2 ಅರಸುಗಳು 2:10 · ಕನ್ನಡ ಬೈಬಲ್
ಅದಕ್ಕ ವನು--ನೀನು ಕಠಿಣವಾದದ್ದನ್ನು ಕೇಳಿದಿ; ಆದಾಗ್ಯೂ ನಾನು ನಿನ್ನ ಬಳಿಯಿಂದ ತೆಗೆಯಲ್ಪಡುವಾಗ ನೀನು ನನ್ನನ್ನು ನೋಡುವದಾದರೆ ನಿನಗೆ ದೊರಕುವದು; ಇಲ್ಲದಿದ್ದರೆ ದೊರಕುವುದಿಲ್ಲ ಅಂದನು.
Cross references
2 ಅರಸುಗಳು 2:12
ಎಲೀ ಷನು ಅದನ್ನು ನೋಡಿ--ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಾಯೇಲಿನ ರಥವೇ, ಅದರ ಕುದುರೆ ರಾಹುತರಾಗಿದ್ದವನೇ ಎಂದು ಕೂಗಿದನು. ಮತ್ತೆ ಅವ ನನ್ನು ಕಾಣಲಿಲ್ಲ. ಆಗ ಅವನು ತನ್ನ ವಸ್ತ್ರಗಳನ್ನು ತೆಗೆದು ಎರಡು ತುಂಡಾಗಿ ಹರಿದನು.
ಮಾರ್ಕ 11:22
ಯೇಸು ಪ್ರತ್ಯುತ್ತರವಾಗಿ ಅವರಿಗೆ ಹೇಳಿದ್ದೇನಂದರೆ --ದೇವರಲ್ಲಿ ನಂಬಿಕೆ ಇಡಿರಿ.
ಯೋಹಾನ 16:24
ನೀವು ಇದುವರೆಗೆ ನನ್ನ ಹೆಸರಿನಲ್ಲಿ ಏನೂ ಬೇಡಿಕೊಳ್ಳಲಿಲ್ಲ; ಬೇಡಿಕೊಳ್ಳಿರಿ, ನಿಮಗೆ ದೊರೆಯುವದು; ಆಗ ನಿಮ್ಮ ಆನಂದವು ಪರಿಪೂರ್ಣವಾಗುವದು.
ಅಪೋಸ್ತಲರ ಕೃತ್ಯಗಳು 1:9
ಇವುಗಳನ್ನು ಹೇಳಿದ ಮೇಲೆ ಅವರು ನೋಡುತ್ತಿರುವಾಗ ಆತನು ಮೇಲಕ್ಕೆ ಎತ್ತಲ್ಪಟ್ಟನು; ಮೋಡವು ಅವರ ದೃಷ್ಟಿಗೆ ಮರೆಮಾಡಿ ಆತನನ್ನು ಸ್ವೀಕರಿಸಿತು.