ಇಸ್ರಾಯೇಲ್ಯರ ಮುಂದೆ ಕರ್ತನು ಹೊರ ಡಿಸಿಬಿಟ್ಟ ಅನ್ಯ ಜನಾಂಗಗಳ ಕಟ್ಟಳೆಗಳಲ್ಲಿಯೂ ಇಸ್ರಾ ಯೇಲಿನ ಅರಸುಗಳು ಮಾಡಿದ ಕಟ್ಟಳೆಗಳಲ್ಲಿಯೂ ನಡೆದರು.
Cross references
ಅವರ ದೇವರುಗಳಿಗೆ ನೀವು ಅಡ್ಡಬೀಳಲೂ ಬಾರದು, ಅವುಗಳನ್ನು ಸೇವಿಸಲೂಬಾರದು. ಇದಲ್ಲದೆ ನೀವು ಅವರ ಕೃತ್ಯಗಳ ಪ್ರಕಾರ ಮಾಡದೆ ಅವರನ್ನು ನಿರ್ಮೂಲ ಮಾಡಿಬಿಟ್ಟು ಅವರ ವಿಗ್ರಹಗಳನ್ನು ಪೂರ್ಣವಾಗಿ ಒಡೆದು ಹಾಕಬೇಕು.
ನೀವು ವಾಸವಾಗಿದ್ದ ಐಗುಪ್ತದೇಶದ ಕೃತ್ಯಗಳಂತೆ ಮಾಡಬಾರದು; ನಾನು ನಿಮ್ಮನ್ನು ತರುವದಕ್ಕಿರುವ ಕಾನಾನ್‌ದೇಶದ ಕೃತ್ಯಗಳಂತೆ ನೀವು ಮಾಡಬಾರದು ಇಲ್ಲವೆ ನೀವು ಅವರ ನಿಯಮಗಳಿಗನುಸಾರವೂ ನಡೆ ಯಬಾರದು.
(ನಿಮ್ಮೆದುರಿನಲ್ಲಿದ್ದ ಆ ದೇಶದವರು ಈ ಎಲ್ಲ ಅಸಹ್ಯವಾದವುಗಳನ್ನು ಮಾಡಿದರು, ಮತ್ತು ದೇಶವೂ ಹೊಲೆಯಾಯಿತು;)
ನೀವು ನಿಮಗಾಗಿ ವಿಗ್ರಹಗಳನ್ನಾಗಲಿ ಕೆತ್ತಿದ ಪ್ರತಿಮೆಯನ್ನಾಗಲಿ ಮಾಡಿಕೊಳ್ಳಬೇಡಿರಿ; ನಿಲ್ಲಿಸುವ ಪ್ರತಿಮೆಯನ್ನಾಗಲಿ ಮಾಡಿಕೊಳ್ಳಬೇಡಿರಿ. ಕಲ್ಲಿನ ವಿಗ್ರಹಗಳನ್ನಾಗಲಿ ನಿಮ್ಮ ದೇಶದಲ್ಲಿಟ್ಟು ಕೊಂಡು ಅವುಗಳಿಗೆ ಅಡ್ಡ ಬೀಳಬೇಡಿರಿ. ನಿಮ್ಮ ದೇವರಾಗಿರುವ ಕರ್ತನು ನಾನೇ.
ಅವು ನಿನ್ನ ಮುಂದೆ ನಾಶವಾದ ಮೇಲೆ ನೀನು ಅವುಗಳನ್ನು ಅನುಸರಿಸಿ ಬಲೆಯಲ್ಲಿ ಸಿಕ್ಕಿಬೀಳದ ಹಾಗೆಯೂ--ಈ ಜನಾಂಗಗಳು ತಮ್ಮ ದೇವರುಗಳನ್ನು ಹೇಗೆ ಸೇವಿಸಿದವೋ ನಾನೂ ಹಾಗೆ ಮಾಡುತ್ತೇನೆಂದು ಹೇಳಿ ಅವರ ದೇವರುಗಳನ್ನು ಕುರಿತು ವಿಚಾರಿಸದ ಹಾಗೆಯೂ ನೋಡಿಕೋ.
ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದೇಶಕ್ಕೆ ನೀನು ಬಂದಾಗ ಆ ಜನಾಂಗಗಳು ಮಾಡುವ ಅಸಹ್ಯಗಳ ಪ್ರಕಾರ ಮಾಡುವದಕ್ಕೆ ನೀನು ಕಲಿಯ ಬಾರದು.
ಎಂದು ಅರಸನು ಆಲೋ ಚನೆ ಕೇಳಿಕೊಂಡು ಎರಡು ಬಂಗಾರದ ಹೋರಿಗ ಳನ್ನು ಮಾಡಿಸಿ ಜನರಿಗೆ--ಯೆರೂಸಲೇಮಿನ ವರೆಗೂ ಹೋಗುವದು ನಿಮಗೆ ಕಷ್ಟವಾಗಿದೆ. ಓ ಇಸ್ರಾಯೇಲೇ, ಇಗೋ, ಐಗುಪ್ತದಿಂದ ನಿನ್ನನ್ನು ಬರಮಾಡಿದ ನಿನ್ನ ಈ ದೇವರುಗಳು ಅಂದನು.
ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳಲ್ಲಿ ನಡೆಯು ವದು ಅವನಿಗೆ ಅಲ್ಪವಾಗಿತ್ತು; ಅವನು ಚೀದೋನ್ಯರ ಅರಸನಾಗಿರುವ ಎತ್ಬಾಳನ ಮಗಳಾದ ಈಜೆಬೆಲಳನ್ನು ಮದುವೆಯಾಗಿ ಬಾಳನನ್ನು ಸೇವಿಸಿ ಅವನಿಗೆ ಅಡ್ಡ ಬಿದ್ದನು.
