Home Bibles 2 ಅರಸುಗಳು 17:6 · ಕನ್ನಡ ಬೈಬಲ್
2 ಅರಸುಗಳು 17:6 · ಕನ್ನಡ ಬೈಬಲ್

ಹೋಶೇ ಯನ ಒಂಭತ್ತನೇ ವರುಷದಲ್ಲಿ ಅಶ್ಶೂರಿನ ಅರಸನು ಸಮಾರ್ಯವನ್ನು ವಶಪಡಿಸಿಕೊಂಡು ಇಸ್ರಾಯೇಲನ್ನು ಅಶ್ಶೂರಿಗೆ ಸೆರೆಯಾಗಿ ಒಯ್ದು ಗೋಜಾನು ನದಿಯ ಬಳಿಯಲ್ಲಿರುವ ಹಲಹುನಲ್ಲಿಯೂ ಹಾಬೋರಿನ ಲ್ಲಿಯೂ ಮೇದ್ಯರ ಪಟ್ಟಣಗಳಲ್ಲಿಯೂ ಅವರನ್ನು ಇರಿಸಿದನು.

Cross references

ಲೇವ್ಯಕಾಂಡ 26:32

ನಾನು ದೇಶವನ್ನು ಹಾಳುಮಾಡುವೆನು; ಅದರಲ್ಲಿ ವಾಸ ವಾಗುವ ನಿಮ್ಮ ಶತ್ರುಗಳು ಅದಕ್ಕೆ ಆಶ್ಚರ್ಯಪಡುವರು.

ಲೇವ್ಯಕಾಂಡ 26:38

ಜನಾಂಗಗ ಳೊಳಗೆ ನಾಶವಾಗುವಿರಿ; ನಿಮ್ಮ ಶತ್ರುಗಳ ದೇಶವು ನಿಮ್ಮನ್ನು ತಿಂದುಬಿಡುವದು.

ದ್ವಿತೀಯೋಪದೇಶಕಾಂಡ 4:25

ನಿನ್ನಿಂದ ಮಕ್ಕಳೂ ಮೊಮ್ಮಕ್ಕಳೂ ಹುಟ್ಟಿದ ಮೇಲೆ ನೀವು ಬಹುಕಾಲ ದೇಶದಲ್ಲಿ ಇದ್ದು ತರುವಾಯ ನಿಮ್ಮನ್ನು ಕೆಡಿಸಿಕೊಂಡು ಯಾವದಾದರ ರೂಪವನ್ನು ಕೆತ್ತಿದ ವಿಗ್ರಹವನ್ನು ಮಾಡಿಕೊಂಡು ನಿನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಆತನಿಗೆ ಕೋಪವನ್ನು ಎಬ್ಬಿಸಿದರೆ

ದ್ವಿತೀಯೋಪದೇಶಕಾಂಡ 28:36

ಕರ್ತನು ನಿನ್ನನ್ನೂ ನೀನು ನಿನ್ನ ಮೇಲೆ ಇರಿಸಿಕೊಳ್ಳುವ ಅರಸನನ್ನೂ ನೀನೂ ನಿನ್ನ ಪಿತೃಗಳೂ ಅರಿಯದ ಜನಾಂಗದ ಬಳಿಗೆ ಹೋಗ ಮಾಡುವನು; ಅಲ್ಲಿ ಮರವೂ ಕಲ್ಲೂ ಆಗಿರುವ ಬೇರೆ ದೇವರುಗಳನ್ನು ನೀನು ಸೇವಿಸುವಿ.

