Home Bibles 2 ಅರಸುಗಳು 18:11 · ಕನ್ನಡ ಬೈಬಲ್
2 ಅರಸುಗಳು 18:11 · ಕನ್ನಡ ಬೈಬಲ್

ಅಶ್ಶೂರಿನ ಅರಸನು ಅಶ್ಶೂರಕ್ಕೆ ಇಸ್ರಾಯೇಲನ್ನು ಸೆರೆಯಾಗಿ ಒಯ್ದು ಗೋಜಾನ್‌ ನದಿಯ ಬಳಿಯಲ್ಲಿ ಹಲಹುನಲ್ಲಿಯೂ ಹಾಬೋರಿನಲ್ಲಿಯೂ ಮೇದ್ಯರ ಪಟ್ಟಣಗಳಲ್ಲಿಯೂ ಅವರನ್ನು ಇರಿಸಿದನು.

Cross references

2 ಅರಸುಗಳು 15:29

ಇಸ್ರಾಯೇಲಿನ ಅರಸನಾದ ಪೆಕಹನ ದಿವಸಗಳಲ್ಲಿ ಅಶ್ಶೂರದ ಅರಸ ನಾದ ತಿಗ್ಲತ್ಪಿಲೆಸೆರನು ಬಂದು ನೆಫ್ತಾಲಿಯ ದೇಶವಾದ ಇಯ್ಯೋನನ್ನೂ ಅಬೇಲ್ಬೆತ್ಮಾಕವನ್ನೂ ಯಾನೋಹ ವನ್ನೂ ಕೆದೆಷನ್ನೂ ಹಾಚೋರನ್ನೂ ಗಿಲ್ಯಾದನ್ನೂ ಗಲಿಲಾಯವನ್ನೂ ಹಿಡುಕೊಂಡು ಜನರನ್ನು ಸೆರೆಯಾಗಿ ಅಶ್ಯೂರಿಗೆ ಒಯ್ದನು.

2 ಅರಸುಗಳು 17:6

ಹೋಶೇ ಯನ ಒಂಭತ್ತನೇ ವರುಷದಲ್ಲಿ ಅಶ್ಶೂರಿನ ಅರಸನು ಸಮಾರ್ಯವನ್ನು ವಶಪಡಿಸಿಕೊಂಡು ಇಸ್ರಾಯೇಲನ್ನು ಅಶ್ಶೂರಿಗೆ ಸೆರೆಯಾಗಿ ಒಯ್ದು ಗೋಜಾನು ನದಿಯ ಬಳಿಯಲ್ಲಿರುವ ಹಲಹುನಲ್ಲಿಯೂ ಹಾಬೋರಿನ ಲ್ಲಿಯೂ ಮೇದ್ಯರ ಪಟ್ಟಣಗಳಲ್ಲಿಯೂ ಅವರನ್ನು ಇರಿಸಿದನು.

2 ಅರಸುಗಳು 19:11

ಇಗೋ, ಅಶ್ಶೂರಿನ ಅರಸುಗಳು ಎಲ್ಲಾ ದೇಶಗಳನ್ನು ಶಾಪಕೊಟ್ಟು ನಿರ್ಮೂಲ ಮಾಡಿದ ವರ್ತ ಮಾನವನ್ನು ಕೇಳಿದಿ. ಆದರೆ ನೀನು ತಪ್ಪಿಸಿಕೊಳ್ಳು ವಿಯೋ?

2 ಅರಸುಗಳು 23:27

ಕರ್ತನು--ನಾನು ಇಸ್ರಾ ಯೇಲನ್ನು ತೆಗೆದು ಹಾಕಿದ ಹಾಗೆ ಯೆಹೂದವನ್ನು ಸಹ ನನ್ನ ಸಮ್ಮುಖದಿಂದ ತೆಗೆದುಹಾಕುವೆನು; ಇದ ಲ್ಲದೆ ನಾನು ಆದುಕೊಂಡ ಈ ಪಟ್ಟಣವಾದ ಯೆರೂ ಸಲೇಮನ್ನೂ ನನ್ನ ಹೆಸರು ಅಲ್ಲಿರುವದೆಂದು ನಾನು ಹೇಳಿದ ಮನೆಯನ್ನೂ ತೆಗೆದುಬಿಡುವೆನು ಅಂದನು.

