Cross references
ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ಹೊರಡಿಸಿದ ಅನ್ಯ ಜನಾಂಗಗಳ ಅಸಹ್ಯವಾದವುಗಳ ಹಾಗೆಯೇ ಅವನು ಕರ್ತನ ದೃಷ್ಟಿಗೆ ಕೆಟ್ಟದ್ದನ್ನು ಮಾಡಿದನು.
ಯೆಹೂದದ ಅರಸನಾದ ಮನಸ್ಸೆಯು ತನ್ನ ಮುಂದೆ ಇದ್ದ ಅಮೋರಿಯರು ಮಾಡಿದ ಎಲ್ಲಕ್ಕಿಂತ ಕೆಟ್ಟದ್ದಾದ ಈ ಅಸಹ್ಯಗಳನ್ನು ಮಾಡಿದನು. ಯೆಹೂದವನ್ನು ತನ್ನ ವಿಗ್ರಹಗಳಿಂದ ಪಾಪಮಾಡಿಸಿದನು. ಈ ಕಾರಣ ದಿಂದ ಇಸ್ರಾಯೇಲಿನ ದೇವರಾದ ಕರ್ತನು ಹೇಳು ವದೇನಂದರೆ--
ಯೆಹೂದದ ಅರಸರು ಉಂಟು ಮಾಡಿದ ಆಹಾಜನ ಮೇಲು ಮಾಳಿಗೆಯ ಮೇಲೆ ಇದ್ದ ಬಲಿಪೀಠಗಳನ್ನೂ ಮನಸ್ಸೆಯು ಕರ್ತನ ಮನೆಯ ಎರಡು ಅಂಗಳಗಳಲ್ಲಿ ಮಾಡಿದ ಬಲಿಪೀಠ ಗಳನ್ನೂ ಅರಸನು ಕೆಡವಿಸಿ ಅಲ್ಲಿಂದ ಅದರ ಧೂಳನ್ನು ಕಿದ್ರೋನ್ ಹಳ್ಳದಲ್ಲಿ ಹಾಕಿಸಿದನು.
ಇದಲ್ಲದೆ ಯಾಜಕನಾದ ಹಿಲ್ಕೀಯನು ಕರ್ತನ ಮನೆಯಲ್ಲಿ ಕಂಡುಕೊಂಡ ಪುಸ್ತಕದಲ್ಲಿ ಬರೆಯಲ್ಪಟ್ಟ ನ್ಯಾಯ ಪ್ರಮಾಣದ ಮಾತುಗಳನ್ನು ಯೋಷೀಯನು ಈಡೇ ರಿಸುವ ಹಾಗೆ ಯೆಹೂದ ದೇಶದಲ್ಲಿಯೂ ಯೆರೂ ಸಲೇಮಿನಲ್ಲಿಯೂ ಕಂಡು ಹಿಡಿಯಲ್ಪಟ್ಟ ಯಕ್ಷಿಣಿ ಗಾರರನ್ನೂ ಮಂತ್ರಗಾರರನ್ನೂ ವಿಗ್ರಹಗಳನ್ನೂ ಮಣ್ಣು ದೇವರುಗಳನ್ನೂ ಎಲ್ಲಾ ಅಸಹ್ಯಕರವಾದವುಗಳನ್ನೂ ತೆಗೆದುಹಾಕಿ ಬಿಟ್ಟನು.
ಅವನು ತನ್ನ ತಂದೆಗಳು ಮಾಡಿದ ಎಲ್ಲಾದರ ಪ್ರಕಾರ ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.
ಅವನು ತನ್ನ ತಂದೆಯು ಮಾಡಿದ ಪ್ರಕಾರವೆಲ್ಲಾ ಕರ್ತನ ದೃಷ್ಟಿಗೆ ಕೆಟ್ಟದ್ದನ್ನು ಮಾಡಿದನು.