ದ್ವಿತೀಯೋಪದೇಶಕಾಂಡ 28:64

ಇದ ಲ್ಲದೆ ಕರ್ತನು ನಿನ್ನನ್ನು ಭೂಮಿಯ ಈ ಮೇರೆಯಿಂದ ಆ ಮೇರೆಯ ವರೆಗೂ ಎಲ್ಲಾ ಜನಗಳಲ್ಲಿ ಚದರಿಸು ವನು; ಅಲ್ಲಿ ನೀನೂ ನಿನ್ನ ಪಿತೃಗಳೂ ತಿಳಿಯದಂಥ ಮರವೂ ಕಲ್ಲೂ ಆಗಿರುವಂಥ ಬೇರೆ ದೇವರುಗಳನ್ನು ಸೇವಿಸುವಿ.

ದ್ವಿತೀಯೋಪದೇಶಕಾಂಡ 29:27

ಕರ್ತನ ಕೋಪವು ಈ ದೇಶದ ಮೇಲೆ ಈ ಪುಸ್ತಕದಲ್ಲಿ ಬರೆದಿರುವ ಶಾಪವನ್ನೆಲ್ಲಾ ಅವರ ಮೇಲೆ ತರುವ ಹಾಗೆ ಉರಿಯಿತು.

ದ್ವಿತೀಯೋಪದೇಶಕಾಂಡ 30:18

ಖಂಡಿತ ವಾಗಿಯೂ ನಶಿಸುವಿರೆಂದೂ ನೀವು ಸೇರಿ ಸ್ವಾಧೀನ ಮಾಡಿಕೊಳ್ಳುವದಕ್ಕೆ ಯೊರ್ದನನ್ನು ದಾಟಿಹೋಗುವ ದೇಶದಲ್ಲಿ ನಿಮ್ಮ ದಿವಸಗಳು ಬಹಳವಾಗುವದಿಲ್ಲ ವೆಂದೂ ಈಹೊತ್ತು ನಿಮಗೆ ತಿಳಿಸುತ್ತೇನೆ.

1 ಅರಸುಗಳು 8:46

ಪಾಪವನ್ನು ಮಾಡದವನು ಯಾವನೂ ಇಲ್ಲದ್ದ ರಿಂದ ಅವರು ನಿನಗೆ ವಿರೋಧವಾಗಿ ಪಾಪ ಮಾಡಲು ನೀನು ಅವರ ಮೇಲೆ ಕೋಪಿಸಿಕೊಂಡು ದೂರವಾ ದರೂ ಸವಿಾಪವಾದರೂ ಶತ್ರುವಿನ ದೇಶಕ್ಕೆ ಅವರು ಸೆರೆಯಾಗಿ ಒಯ್ಯಲ್ಪಡುವ ಹಾಗೆ ನೀನು ಅವರನ್ನು ಶತ್ರುವಿನ ಕೈಯಲ್ಲಿ ಒಪ್ಪಿಸಿದರೆ

1 ಅರಸುಗಳು 14:15

ಆದರೆ ಈಗಲೇ ಏನು ಆಗುವದು? ನೀರಿನಲ್ಲಿರುವ ದಂಟು ಅಲ್ಲಾಡುವ ಹಾಗೆ ಕರ್ತನು ಇಸ್ರಾಯೇಲ್ಯರನ್ನು ಹೊಡೆಯುವನು. ಇಸ್ರಾ ಯೇಲ್ಯರು ಕರ್ತನಿಗೆ ಕೋಪವನ್ನು ಎಬ್ಬಿಸಲು ತಮ್ಮ ವಿಗ್ರಹಾರಾಧನೆಗೋಸ್ಕರ ತೋಪುಗಳನ್ನು ಹಾಕಿದ್ದ ರಿಂದ ಆತನು ಅವರ ತಂದೆಗಳಿಗೆ ಕೊಟ್ಟ ಈ ಉತ್ತಮ ದೇಶದಲ್ಲಿಂದ ಅವರನ್ನು ನಿರ್ಮೂಲ ಮಾಡಿ ನದಿಯ ಆಚೆಯಲ್ಲಿ ಅವರನ್ನು ಚದರುವಂತೆ ಮಾಡುವನು.

