Home Bibles 2 ಅರಸುಗಳು 2:7 · ಕನ್ನಡ ಬೈಬಲ್
2 ಅರಸುಗಳು 2:7 · ಕನ್ನಡ ಬೈಬಲ್

ಪ್ರವಾದಿಗಳ ಮಕ್ಕಳಲ್ಲಿ ಐವತ್ತು ಮಂದಿ ಹೋಗಿ ದೂರದಲ್ಲಿ ಎದುರಾಗಿ ನಿಂತರು. ಆದರೆ ಆ ಇಬ್ಬರು ಯೊರ್ದನಿನ ಬಳಿಯಲ್ಲಿ ನಿಂತರು.

Cross references

1 ಸಮುವೇಲ 10:5

ತರುವಾಯ ಫಿಲಿಷ್ಟಿಯರ ಠಾಣವಿರುವ ದೇವರ ಗುಡ್ಡಕ್ಕೆ ಹೋಗುವಿ. ಅಲ್ಲಿಂದ ನೀನು ಪಟ್ಟಣದಲ್ಲಿ ಪ್ರವೇಶಿಸುವಾಗ ನಿನಗೆದುರಾಗಿ ವೀಣೆ, ದಮ್ಮಡಿ, ಪಿಳ್ಳಂಗೋವಿ, ಕಿನ್ನರಿಗಳನ್ನು ತಮ್ಮ ಮುಂದೆ ಇಟ್ಟುಕೊಂಡವರಾಗಿ ಮೇಲಿನಿಂದ ಇಳಿದು ಬರುವ ಪ್ರವಾದಿಗಳ ಗುಂಪು ಬರುವದು. ಅವರು ಪ್ರವಾದಿಸುವರು.

1 ಅರಸುಗಳು 18:4

ಈಜೆಬೆ ಲಳು ಕರ್ತನ ಪ್ರವಾದಿಗಳನ್ನು ಕೊಲ್ಲುವಾಗ ಓಬ ದ್ಯನು ನೂರು ಮಂದಿ ಪ್ರವಾದಿಗಳನ್ನು ತೆಗೆದುಕೊಂಡು ಐವತ್ತು ಐವತ್ತು ಮಂದಿಯಾಗಿ ಅವರನ್ನು ಗವಿಯಲ್ಲಿ ಬಚ್ಚಿಟ್ಟು ಅವರಿಗೆ ಆಹಾರವನ್ನೂ ನೀರನ್ನೂ ಕೊಟ್ಟು ಅವರನ್ನು ಸಂರಕ್ಷಣೆ ಮಾಡುತ್ತಾ ಇದ್ದನು.)

1 ಅರಸುಗಳು 18:13

ಈಜೆಬೆಲಳು ಕರ್ತನ ಪ್ರವಾದಿಗಳನ್ನು ಕೊಂದುಹಾಕಿದಾಗ ನಾನು ಕರ್ತನ ಪ್ರವಾದಿಗಳಲ್ಲಿ ನೂರು ಮಂದಿಯನ್ನು ಐವತ್ತು ಐವತ್ತು ಮಂದಿಯಾಗಿ ಗವಿಯಲ್ಲಿ ಬಚ್ಚಿಟ್ಟು ಅವ ರಿಗೆ ಆಹಾರವನ್ನೂ ನೀರನ್ನೂ ಕೊಟ್ಟು ಸಂರಕ್ಷಿಸಿದ್ದು ನನ್ನ ಯಜಮಾನನಾದ ನಿನಗೆ ಹೇಳಲ್ಪಟ್ಟದ್ದಿಲ್ಲವೋ?

1 ಅರಸುಗಳು 20:35

ಆದರೆ ಪ್ರವಾದಿಗಳ ಮಕ್ಕಳಲ್ಲಿ ಒಬ್ಬನು ಕರ್ತನ ಮಾತಿನಿಂದ ತನ್ನ ಜೊತೆಗಾರನಿಗೆ--ನೀನು ದಯ ಮಾಡಿ ನನ್ನನ್ನು ಹೊಡೆ ಅಂದನು.

