2 ಅರಸುಗಳು 22:8 · ಕನ್ನಡ ಬೈಬಲ್
ಆಗ ಪ್ರಧಾನ ಯಾಜಕನಾದ ಹಿಲ್ಕೀಯನು ಲೇಖಕ ನಾದ ಶಾಫಾನನಿಗೆ--ನಾನು ಕರ್ತನ ಮನೆಯಲ್ಲಿ ನ್ಯಾಯಪ್ರಮಾಣದ ಪುಸ್ತಕವನ್ನು ಕಂಡುಕೊಂಡಿದ್ದೇನೆ ಅಂದನು; ಹಿಲ್ಕೀಯನು ಆ ಪುಸ್ತಕವನ್ನು ಶಾಫಾನನಿಗೆ ಕೊಟ್ಟನು; ಅವನು ಅದನ್ನು ಓದಿದನು.
Cross references
ದ್ವಿತೀಯೋಪದೇಶಕಾಂಡ 31:24
ಇದಲ್ಲದೆ ಮೋಶೆ ಈ ನ್ಯಾಯಪ್ರಮಾಣದ ವಾಕ್ಯಗಳನ್ನು ಪುಸ್ತಕದಲ್ಲಿ ಬರೆದು ಮುಗಿಸಿದಾಗ
ದ್ವಿತೀಯೋಪದೇಶಕಾಂಡ 31:26
ನ್ಯಾಯ ಪ್ರಮಾಣದ ಈ ಪುಸ್ತಕವನ್ನು ತಕ್ಕೊಂಡು ನಿಮ್ಮ ದೇವ ರಾದ ಕರ್ತನ ಒಡಂಬಡಿಕೆಯ ಮಂಜೂಷದ ಒಂದು ಪಾರ್ಶ್ವದಲ್ಲಿ ಇಡಿರಿ; ಅದು ನಿಮಗೆ ವಿರೋಧವಾದ ಸಾಕ್ಷಿಗೆ ಅಲ್ಲಿ ಇರಲಿ.
2 ಅರಸುಗಳು 23:2
ಆಗ ಅರಸನೂ ಅವನ ಸಂಗಡ ಯೆಹೂದದ ಜನರೆಲ್ಲರೂ ಯೆರೂ ಸಲೇಮಿನ ನಿವಾಸಿಗಳೆಲ್ಲರೂ ಯಾಜಕರೂ ಪ್ರವಾದಿ ಗಳೂ ಹಿರಿಕಿರಿಯರಾದ ಎಲ್ಲಾ ಜನರೂ ಕರ್ತನ ಆಲಯಕ್ಕೆ ಹೋದರು. ಅವರು ಕೇಳುವ ಹಾಗೆ ಕರ್ತನ ಆಲಯದಲ್ಲಿ ಸಿಕ್ಕಿದ ಒಡಂಬಡಿಕೆಯ ಪುಸ್ತಕದ ಮಾತುಗಳನೆಲ್ಲಾ ಅವನು ಓದಿದನು.
2 ದಿನವೃತ್ತಾಂತ 34:14
ಆದರೆ ಕರ್ತನ ಆಲಯಕ್ಕೆ ತಂದ ಹಣವನ್ನು ಅವರು ಹೊರಗೆ ತಕ್ಕೊಂಡು ಬರುವಾಗ ಯಾಜಕ ನಾದ ಹಿಲ್ಕೀಯನು ಮೋಶೆಯ ಕೈಯಿಂದಾದ ಕರ್ತನ ನ್ಯಾಯಪ್ರಮಾಣದ ಪುಸ್ತಕವನ್ನು ಕಂಡುಕೊಂಡನು.