Home Bibles 2 ಅರಸುಗಳು 22:11 · ಕನ್ನಡ ಬೈಬಲ್
2 ಅರಸುಗಳು 22:11 · ಕನ್ನಡ ಬೈಬಲ್

ಅರಸನು ನ್ಯಾಯಪ್ರಮಾಣದ ಪುಸ್ತಕದ ಮಾತು ಗಳನ್ನು ಕೇಳಿದಾಗ ತನ್ನ ವಸ್ತ್ರಗಳನ್ನು ಹರಿದುಕೊಂಡನು.

Cross references

ಯೆಹೋಶುವ 7:6

ಆಗ ಯೆಹೋಶುವನು ತನ್ನ ವಸ್ತ್ರಗಳನ್ನು ಹರಿದುಕೊಂಡು ತಾನೂ ಇಸ್ರಾಯೇಲಿನ ಹಿರಿಯರೂ ತಮ್ಮ ತಲೆಗಳ ಮೇಲೆ ಧೂಳನ್ನು ಹಾಕಿಕೊಂಡು ಸಾಯಂಕಾಲದ ವರೆಗೆ ಕರ್ತನ ಮಂಜೂಷದ ಮುಂದೆ ನೆಲದಮೇಲೆ ಬೋರಲು ಬಿದ್ದರು.

2 ಅರಸುಗಳು 22:19

ಈ ಸ್ಥಳಕ್ಕೂ ಅದರ ನಿವಾಸಿಗಳಿಗೂ ವಿರೋಧವಾಗಿ ಅವರು ನಾಶವೂ ಶಾಪವೂ ಆಗುವದೆಂದು ನಾನು ಹೇಳಿದ್ದನ್ನು ನೀನು ಕೇಳಿದಾಗ ನಿನ್ನ ಹೃದಯವು ಮೆತ್ತಗಾಗಿ ನೀನು ನಿನ್ನನ್ನು ಕರ್ತನ ಮುಂದೆ ತಗ್ಗಿಸಿ ನಿನ್ನ ವಸ್ತ್ರಗಳನ್ನು ಹರಿದುಕೊಂಡು ನನ್ನ ಮುಂದೆ ಅತ್ತದ್ದನ್ನು ನಾನೇ ಕೇಳಿದ್ದೇನೆಂದು ಕರ್ತನು ಹೇಳುತ್ತಾನೆ.ಆದದರಿಂದ ಇಗೋ, ನಾನು ನಿನ್ನನ್ನು ನಿನ್ನ ಪಿತೃಗಳ ಬಳಿಯಲ್ಲಿ ಸೇರಿಸಿಕೊಳ್ಳುವೆನು; ನೀನು ಸಮಾಧಾನದಿಂದ ನಿನ್ನ ಸಮಾಧಿಗೆ ಸೇರುವಿ; ನಾನು ಈ ಸ್ಥಳದ ಮೇಲೆ ಬರಮಾಡುವ ಕೇಡನ್ನು ನಿನ್ನ ಕಣ್ಣುಗಳು ಕಾಣುವದಿಲ್ಲ ಎಂಬದು. ಅವರು ಹೋಗಿ ಈ ಪ್ರತ್ಯುತ್ತರವನ್ನು ಅರಸನಿಗೆ ತಿಳಿಸಿದರು.

2 ದಿನವೃತ್ತಾಂತ 34:19

ಅರಸನು ನ್ಯಾಯಪ್ರಮಾಣದ ವಾಕ್ಯಗಳನ್ನು ಕೇಳಿ ದಾಗ ತನ್ನ ವಸ್ತ್ರಗಳನ್ನು ಹರಿದುಕೊಂಡನು.

ಕೀರ್ತನೆಗಳು 119:120

ನಿನ್ನ ಹೆದರಿಕೆಯಿಂದ ನನ್ನ ಶರೀರವು ನಡುಗುತ್ತದೆ. ನಾನು ನಿನ್ನ ತೀರ್ಪುಗಳಿಗೆ ಭಯಪಡುತ್ತೇನೆ.

ಯೆಶಾಯ 66:2

ಇವುಗಳ ನ್ನೆಲ್ಲಾ ನನ್ನ ಕೈ ಉಂಟುಮಾಡಿತು; ಇವುಗಳೆಲ್ಲಾ ಇದ್ದವೆಂದು ಕರ್ತನು ಅನ್ನುತ್ತಾನೆ. ಆದರೆ ಇವನ ಮೇಲೆ ದೃಷ್ಟಿ ಇಡುವೆನು ದೀನನೂ ಜಜ್ಜಿದ ಆತ್ಮವುಳ್ಳ ವನೂ ನನ್ನ ವಾಕ್ಯಕ್ಕೆ ನಡುಗುವವನೂ ಯಾವನೋ ಅವನ ಮೇಲೆಯೂ ದೃಷ್ಟಿ ಇಡುವೆನು.

ಯೆರೆಮಿಯ 36:16

ಯೆರೆವಿಾಯನು ನೆಲಮಾಳಿಗೆಯಲ್ಲಿಯೂ ಸಣ್ಣಕೋಣೆಯಲ್ಲಿಯೂ ಪ್ರವೇಶಿಸಿ ಬಹಳ ದಿವಸ ಅಲ್ಲಿ ಇದ್ದ ಮೇಲೆ ಅರಸನಾದ ಚಿದ್ಕೀಯನು

ಯೋವೇಲ 2:13

ನಿಮ್ಮ ಬಟ್ಟೆಗಳನ್ನಲ್ಲ, ನಿಮ್ಮ ಹೃದಯವನ್ನು ಹರಕೊಂಡು ನಿಮ್ಮ ದೇವರಾದ ಕರ್ತನ ಕಡೆಗೆ ತಿರುಗಿಕೊಳ್ಳಿರಿ; ಆತನು ದಯೆ ಕರುಣೆ ದೀರ್ಘಶಾಂತಿ ಮಹಾ ಕೃಪೆಯೂ ಉಳ್ಳವನಾಗಿ ಕೇಡಿಗೆ ಪಶ್ಚಾತ್ತಾಪಪಡುತ್ತಾನೆ.

ಯೋನ 3:6

ಆ ಮಾತು ನಿನೆವೆಯ ಅರಸನಿಗೆ ಮುಟ್ಟಿದಾಗ ಅವನು ತನ್ನ ಸಿಂಹಾಸನದಿಂದ ಎದ್ದು ತನ್ನ ನಿಲುವಂಗಿಯನ್ನು ತೆಗೆದಿಟ್ಟು ಗೋಣೀತಟ್ಟನ್ನು ಉಟ್ಟುಕೊಂಡು ಬೂದಿ ಯಲ್ಲಿ ಕೂತು ಕೊಂಡನು.

Interlinear

Choose Theme