ಅಶ್ಶೂರಿನ ಅರಸನು ಲಾಕೀಷಿನಿಂದ ತರ್ತಾನ ನನ್ನೂ ರಬ್ಸಾರೀಸನನ್ನೂ ರಬ್ಷಾಕೆಯನ್ನೂ ದೊಡ್ಡ ದಂಡನ್ನೂ ಯೆರೂಸಲೇಮಿನಲ್ಲಿದ್ದ ಅರಸನಾದ ಹಿಜ್ಕೀ ಯನ ಬಳಿಗೆ ಕಳುಹಿಸಿದನು. ಅವರು ಯೆರೂಸಲೇಮಿಗೆ ಬಂದು ಅರಸನ ಹೊಲದ ರಾಜ ಮಾರ್ಗದಲ್ಲಿರುವ ಮೇಲಿನ ಕೆರೆಯ ಕಾಲುವೆಯ ಬಳಿಯಲ್ಲಿ ನಿಂತರು. ಅವರು ಅರಸನನ್ನು ಕರೇ ಕಳುಹಿಸಿದರು.
Cross references
ಹಿಜ್ಕೀಯನ ಇತರ ಕ್ರಿಯೆಗಳೂ ಅವನ ಎಲ್ಲಾ ಪರಾಕ್ರಮವೂ ಅವನು ಕೆರೆಯನ್ನೂ ನಾಲೆ ಯನ್ನೂ ಮಾಡಿಸಿ ಪಟ್ಟಣದಲ್ಲಿ ನೀರನ್ನು ಬರ ಮಾಡಿದ್ದೂ ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ? ಹಿಜ್ಕೀಯನು ತನ್ನ ಪಿತೃಗಳ ಸಂಗಡ ನಿದ್ರಿಸಿದನು;ಅವನ ಮಗನಾದ ಮನಸ್ಸೆಯು ಅವನಿಗೆ ಬದಲಾಗಿ ಅರಸ ನಾದನು.
ಅವನು ಯೆಹೂದಕ್ಕೆ ಇದ್ದ ಕೋಟೆಯುಳ್ಳ ಪಟ್ಟಣ ಗಳನ್ನು ಹಿಡಿದು ಯೆರೂಸಲೇಮಿಗೆ ಬಂದನು.
ಇದರ ತರುವಾಯ ಅಶ್ಶೂರಿನ ಅರಸನಾದ ಸನ್ಹೇ ರೀಬನೂ ಅವನ ಸಂಗಡ ಕೂಡಿರುವ ಅವನ ಸಮಸ್ತ ಬಲವೂ ಲಾಕೀಷನ್ನು ಮುತ್ತಿಗೆ ಹಾಕಿದಾಗ ಅವನು ಯೆರೂಸಲೇಮಿನಲ್ಲಿ ಯೆಹೂದದ ಅರಸನಾದ ಹಿಜ್ಕೀ ಯನ ಬಳಿಗೂ ಯೆರೂಸಲೇಮಿನಲ್ಲಿರುವ ಸಮಸ್ತ ಯೆಹೂದದವರ ಬಳಿಗೂ ತನ್ನ ಸೇವಕರನ್ನು ಕಳು ಹಿಸಿ--ಅಶ್ಶೂರಿನ ಅರಸನಾದ ಸನ್ಹೇರೀಬನು ಹೀಗೆ ಹೇಳುತ್ತಾನೆ--
ಆಗ ಕರ್ತನು, ಯೆಶಾಯನಿಗೆ--ನೀನು ಶೆಯಾರ್ ಯಾಶೂಬನೆಂಬ ನಿನ್ನ ಮಗನನ್ನು ಕರೆದುಕೊಂಡು ಹೋಗಿ ಮಡಿವಾಳರ ಹೊಲದ ಮೇಲೆ ಹೋಗುವ ದಾರಿಯಲ್ಲಿ ಮೇಲಿನ ಕೆರೆಯ ಕಾಲುವೆಯ ಕೊನೆಯ ಹತ್ತಿರ ಆಹಾಜನನ್ನು ಎದುರುಗೊಂಡು ಅವನಿಗೆ ಹೀಗೆ ಹೇಳು--
ತರ್ತಾನನು ಅಶ್ಶೂರಿನ ಅರಸನಾದ ಸರ್ಗೋನನು ಅವನನ್ನು ಕಳುಹಿಸಿದ್ದದ ರಿಂದ ಅಷ್ಡೋದಿಗೆ ಬಂದ ವರ್ಷದಲ್ಲಿ ಅವನು ಅಷ್ಡೋದಿಗೆ ವಿರೋಧವಾಗಿ ಯುದ್ಧಮಾಡಿ ಅದನ್ನು ಹಿಡಿದಾಗ,
ದಾವೀದನ ಪಟ್ಟಣದ ಕೋಟೆಯ ಒಡಕುಗಳನ್ನು ಬಹಳವೆಂದು ಸಹ ನೋಡುತ್ತೀರಿ; ಕೆಳಗಿನ ಕೊಳಕ್ಕೆ ನೀರನ್ನು ಕೂಡಿಸುತ್ತೀರಿ.
ಆಗ ಅಶ್ಶೂರದ ಅರಸನು ಲಾಕೀಷಿನಿಂದ ದೊಡ್ಡ ಸೈನ್ಯದ ಸಂಗಡ ರಬ್ಷಾಕನನ್ನು ಯೆರೂಸಲೇಮಿನಲ್ಲಿದ್ದ ಹಿಜ್ಕೀಯನ ಬಳಿಗೆ ಕಳುಹಿಸಿದನು. ಅವನು ಮೇಲಿನ ಕೆರೆಯ ಕಾಲುವೆಯ ಸವಿಾಪದಲ್ಲಿ ಅಗಸರ ಹೊಲದ ರಾಜಮಾರ್ಗದಲ್ಲಿ ನಿಂತುಕೊಂಡನು.