2 ಅರಸುಗಳು 2:17

ಅವನುಕಳುಹಿಸಬೇಡಿರಿ ಅಂದನು. ಆದರೆ ಅವನು ನಾಚಿಕೆ ಪಡುವ ವರೆಗೂ ಅವನನ್ನು ಬಲವಂತಮಾಡಿದ್ದರಿಂದ ಅವನು--ಕಳುಹಿಸಿರಿ ಅಂದನು. ಅವರು ಐವತ್ತು ಮಂದಿಯನ್ನು ಕಳುಹಿಸಿದರು. ಇವರು ಮೂರು ದಿವಸ ಹುಡುಕಿದರೂ ಅವನನ್ನು ಕಾಣದೆ ಹೋದರು.

2 ಅರಸುಗಳು 4:1

ಪ್ರವಾದಿಗಳ ಮಕ್ಕಳ ಹೆಂಡತಿಯರಲ್ಲಿ ಒಬ್ಬಳು ಎಲೀಷನಿಗೆ ಕೂಗಿ--ನಿನ್ನ ದಾಸ ನಾದ ನನ್ನ ಗಂಡನು ಸತ್ತನು; ನಿನ್ನ ದಾಸನು ಕರ್ತನಿಗೆ ಭಯಪಡುವವನಾಗಿದ್ದನೆಂದು ನೀನು ಬಲ್ಲೆ; ಈಗ ಸಾಲಗಾರನು ನನ್ನ ಇಬ್ಬರು ಮಕ್ಕಳನ್ನು ತನಗೆ ದಾಸ ರಾಗಿ ತೆಗೆದುಕೊಳ್ಳಲು ಬಂದಿದ್ದಾನೆ ಅಂದಳು.

2 ಅರಸುಗಳು 5:22

ಅವನುಕ್ಷೇಮ; ಇಗೋ, ಪ್ರವಾದಿಗಳ ಮಕ್ಕಳಲ್ಲಿ ಇಬ್ಬರು ಯೌವನಸ್ಥರು ಎಫ್ರಾಯಾಮ್‌ ಬೆಟ್ಟದಿಂದ ಈಗಲೇ ನನ್ನ ಬಳಿಗೆ ಬಂದಿದ್ದಾರೆ; ನೀನು ದಯಮಾಡಿ ಅವರಿಗೆ ಒಂದು ತಲಾಂತು ಬೆಳ್ಳಿಯನ್ನೂ ಎರಡು ದುಸ್ತು ಬಟ್ಟೆ ಗಳನ್ನೂ ಕೊಡಬೇಕೆಂದು ನಿನಗೆ ಹೇಳು ಎಂದು ನನ್ನ ಯಜಮಾನನು ಕಳುಹಿಸಿದ್ದಾನೆ ಅಂದನು.

2 ಅರಸುಗಳು 6:1

ಪ್ರವಾದಿಗಳ ಮಕ್ಕಳು ಎಲೀಷನಿಗೆ-- ಇಗೋ, ಈಗ ನಾವು ನಿನ್ನ ಸಂಗಡ ವಾಸವಾಗಿರುವ ಸ್ಥಳವು ನಮಗೆ ಇಕ್ಕಟ್ಟಾಗಿದೆ.

2 ಅರಸುಗಳು 9:1

ಪ್ರವಾದಿಯಾದ ಎಲೀಷನು ಪ್ರವಾದಿಗಳ ಮಕ್ಕಳಲ್ಲಿ ಒಬ್ಬನನ್ನು ಕರೆದು ಅವನಿಗೆ--ನಡುವನ್ನು ಕಟ್ಟಿಕೊಂಡು ಈ ಎಣ್ಣೆಯ ಪಾತ್ರೆಯನ್ನು ನಿನ್ನ ಕೈಯಲ್ಲಿ ತೆಗೆದುಕೊಂಡು ಗಿಲ್ಯಾದಿನಲ್ಲಿರುವ ರಾಮೋತಿಗೆ ಹೋಗು.

ಆಮೋಸ 7:14

ಆಗ ಆಮೋಸನು ಅಮಚ್ಯನಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನಂದರೆ--ನಾನು ಪ್ರವಾದಿಯಲ್ಲ, ಪ್ರವಾ ದಿಯ ಮಗನೂ ಅಲ್ಲ; ಆದರೆ ನಾನು ಕುರುಬನೂ ಹತ್ತಿ ಹಣ್ಣುಗಳನ್ನು ಕೂಡಿಸುವವನೂ ಆಗಿದ್ದೇನೆ.

Interlinear

Choose Theme