2 ಅರಸುಗಳು 15:29

ಇಸ್ರಾಯೇಲಿನ ಅರಸನಾದ ಪೆಕಹನ ದಿವಸಗಳಲ್ಲಿ ಅಶ್ಶೂರದ ಅರಸ ನಾದ ತಿಗ್ಲತ್ಪಿಲೆಸೆರನು ಬಂದು ನೆಫ್ತಾಲಿಯ ದೇಶವಾದ ಇಯ್ಯೋನನ್ನೂ ಅಬೇಲ್ಬೆತ್ಮಾಕವನ್ನೂ ಯಾನೋಹ ವನ್ನೂ ಕೆದೆಷನ್ನೂ ಹಾಚೋರನ್ನೂ ಗಿಲ್ಯಾದನ್ನೂ ಗಲಿಲಾಯವನ್ನೂ ಹಿಡುಕೊಂಡು ಜನರನ್ನು ಸೆರೆಯಾಗಿ ಅಶ್ಯೂರಿಗೆ ಒಯ್ದನು.

2 ಅರಸುಗಳು 17:23

ಹೀಗೆಯೇ ಇಸ್ರಾ ಯೇಲಿನವರು ಇಂದಿನ ವರೆಗೂ ತಮ್ಮ ದೇಶದಿಂದ ಅಶ್ಶೂರಿಗೆ ಸೆರೆಯಾಗಿ ಒಯ್ಯಲ್ಪಟ್ಟರು.

2 ಅರಸುಗಳು 18:10

ಮೂರು ವರುಷವಾದ ತರುವಾಯ ಅವರು ಅದನ್ನು ತೆಗೆದುಕೊಂಡರು. ಇಸ್ರಾಯೇಲಿನ ಅರಸನಾಗಿರುವ ಹೋಶೇಯನ ಆಳ್ವಿಕೆಯ ಒಂಭತ್ತನೇ ವರುಷವಾದ ಹಿಜ್ಕೀಯನ ಆರನೇ ವರುಷದಲ್ಲಿ ಸಮಾ ರ್ಯವು ತೆಗೆದುಕೊಳ್ಳಲ್ಪಟ್ಟಿತು.

2 ಅರಸುಗಳು 18:34

ಹಮಾತ್‌ ಅರ್ಫಾದು ಗಳ ದೇವರುಗಳು ಎಲ್ಲಿ? ಸೆಫರ್ವಯಿಮ್‌, ಹೇನ. ಇವ್ವಾಗಳ ದೇವರುಗಳು ಎಲ್ಲಿ? ಅವರು ನನ್ನ ಕೈಗೆ ಸಮಾರ್ಯವನ್ನು ತಪ್ಪಿಸಿಬಿಟ್ಟದ್ದು ಉಂಟೋ? ಈ ದೇಶಗಳ ದೇವರುಗಳಲ್ಲಿ ತಮ್ಮ ದೇಶವನ್ನು ನನ್ನ ಕೈಗೆ ತಪ್ಪಿಸಿ ಬಿಟ್ಟ ದೇವರುಗಳು ಯಾರು

2 ಅರಸುಗಳು 19:12

ನನ್ನ ತಂದೆಗಳು ಹಾಳು ಮಾಡಿದ ಗೋಜಾನ್‌, ಖಾರಾನ್‌, ರೆಚೆಫ್‌, ತೆಲಸ್ಸಾರ್‌ನಲ್ಲಿದ್ದ ಎದೆನಿನ ಮಕ್ಕಳು,

2 ಅರಸುಗಳು 21:13

ನಾನು ಯೆರೂಸಲೇಮಿನ ಮೇಲೆ ಸಮಾರ್ಯದ ನೂಲನ್ನೂ ಅಹಾಬನ ಮನೆಯ ಗಟ್ಟಿ ತೂಕವನ್ನೂ ಗುಂಡನ್ನೂ ಚಾಚುವೆನು; ತಟ್ಟೆ ಯನ್ನು ಒರಸಿ ಬೋರಲು ಹಾಕುವ ಹಾಗೆ ನಾನು ಯೆರೂಸಲೇಮನ್ನು ಒರಸಿಬಿಡುವೆನು.

