲು ಎಚ್ಚರಿಕೆ ಯಾಗಿರಬೇಕು; ಇತರ ದೇವರುಗಳಿಗೆ ಭಯಪಡ ಬೇಡಿರಿ.

Cross references

ಲೇವ್ಯಕಾಂಡ 19:37

ಆದದರಿಂದ ನನ್ನ ಎಲ್ಲಾ ನಿಯಮಗಳನ್ನೂ ನ್ಯಾಯ ಗಳನ್ನೂ ಕೈಕೊಂಡು ಅವುಗಳನ್ನು ಮಾಡಬೇಕು; ನಾನೇ ಕರ್ತನು ಎಂದು ಹೇಳಿದನು.

ದ್ವಿತೀಯೋಪದೇಶಕಾಂಡ 4:44

ಮೋಶೆಯು ಇಸ್ರಾಯೇಲ್‌ ಮಕ್ಕಳ ಮುಂದೆ ಇಟ್ಟ ನ್ಯಾಯಪ್ರಮಾಣವು ಇದೇ--

ದ್ವಿತೀಯೋಪದೇಶಕಾಂಡ 5:22

ಈ ಮಾತುಗಳನ್ನು ಕರ್ತನು ಬೆಂಕಿಯ ಮೇಘದ ಕಾರ್ಗತ್ತಲೆಯ ಮಧ್ಯದಿಂದಲೂ ಮಹಾಶಬ್ದ ದಿಂದಲೂ ಬೆಟ್ಟದಲ್ಲಿ ನಿಮ್ಮ ಸಭೆಗೆಲ್ಲಾ ಹೇಳಿದನು; ಹೆಚ್ಚೇನೂ ಕೂಡಿಸಲಿಲ್ಲ. ಇವುಗಳನ್ನು ಆತನು ಕಲ್ಲಿನ ಎರಡು ಹಲಗೆಗಳಲ್ಲಿ ಬರೆದು ನನಗೆ ಕೊಟ್ಟನು.

ದ್ವಿತೀಯೋಪದೇಶಕಾಂಡ 5:31

ನೀನಾದರೋ ಇಲ್ಲಿ ನನ್ನ ಸಂಗಡ ನಿಂತು ಕೋ; ಆಗ ನೀನು ಅವರಿಗೆ ಬೋಧಿಸತಕ್ಕಂಥ ಮತ್ತು ನಾನು ಅವರಿಗೆ ಸ್ವಾಸ್ತ್ಯವಾಗಿ ಕೊಡುವ ದೇಶದಲ್ಲಿ ಅವರು ಮಾಡತಕ್ಕಂಥ ಎಲ್ಲಾ ಆಜ್ಞೆ ನಿಯಮ ನ್ಯಾಯ ಗಳನ್ನು ನಿನಗೆ ಹೇಳುವೆನು ಅಂದನು.

ದ್ವಿತೀಯೋಪದೇಶಕಾಂಡ 5:33

ನೀವು ಬದುಕುವ ಹಾಗೆಯೂ ನಿಮಗೆ ಒಳ್ಳೆಯದಾಗುವ ಹಾಗೆಯೂ ನೀವು ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ನಿಮ್ಮ ದಿವಸಗಳು ಬಹಳವಾಗುವ ಹಾಗೆಯೂ ನಿಮ್ಮ ದೇವರಾದ ಕರ್ತನು ನಿಮಗೆ ಆಜ್ಞಾಪಿಸಿದ ಮಾರ್ಗ ಗಳಲ್ಲಿ ನಡಕೊಳ್ಳಬೇಕು.

ದ್ವಿತೀಯೋಪದೇಶಕಾಂಡ 12:32

ನಾನು ನಿನಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಲಕ್ಷಿಸಿ ಕೈಕೊಳ್ಳಬೇಕು; ಅದಕ್ಕೆ ಕೂಡಿಸಬೇಡ; ಇಲ್ಲವೆ ಅದರಿಂದ ಕಡಿಮೆಮಾಡಬೇಡ.

ದ್ವಿತೀಯೋಪದೇಶಕಾಂಡ 31:9

ಇದಲ್ಲದೆ ಮೋಶೆಯು ಈ ನ್ಯಾಯಪ್ರಮಾಣವನ್ನು ಬರೆದು ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವಂಥ ಲೇವಿಯ ಕುಮಾರರಾದ ಯಾಜಕರಿಗೂ ಇಸ್ರಾಯೇಲಿನ ಎಲ್ಲಾ ಹಿರಿಯರಿಗೂ ಒಪ್ಪಿಸಿದನು.

