ಇದಲ್ಲದೆ ಯೆರೂಸಲೇಮಿನ ಮುಂದೆ ಮೋಸದ ಬೆಟ್ಟದ ಬಲ ಪಾರ್ಶ್ವದಲ್ಲಿದ್ದ ಚೀದೋನ್ಯರ ಅಸಹ್ಯಕರವಾದ ಅಷ್ಟೋ ರೆತಿಗೂ ಮೋವಾಬ್ಯರ ಅಸಹ್ಯಕರವಾದ ಕೆಮೋಷ ನಿಗೂ ಅಮ್ಮೋನಿನ ಮಕ್ಕಳ ಅಸಹ್ಯಕರವಾದ ಮಿಲ್ಕೋ ಮ್‌ನಿಗೂ ಇಸ್ರಾಯೇಲಿನ ಅರಸನಾದ ಸೊಲೊ ಮೋನನು ಕಟ್ಟಿಸಿದ ಉನ್ನತ ಸ್ಥಳಗಳನ್ನೂ ಅರಸನು ಹೊಲೆಮಾಡಿ
Cross references
ಮೋವಾಬೇ, ನಿನಗೆ ಅಯ್ಯೋ! ಓ ಕೇಮೋಷಿನ ಜನವೇ, ನಿಮಗೆ ದುರ್ಗತಿ ಉಂಟಾಯಿತಲ್ಲಾ; ಅವನು ತಪ್ಪಿಸಿಕೊಂಡ ತನ್ನ ಕುಮಾರ ಕುಮಾರ್ತೆಯರನ್ನು ಅಮೋರಿಯರ ಅರಸನಾದ ಸೀಹೋನನ ಸೆರೆಗೆ ಕೊಟ್ಟನು.
ಅವರು ಕರ್ತನನ್ನು ಬಿಟ್ಟು ಬಾಳನನ್ನೂ ಅಷ್ಟೋರೆತನ್ನೂ ಸೇವಿಸಿದರು.
ಆದರೆ ಇಸ್ರಾಯೇಲ್ ಮಕ್ಕಳು ತಿರಿಗಿ ಕರ್ತನ ಮುಂದೆ ಕೆಟ್ಟತನಮಾಡಿ ಬಾಳನನ್ನೂ ಅಷ್ಟೋರೆತನ್ನೂ ಸಿರಿಯಾ ದೇಶದ ದೇವರುಗಳನ್ನೂ ಚೀದೋನಿನ ದೇವರುಗಳನ್ನೂ ಮೋವಾಬಿನ ದೇವರುಗಳನ್ನೂ ಅಮ್ಮೋನನ ಮಕ್ಕಳ ದೇವರುಗಳನ್ನೂ ಫಿಲಿಷ್ಟಿಯರ ದೇವರುಗಳನ್ನೂ ಸೇವಿಸುವವರಾಗಿ ಕರ್ತನನ್ನು ಸೇವಿ ಸದೆ ಆತನನ್ನು ಬಿಟ್ಟು ಹೋದರು.
ನಿನ್ನ ದೇವರಾದ ಕೆಮೋಷನು ಸ್ವತಂತ್ರಿ ಸಿಕೊಳ್ಳಲು ನಿನಗೆ ಕೊಡುವ ದೇಶವನ್ನು ನೀನು ಸ್ವತಂತ್ರಿಸಿಕೊಳ್ಳುವದಿಲ್ಲವೋ? ಹಾಗೆಯೇ ನಮ್ಮ ದೇವರಾದ ಕರ್ತನು ಯಾರನ್ನು ನಮ್ಮ ಮುಂದೆ ಹೊರಡಿಸುವನೋ ಅವರನ್ನು ನಾವು ಸ್ವಾಧೀನಮಾಡಿ ಕೊಳ್ಳುವೆವು.
ಆಗ ಇಸ್ರಾಯೇಲ್ ಮಕ್ಕಳು ಬಾಳನ್ನೂ ಅಷ್ಟೋರೆತ್‌ನ್ನೂ ತೆಗೆದುಹಾಕಿ ಕರ್ತ ನೊಬ್ಬನನ್ನೇ ಸೇವಿಸಿದರು.
ಇವರು ಅವರ ಸಂಗಡ ಯುದ್ಧಮಾಡಿದರು. ಆದದರಿಂದ ಅವರು ಕರ್ತನಿಗೆ ಮೊರೆಯಿಟ್ಟು--ನಾವು ಕರ್ತನಾದ ನಿನ್ನನ್ನು ಬಿಟ್ಟು ಬಾಳನನ್ನೂ ಅಷ್ಟೋರೆತನ್ನೂ ಸೇವಿಸಿದ್ದರಿಂದ ಪಾಪಮಾಡಿದೆವು. ಈಗ ನೀನು ನಮ್ಮ ಶತ್ರುಗಳ ಕೈಯಿಂದ ನಮ್ಮನ್ನು ಬಿಡಿಸು, ನಾವು ನಿನ್ನನ್ನು ಸೇವಿಸು ವೆವು ಅಂದರು.
ಸೊಲೊಮೋನನು ಚೀದೋನ್ಯರ ದೇವತೆಯಾದ ಅಷ್ಟೋರೆತನ್ನೂ ಅಮ್ಮೋ ನ್ಯರ ಅಸಹ್ಯಕರವಾದ ಮಿಲ್ಕೋಮನ್ನೂ ಹಿಂಬಾ ಲಿಸಿದನು.