1 ದಿನವೃತ್ತಾಂತ 5:26

ಆದ ಕಾರಣ ಇಸ್ರಾಯೇಲಿನ ದೇವರು ಅಶ್ಯೂರಿನ ಅರಸ ನಾದ ಪೂಲನ ಆತ್ಮವನ್ನೂ ಅಶ್ಯೂರಿನ ಅರಸನಾದ ತಿಗ್ಲತ್ಪಿಲೆಸರನ ಆತ್ಮವನ್ನೂ ಪ್ರೇರಿಸಿದ್ದರಿಂದ ಅವರು ಅವರನ್ನು ಸೆರೆಯಾಗಿ ಒಯ್ದರು. ಆ ರೂಬೇನ್ಯರನ್ನೂ ಗಾದ್ಯರನ್ನೂ ಮನಸ್ಸೆಯ ಅರ್ಧಗೋತ್ರದವರನ್ನೂ ಹಲಹಕ್ಕೂ ಹಾಬೋರಿಗೂ ಹಾರಕ್ಕೂ ಗೋಜಾನ್‌ ನದಿಯ ಪ್ರದೇಶಕ್ಕೂ ತಕ್ಕೊಂಡುಹೋದರು. ಅವರು ಇಂದಿನ ವರೆಗೂ ಅಲ್ಲೇ ಇದ್ದಾರೆ.

ನೆಹೆಮ್ಯ 9:32

ಆದಕಾರಣ ನಮ್ಮ ದೇವರೇ, ಒಡಂಬಡಿಕೆಯನ್ನೂ ಕೃಪೆಯನ್ನೂ ಕೈಕೊಳ್ಳುವಂಥ ಮಹಾಪರಾಕ್ರಮವು ಳ್ಳಂಥ ಭಯಂಕರನಾದ ದೇವರೇ, ಅಶ್ಶೂರಿನ ಅರಸು ಗಳ ಕಾಲ ಮೊದಲುಗೊಂಡು ಇಂದಿನ ವರೆಗೆ ನಮ್ಮ ಮೇಲೆಯೂ ಅರಸುಗಳ ಮೇಲೆಯೂ ಪ್ರಧಾನರ ಮೇಲೆಯೂ ಯಾಜಕರ ಮೇಲೆಯೂ ಪ್ರವಾದಿಗಳ ಮೇಲೆಯೂ ಪಿತೃಗಳ ಮೇಲೆಯೂ ನಿನ್ನ ಸಮಸ್ತ ಜನರ ಮೇಲೆಯೂ ಬಂದ ಶ್ರಮೆಯು ನಿನಗೆ ಅಲ್ಪ ವಾಗಿ ಕಾಣಲ್ಪಡದೆ ಇರಲಿ.

ಯೆಶಾಯ 8:4

ಆ ಮಗುವು--ಅಪ್ಪಾ, ಅಮ್ಮಾ ಎಂದು ಕೂಗಬಲ್ಲವನಾಗುವದರ ಮುಂಚೆ ಅಶ್ಯೂರದ ಅರಸ ನು ದಮಸ್ಕದ ಆಸ್ತಿಯನ್ನೂ ಸಮಾರ್ಯದ ಸೂರೆ ಯನ್ನೂ ತೆಗೆದುಕೊಂಡು ಹೋಗುವನು ಅಂದನು.

ಯೆಶಾಯ 13:17

ಇಗೋ, ಬೆಳ್ಳಿಯನ್ನು ಲಕ್ಷಿಸದೆ ಬಂಗಾರದಲ್ಲಿ ಆನಂದಿಸದೆ ಇರುವ ಮೇದ್ಯರನ್ನು ಅವರಿಗೆ ವಿರೋಧ ವಾಗಿ ನಾನು ಎಬ್ಬಿಸುವೆನು.