ದ್ವಿತೀಯೋಪದೇಶಕಾಂಡ 31:11

ನಿನ್ನ ದೇವರಾದ ಕರ್ತನ ಸನ್ನಿಧಿಯಲ್ಲಿ, ಆತನು ಆದು ಕೊಳ್ಳುವ ಸ್ಥಳದಲ್ಲಿ ಇಸ್ರಾಯೇಲಿನವರೆಲ್ಲರು ಕಾಣಿಸಿ ಕೊಳ್ಳುವದಕ್ಕೆ ಬಂದಾಗ ನೀನು ಈ ನ್ಯಾಯಪ್ರಮಾಣ ವನ್ನು ಇಸ್ರಾಯೇಲಿನವರೆಲ್ಲರ ಮುಂದೆ ಅವರು ಕೇಳುವಹಾಗೆ ಓದಬೇಕು.

ನ್ಯಾಯಾಧಿಪತಿಗಳು 6:10

ನಿಮಗೆ ನಾನೇ ನಿಮ್ಮ ದೇವರಾದ ಕರ್ತನು; ನೀವು ವಾಸಿಸಿರುವ ಅಮೋರಿಯರ ದೇಶದ ದೇವರುಗಳಿಗೆ ಭಯಪಡ ಬೇಡಿರಿ ಎಂದು ನಾನು ಹೇಳಿದೆನು. ಆದರೆ ನೀವು ನನ್ನ ಮಾತನ್ನು ಕೇಳದೆ ಹೋದಿರಿ ಎಂಬದೇ.

1 ದಿನವೃತ್ತಾಂತ 29:19

ಇದಲ್ಲದೆ ನಿನ್ನ ಆಜ್ಞೆಗಳನ್ನೂ ಸಾಕ್ಷಿಗಳನ್ನೂ ಕಟ್ಟಳೆಗಳನ್ನು ಕೈಕೊಳ್ಳಲೂ ಸಮಸ್ತವನ್ನು ಮಾಡಲೂ ನಾನು ಯಾವದಕ್ಕೋಸ್ಕರ ಸಿದ್ಧಮಾಡಿದೆನೋ ಆ ಅರಮನೆಯನ್ನು ಕಟ್ಟಿಸಲೂ ನನ್ನ ಮಗನಾದ ಸೊಲೊ ಮೋನನಿಗೆ ಪೂರ್ಣ ಹೃದಯವನ್ನು ಕೊಡು ಅಂದನು.

ನೆಹೆಮ್ಯ 9:13

ಸೀನಾಯ್‌ ಪರ್ವ ತದ ಮೇಲಕ್ಕೆ ಇಳಿದು ಬಂದಿ; ಆಕಾಶದಿಂದ ಅವರ ಸಂಗಡ ಮಾತನಾಡಿದಿ; ಸರಿಯಾದ ನ್ಯಾಯಗಳನ್ನೂ ಸತ್ಯವಾದ ನ್ಯಾಯಪ್ರಮಾಣಗಳನ್ನೂ ಉತ್ತಮವಾದ ಕಟ್ಟಳೆ ಗಳನ್ನೂ ಆಜ್ಞೆಗಳನ್ನೂ ಅವರಿಗೆ ಕೊಟ್ಟಿ.

ಕೀರ್ತನೆಗಳು 19:8

ಕರ್ತನ ಕಟ್ಟಳೆಗಳು ನ್ಯಾಯವಾದವುಗಳಾಗಿದ್ದು ಹೃದಯಕ್ಕೆ ಸಂತೋಷಕರವಾಗಿವೆ; ಕರ್ತನ ಆಜ್ಞೆಯು ಶುದ್ಧವಾ ದದ್ದು; ಕಣ್ಣುಗಳನ್ನು ಬೆಳಗಿಸುತ್ತದೆ.

ಕೀರ್ತನೆಗಳು 105:44

ಅವರು ಪ್ರಜೆಗಳ ಕಷ್ಟಾರ್ಜಿತವನ್ನು ಸ್ವಾಧೀನಮಾಡಿಕೊಂಡರು.ಆತನ ನಿಯಮಗಳನ್ನು ಕೈಕೊಂಡು ನ್ಯಾಯಪ್ರಮಾಣ ಗಳನ್ನೂ ಕಾಪಾಡುವದಕ್ಕಾಗಿ ಆತನು ಅನ್ಯಜನಾಂಗದ ದೇಶಗಳನ್ನು ಅವರಿಗೆ ಕೊಟ್ಟನು. ಕರ್ತನನ್ನು ಸ್ತುತಿಸಿರಿ.

Interlinear

Choose Theme