1 ದಿನವೃತ್ತಾಂತ 5:26

ಆದ ಕಾರಣ ಇಸ್ರಾಯೇಲಿನ ದೇವರು ಅಶ್ಯೂರಿನ ಅರಸ ನಾದ ಪೂಲನ ಆತ್ಮವನ್ನೂ ಅಶ್ಯೂರಿನ ಅರಸನಾದ ತಿಗ್ಲತ್ಪಿಲೆಸರನ ಆತ್ಮವನ್ನೂ ಪ್ರೇರಿಸಿದ್ದರಿಂದ ಅವರು ಅವರನ್ನು ಸೆರೆಯಾಗಿ ಒಯ್ದರು. ಆ ರೂಬೇನ್ಯರನ್ನೂ ಗಾದ್ಯರನ್ನೂ ಮನಸ್ಸೆಯ ಅರ್ಧಗೋತ್ರದವರನ್ನೂ ಹಲಹಕ್ಕೂ ಹಾಬೋರಿಗೂ ಹಾರಕ್ಕೂ ಗೋಜಾನ್‌ ನದಿಯ ಪ್ರದೇಶಕ್ಕೂ ತಕ್ಕೊಂಡುಹೋದರು. ಅವರು ಇಂದಿನ ವರೆಗೂ ಅಲ್ಲೇ ಇದ್ದಾರೆ.

ನೆಹೆಮ್ಯ 9:30

ನೀನು ಅನೇಕ ವರುಷ ಅವರನ್ನು ತಾಳಿಕೊಂಡಿದ್ದು ನಿನ್ನ ಪ್ರವಾದಿಗಳ ಮುಖಾಂತರ ನಿನ್ನ ಆತ್ಮನಿಂದ ಅವರಿಗೆ ವಿರೋಧವಾಗಿ ಸಾಕ್ಷಿಹೇಳಿದಿ. ಆದರೆ ಅವರು ಕಿವಿಗೊಡದೆ ಇದ್ದದ್ದರಿಂದ ನೀನು ಅವರನ್ನು ದೇಶಗಳ ಜನರ ಕೈಯಲ್ಲಿ ಒಪ್ಪಿಸಿದಿ.

ಯೆಶಾಯ 7:8

ದಮಸ್ಕವು ಸಿರಿ ಯಾದ ತಲೆಯಾಗಿದೆ ಮತ್ತು ದಮಸ್ಕದ ತಲೆಯು ರೆಚೀನ; ಅರುವತ್ತೈದು ವರುಷಗಳೊಳಗೆ ಎಫ್ರಾಯಾ ಮ್ಯರು ಭಂಗಪಟ್ಟು ಜನಾಂಗವೆನಿಸಿಕೊಳ್ಳರು.

ಯೆಶಾಯ 8:4

ಆ ಮಗುವು--ಅಪ್ಪಾ, ಅಮ್ಮಾ ಎಂದು ಕೂಗಬಲ್ಲವನಾಗುವದರ ಮುಂಚೆ ಅಶ್ಯೂರದ ಅರಸ ನು ದಮಸ್ಕದ ಆಸ್ತಿಯನ್ನೂ ಸಮಾರ್ಯದ ಸೂರೆ ಯನ್ನೂ ತೆಗೆದುಕೊಂಡು ಹೋಗುವನು ಅಂದನು.

ಯೆಶಾಯ 9:9

ಇಟ್ಟಿಗೆಗಳು ಬಿದ್ದುಹೋದರೂ ಕೆತ್ತಿದ ಕಲ್ಲುಗಳಿಂದ ಕಟ್ಟುವೆವು;

ಯೆಶಾಯ 10:5

ಓ ನನ್ನ ಕೋಪದ ಕೋಲಾದ ಅಶ್ಶೂರವೇ, ಕೈಯಲ್ಲಿರುವ ಬೆತ್ತವು ನನ್ನ ರೌದ್ರವೇ.

ಯೆಶಾಯ 10:11

ನಾನು ಸಮಾರ್ಯಕ್ಕೂ ಅದರ ವಿಗ್ರಹಗಳಿಗೂ ಮಾಡಿದಂತೆ ಯೆರೂಸಲೇಮಿಗೂ ಅದರ ವಿಗ್ರಹ ಗಳಿಗೂ ಮಾಡದೆ ಇರುವೆನೋ?