ಯೆಶಾಯ 17:4

ಆ ದಿವಸದಲ್ಲಿ ಆಗುವದೇನಂದರೆ--ಯಾಕೋ ಬಿನ ವೈಭವ ತಗ್ಗುವದು; ಅದರ ಮಾಂಸದ ಕೊಬ್ಬು ಕರಗಿಸಲ್ಪಡುವದು.

ಯೆಶಾಯ 21:2

ಘೋರದರ್ಶನವು ನನಗೆ ತಿಳಿಯಬಂದಿದೆ. ಬಾಧ ಕನು ಬಾಧಿಸುತ್ತಿದ್ದಾನೆ. ಸೂರೆಗಾರನು ಸೂರೆಮಾಡು ತ್ತಿದ್ದಾನೆ. ಏಲಾಮೇ, ಏಳು ಮೇದ್ಯವೇ ಮುತ್ತಿಗೆ ಹಾಕು, ಅದರ ನಿಟ್ಟುಸಿರನ್ನೆಲ್ಲಾ ನಿಲ್ಲಿಸಿಬಿಟ್ಟಿದ್ದೇನೆ.

ಯೆಶಾಯ 36:17

ಸ್ವಲ್ಪ ಕಾಲವಾದ ನಂತರ ನಾನು ಬಂದು ನಿಮ್ಮನ್ನು ಧಾನ್ಯ, ದ್ರಾಕ್ಷಾರಸ, ಆಹಾರ, ದ್ರಾಕ್ಷೇತೋಟ ಇವು ಸಮೃದ್ಧಿ ಯಾಗಿರುವ ನಿಮ್ಮ ದೇಶಕ್ಕೆ ಸಮಾನವಾಗಿರುವ ಇನ್ನೊಂದು ದೇಶಕ್ಕೆ ಕರಕೊಂಡು ಹೋಗುವೆನು.

ಯೆಶಾಯ 37:12

ನನ್ನ ಪಿತೃಗಳು ಗೋಜಾನ್‌, ಖಾರಾನ್‌, ರೆಚೆಫ್‌ ಎಂಬ ಪಟ್ಟಣ ಗಳನ್ನು ತೆಲಸ್ಸಾರ್‌ ಪ್ರಾಂತ್ಯದಲ್ಲಿರುವ ಏದೆನಿನ ಜನ ರನ್ನು ನಾಶಮಾಡುವದಕ್ಕೆ ಹೋದಾಗ ಜನಾಂಗಗಳ ದೇವರುಗಳು ಅವರನ್ನು ಬಿಡುಗಡೆ ಮಾಡಿದವೋ?

ಯೆರೆಮಿಯ 50:17

ಮನುಷ್ಯ ರೆಲ್ಲರೂ ತಮ್ಮ ತಿಳುವಳಿಕೆಯಿಂದ ಮೂಢರಾಗಿದ್ದಾರೆ; ಎರಕ ಹೊಯ್ಯುವವರೆಲ್ಲರೂ ವಿಗ್ರಹದಿಂದ ನಾಚಿಕೆ ಪಡುತ್ತಾರೆ; ಅವರ ಎರಕದ ಬೊಂಬೆಗಳು ಸುಳ್ಳೇ; ಅವುಗಳಲ್ಲಿ ಉಸಿರು ಇಲ್ಲ.

ದಾನಿಯೇಲ 5:28

ಪೆರೇಸ್‌ ಅಂದರೆ ನಿನ್ನ ರಾಜ್ಯವು ವಿಭಿನ್ನವಾಗಿ ಮೇದ್ಯಯರಿಗೂ ಪಾರಸೀಯರಿಗೂ ಕೊಡಲ್ಪಟ್ಟಿದೆ ಎಂಬದಾಗಿ ಅರಿಕೆಮಾಡಿದನು.