ಆಗ ಸೊಲೊಮೋನನು ಮೋವಾಬಿನ ಅಸಹ್ಯಕರವಾದ ಕೆಮೋಷ್‌ಗೋಸ್ಕ ರವೂ ಅಮ್ಮೋನನ ಮಕ್ಕಳ ಅಸಹ್ಯಕರವಾದ ಮೋಲೆ ಕ್‌ನಿಗೋಸ್ಕರವೂ ಯೆರೂಸಲೇಮಿಗೆ ಎದುರಾಗಿರುವ ಬೆಟ್ಟದಲ್ಲಿ ಎತ್ತರವಾದ ಸ್ಥಳವನ್ನು ಕಟ್ಟಿಸಿದನು.
ಅವನ ತಂದೆಯಾದ ದಾವೀದನ ಹಾಗೆ ನನ್ನ ಕಟ್ಟಳೆಗಳನ್ನೂ ನ್ಯಾಯಗಳನ್ನೂ ಕೈಕೊಳ್ಳು ವದಕ್ಕೂ ನನ್ನ ದೃಷ್ಟಿಗೆ ಮೆಚ್ಚಿಕೆಯಾದದ್ದನ್ನು ಮಾಡು ವದಕ್ಕೂ ಅವರು ನನ್ನ ಮಾರ್ಗಗಳಲ್ಲಿ ನಡೆಯದೆ ನನ್ನನ್ನು ಬಿಟ್ಟು ಚೀದೋನ್ಯರ ದೇವತೆಯಾದ ಅಷ್ಟೋ ರೆತನ್ನೂ ಮೋವಾಬ್ಯರ ದೇವರಾದ ಕೆಮೋಷನ್ನೂ ಅಮ್ಮೋನನ ಮಕ್ಕಳ ದೇವರಾದ ಮಿಲ್ಕೋಮನ್ನೂ ಆರಾಧಿಸಿದ್ದಾರೆ.
ಇಸ್ರಾಯೇಲಿನ ಅರಸನಾದ ಸೊಲೊಮೋನನು ಇವುಗಳಿಂದ ಪಾಪ ಮಾಡಿದ ನಲ್ಲವೇ? ಆದರೆ ಅನೇಕ ಜನಾಂಗಗಳಲ್ಲಿ ಅವನ ಹಾಗೆ ಮತ್ತೊಬ್ಬ ಅರಸನು ಇದ್ದದ್ದಿಲ್ಲ; ಅವನು ತನ್ನ ದೇವರಿಗೆ ಪ್ರಿಯನಾಗಿದ್ದ ಕಾರಣ ದೇವರು ಅವನನ್ನು ಸಮಸ್ತ ಇಸ್ರಾಯೇಲಿನ ಮೇಲೆ ಅರಸನನ್ನಾಗಿ ಮಾಡಿ ದನು; ಆದರೂ ಅನ್ಯಸ್ತ್ರೀಯರು ಅವನನ್ನು ಸಹ ಪಾಪ ಮಾಡುವ ಹಾಗೆ ಮಾಡಿದರು.
ಎದೋಮಿನ ವಿಷಯವಾಗಿ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ತೇಮಾನ್‌ನಲ್ಲಿ ಇನ್ನು ಮೇಲೆ ಜ್ಞಾನವಿರುವದಿಲ್ಲವೋ? ವಿವೇಕಿಗಳಿಂದ ಆಲೋಚ ನೆಯು ನಾಶವಾಯಿತೋ? ಅವರ ಜ್ಞಾನವು ಕಾಣದೆ ಹೋಯಿತೋ?
ಬೊಚ್ರವು ಹಾಳೂ ನಿಂದೆಯೂ ಅಡವಿಯೂ ಶಾಪವೂ ಆಗುವದೆಂದು ಅದರ ಪಟ್ಟಣಗಳೆಲ್ಲಾ ಎಂದೆಂದಿಗೂ ಅಡವಿ ಸ್ಥಳಗಳಾ ಗುವವೆಂದೂ ನನ್ನ ಮೇಲೆ ಪ್ರಮಾಣ ಮಾಡಿಕೊಂಡಿದ್ದೇನೆಂದು ಕರ್ತನು ಅನ್ನುತ್ತಾನೆ.
ಬಂಡೆಯ ಬಿರುಕು ಗಳಲ್ಲಿ ವಾಸಮಾಡುವವನೇ ಗುಡ್ಡದ ಕೊನೆಯನ್ನು ಹಿಡಿಯುವವನೇ, ನಿನ್ನ ಭಯಂಕರತ್ವವೂ ಹೃದಯದ ಗರ್ವವೂ ನಿನ್ನನ್ನು ಮೋಸಗೊಳಿಸಿದವು; ನೀನು ಹದ್ದಿನಂತೆ ನಿನ್ನ ಗೂಡನ್ನು ಎತ್ತರ ಮಾಡಿದರೂ ಅಲ್ಲಿಂದ ನಿನ್ನನ್ನು ಇಳಿಸುತ್ತೇನೆಂದು ಕರ್ತನು ಅನ್ನುತ್ತಾನೆ.
ಮಾಳಿಗೆಗಳ ಮೇಲೆ ಆಕಾಶದ ಸೈನ್ಯವನ್ನು ಆರಾಧಿಸುವವರನ್ನೂ ಕರ್ತನ ಮೇಲೆಯೂ ಮಲ್ಕಾಮನ ಮೇಲೆಯೂ ಆಣೆ ಇಟ್ಟುಕೊಳ್ಳುವವರನ್ನೂ