ಯೆಶಾಯ 37:12

ನನ್ನ ಪಿತೃಗಳು ಗೋಜಾನ್‌, ಖಾರಾನ್‌, ರೆಚೆಫ್‌ ಎಂಬ ಪಟ್ಟಣ ಗಳನ್ನು ತೆಲಸ್ಸಾರ್‌ ಪ್ರಾಂತ್ಯದಲ್ಲಿರುವ ಏದೆನಿನ ಜನ ರನ್ನು ನಾಶಮಾಡುವದಕ್ಕೆ ಹೋದಾಗ ಜನಾಂಗಗಳ ದೇವರುಗಳು ಅವರನ್ನು ಬಿಡುಗಡೆ ಮಾಡಿದವೋ?

ಹೊಶೇಯ 8:8

ಇಸ್ರಾಯೇಲು ನುಂಗಲ್ಪಟ್ಟಿದೆ; ಅವರು ಅನ್ಯಜನಾಂಗಗಳಲ್ಲಿ ಮೆಚ್ಚಿಕೆಯಿಲ್ಲದ ಪಾತ್ರೆಯ ಹಾಗೆ ಇದ್ದಾರೆ.

ಹೊಶೇಯ 9:3

ಅವರು ಕರ್ತನ ದೇಶದಲ್ಲಿ ನೆಲೆಸುವದಿಲ್ಲ; ಆದರೆ ಎಫ್ರಾಯಾಮು ಐಗುಪ್ತಕ್ಕೆ ತಿರುಗುವದು; ಅವರು ಅಶ್ಯೂರಿನಲ್ಲಿ ಅಶುದ್ಧ ವಾದವುಗಳನ್ನು ತಿನ್ನುವರು.

ಆಮೋಸ 5:1

ಓ ಇಸ್ರಾಯೇಲಿನ ಮನೆತನದವರೇ, ನಾನು ನಿಮಗೆ ವಿರೋಧವಾಗಿ ಗೋಳಾ ಟದ ವಿಷಯವನ್ನೆತ್ತುವ ಈ ವಾಕ್ಯವನ್ನು ಕೇಳಿರಿ.

ಆಮೋಸ 5:6

ನೀವು ಕರ್ತನನ್ನು ಹುಡುಕಿ ಬದುಕಿರಿ, ಇಲ್ಲದಿದ್ದರೆ ಆತನು ಬೆಂಕಿಯಂತೆ ಯೋಸೇಫನ ಮನೆತನದಲ್ಲಿ ಪ್ರವೇಶಿಸುವನು; ಅದು ನುಂಗಿಬಿಡುವದು, ಅದನ್ನು ಆರಿಸುವವರು ಬೇತೇಲಿನಲ್ಲಿ ಯಾರೂ ಇರುವದಿಲ್ಲ.

ಆಮೋಸ 5:25

ಓ ಇಸ್ರಾಯೇಲಿನ ಮನೆತನದವರೇ, ನೀವು ನನಗೆ ಅರಣ್ಯ ದಲ್ಲಿ ನಲವತ್ತು ವರುಷಗಳು ಬಲಿಗಳನ್ನೂ ಕಾಣಿಕೆ ಗಳನ್ನೂ ಅರ್ಪಿಸಿದಿರೋ?

ಅಪೋಸ್ತಲರ ಕೃತ್ಯಗಳು 7:43

ಹೌದು, ನೀವು ಪೂಜಿಸಬೇಕೆಂದು ಮಾಡಿಕೊಂಡ ಮೂರ್ತಿಗಳನ್ನು ಅಂದರೆ ಮೊಲೋಖನ ಗುಡಾರವನ್ನು ರೊಂಫಾ ದೇವತೆಯ ನಕ್ಷತ್ರವನ್ನೂ ಹೊತ್ತುಕೊಂಡು ಹೋದಿರಿ. ಆದದರಿಂದ ನಾನು ನಿಮ್ಮನ್ನು ಬಾಬೆಲಿನ ಆಚೆಗೆ ಅಟ್ಟಿಬಿಡುವೆನು ಎಂಬದು.

Interlinear

Choose Theme