ಇದಲ್ಲದೆ ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ಹೊರಡಿಸಿಬಿಟ್ಟ ಅಮೋರಿಯರ ಎಲ್ಲಾ ಕೃತ್ಯಗಳ ಪ್ರಕಾರ ಅವನು ವಿಗ್ರಹಗಳನ್ನು ಹಿಂಬಾ ಲಿಸಿ ಬಹಳ ಅಸಹ್ಯವಾಗಿ ನಡೆದನು.
ಅವನು ತನ್ನ ತಂದೆಯಾದ ದಾವೀದನ ಹಾಗೆ ತನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಒಳ್ಳೇಯದನ್ನು ಮಾಡದೆ ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದನು. ಇದಲ್ಲದೆ ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ಹೊರಡಿಸಿದ ಅನ್ಯಜನಾಂಗಗಳ ಅಸಹ್ಯವಾದವುಗಳ ಪ್ರಕಾರ ಅವನು ತನ್ನ ಮಗನನ್ನು ಬೆಂಕಿ ತುಳಿಯ ಮಾಡಿದನು.
ಅರಸನಾದ ಆಹಾಜನು ಅಶ್ಶೂರಿನ ಅರಸನಾದ ತಿಗ್ಲತ್ಪಿಲೇಸೆರನನ್ನು ಎದುರುಗೊಳ್ಳಲು ದಮಸ್ಕಕ್ಕೆ ಹೋಗಿ ಅಲ್ಲಿ ಒಂದು ಬಲಿಪೀಠವನ್ನು ಕಂಡನು. ಆಗ ಅರಸ ನಾದ ಆಹಾಜನು ಆ ಬಲಿಪೀಠದ ರೂಪವನ್ನೂ ಅದರ ಎಲ್ಲಾ ಕೈ ಕೆಲಸದ ಪ್ರಕಾರ ಮಾದರಿಯನ್ನೂ ಯಾಜಕನಾದ ಊರೀಯನಿಗೆ ಕಳುಹಿಸಿದನು.
ಆದರೆ ಯೆಹೂದದವರು ತಮ್ಮ ದೇವರಾದ ಕರ್ತನ ಆಜ್ಞೆಗಳನ್ನು ಕೈಕೊಳ್ಳದೆ ಇಸ್ರಾ ಯೇಲು ಮಾಡಿಕೊಂಡ ಕಟ್ಟಳೆಗಳಲ್ಲಿ ನಡೆದರು.
ಆದರೆ ಅವರು ಕೇಳದೆ ತಮ್ಮ ಪೂರ್ವದ ಪದ್ಧತಿ ಹಾಗೆ ಮಾಡಿದರು.ಹೀಗೆಯೇ ಈ ಜನಾಂಗಗಳು ಕರ್ತನಿಗೆ ಭಯಪಡದೆ ತಮ್ಮ ಕೆತ್ತಿದ ವಿಗ್ರಹಗಳನ್ನು ಸೇವಿಸಿದರು; ಅವರ ಪಿತೃಗಳು ಮಾಡಿದ ಹಾಗೆ ಅವರೂ ಅವರ ಮಕ್ಕಳೂ ಮೊಮ್ಮಕ್ಕಳೂ ಇಂದಿನ ವರೆಗೂ ಮಾಡುತ್ತಿರುತ್ತಾರೆ.
ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ಹೊರಡಿಸಿದ ಅನ್ಯ ಜನಾಂಗಗಳ ಅಸಹ್ಯವಾದವುಗಳ ಹಾಗೆಯೇ ಅವನು ಕರ್ತನ ದೃಷ್ಟಿಗೆ ಕೆಟ್ಟದ್ದನ್ನು ಮಾಡಿದನು.
ಆದರೆ ಅನ್ಯಜನಾಂಗ ಗಳ ಸಂಗಡ ಕೂಡಿಕೊಂಡು; ಅವರ ಕೆಲಸಗಳನ್ನು ಕಲಿತುಕೊಂಡರು.
ಯೆಹೂದದ ಮನುಷ್ಯರ ಸಂಗಡಲೂ ಯೆರೂಸಲೇಮಿನ ನಿವಾಸಿಗಳ ಸಂಗ ಡಲೂ ಮಾತನಾಡಿ ಅವರಿಗೆ ನೀನು ಹೇಳಬೇಕಾದ ದ್ದೇನಂದರೆ--
ಎಫ್ರಾಯಾಮು ಆಜ್ಞೆಯಂತೆ ಇಷ್ಟ ಪೂರ್ವಕವಾಗಿ ನಡೆದ ಕಾರಣ ಅವನು ನ್ಯಾಯತೀರ್ಪಿನೊಳಗೆ ಕುಂದಿ ಹೋಗಿ ಜಜ್ಜಲ್ಪಟ್ಟನು.
ಒಮ್ರಿಯ ನಿಯಮಗಳನ್ನೂ ಅಹಾಬನ ಮನೆಯ ಸಮಸ್ತ ಕ್ರಿಯೆಗಳನ್ನೂ ಕೈಕೊಳ್ಳುತ್ತೀರಿ; ನಾನು ನಿನ್ನನ್ನು ಹಾಳಾ ಗಿಯೂ ಅದರ ನಿವಾಸಿಗಳನ್ನು ಸಿಳ್ಳಿಡುವಿಕೆಗಾಗಿಯೂ ಮಾಡುವ ಹಾಗೆ ಅವರ ಆಲೋಚನೆಗಳಲ್ಲಿ ನಡ ಕೊಳ್ಳುತ್ತೀರಿ; ಆದದರಿಂದ ನನ್ನ ಜನರ ನಿಂದೆಯನ್ನು ಹೊರುವಿರಿ.