ಹೊಶೇಯ 1:4

ಆಗ ಕರ್ತನು ಅವನಿಗೆ--ಅವನನ್ನು ಇಜ್ರೇಲ್‌ ಎಂಬ ಹೆಸರಿನಿಂದ ಕರೆ. ಇನ್ನೂ ಸ್ವಲ್ಪಕಾಲದಲ್ಲಿಯೇ ನಾನು ಇಜ್ರೇಲಿನ ರಕ್ತವನ್ನು ಯೆಹೂವಿನ ಮನೆತನದವರ ಮೇಲೆ ಸೇಡು ತೀರಿಸಿಕೊಳ್ಳುವೆನು; ಇಸ್ರಾಯೇಲಿನ ಮನೆತನದ ರಾಜ್ಯವು ನಿಂತುಹೋಗುವಂತೆ ಮಾಡು ವೆನು.

ಹೊಶೇಯ 1:6

ಅವಳು ತಿರುಗಿ ಬಸುರಾಗಿ ಮಗಳನ್ನು ಹೆತ್ತಳು. ಆಗ ದೇವರು ಅವನಿಗೆ-- ಅವಳನ್ನು ಲೋರುಹಾಮ ಎಂಬ ಹೆಸರಿನಿಂದ ಕರೆ; ಯಾಕಂದರೆ ನಾನು ಇನ್ನು ಮೇಲೆ ಇಸ್ರಾಯೇಲಿನ ಮನೆತನ ದವರನ್ನು ಕರುಣಿಸುವದೇ ಇಲ್ಲ; ಆದರೆ ನಾನು ಅವರನ್ನು ಸಂಪೂರ್ಣವಾಗಿ ತೆಗೆದುಬಿಡುತ್ತೇನೆ.

ಹೊಶೇಯ 1:9

ಆಗ ದೇವರು--ಅವನ ಹೆಸರನ್ನು ಲೋ ಅಮ್ಮಿ ಎಂದು ಕರೆ, ಯಾಕಂದರೆ ನೀವು ನನ್ನ ಜನರಲ್ಲ, ನಾನು ನಿಮ್ಮ ದೇವರಾಗಿರುವದಿಲ್ಲ ಅಂದನು.

ಹೊಶೇಯ 9:3

ಅವರು ಕರ್ತನ ದೇಶದಲ್ಲಿ ನೆಲೆಸುವದಿಲ್ಲ; ಆದರೆ ಎಫ್ರಾಯಾಮು ಐಗುಪ್ತಕ್ಕೆ ತಿರುಗುವದು; ಅವರು ಅಶ್ಯೂರಿನಲ್ಲಿ ಅಶುದ್ಧ ವಾದವುಗಳನ್ನು ತಿನ್ನುವರು.

ಹೊಶೇಯ 13:16

ಸಮಾರ್ಯವು ಹಾಳಾಗಿ ಹೋಗುವದು; ಅವಳು ತನ್ನ ದೇವರಿಗೆ ವಿರುದ್ಧವಾಗಿ ತಿರಿಗಿ ಬಿದ್ದಿದ್ದಾಳೆ; ಅವರೆಲ್ಲರೂ ಕತ್ತಿ ಯಿಂದ ಬೀಳುವರು; ಅವರ ಎಳೇ ಕೂಸುಗಳು ಚೂರು ಚೂರಾಗಿ ಬಡಿಯಲ್ಪಡುವವು; ಅವರ ಗರ್ಭಿಣಿಯರು ಸೀಳಲ್ಪಡುವರು.

ಆಮೋಸ 5:27

ಆದದರಿಂದ ದಮಸ್ಕದ ಆಚೆ ನಿಮ್ಮನ್ನು ಸೆರೆಗೆ ತಳ್ಳುವೆನೆಂದು ಸೈನ್ಯಗಳ ದೇವರೆಂದು ಹೆಸರುಗೊಂಡ ಕರ್ತನು ಹೇಳುತ್ತಾನೆ.

Interlinear

Choose Theme