ಯೋಷೀಯನು ತಿರುಗಿಕೊಂಡು ಅಲ್ಲಿ ಬೆಟ್ಟದಲ್ಲಿದ್ದ ಸಮಾಧಿಗಳನ್ನು ಕಂಡು, ಕಳುಹಿಸಿ, ಸಮಾಧಿಗಳಿಂದ ಎಲುಬುಗಳನ್ನು ತೆಗೆದುಕೊಂಡು ಈ ಮಾತುಗಳನ್ನು ಪ್ರಕಟಿಸಿದ ದೇವರ ಮನುಷ್ಯನು ಸಾರಿದ ಕರ್ತನ ವಾಕ್ಯದ ಪ್ರಕಾರ ಬಲಿಪೀಠದ ಮೇಲೆ ಅವುಗಳನ್ನು ಸುಟ್ಟುಬಿಟ್ಟು ಅದನ್ನು ಹೊಲೆಮಾಡಿದನು.
Cross references
ಯಾರೊಬ್ಬಾಮನು ಧೂಪವನ್ನರ್ಪಿಸಲು ಬಲಿಪೀಠದ ಬಳಿಯಲ್ಲಿ ನಿಂತಿರುವಾಗ ಇಗೋ, ಕರ್ತನ ಮಾತಿನಂತೆ ದೇವರ ಮನುಷ್ಯನು ಯೆಹೂದದಿಂದ ಬೇತೇಲಿಗೆ ಬಂದನು.
ಅವನು ಆ ಪೀಠಕ್ಕೆ ವಿರೋಧವಾಗಿ ಕರ್ತನ ಮಾತಿನಲ್ಲಿ ಕೂಗಿ--ಪೀಠವೇ, ಪೀಠವೇ, ಇಗೋ, ದಾವೀದನ ಸಂತಾನದಲ್ಲಿ ಯೋಷೀಯನೆಂದು ಹೆಸರುಳ್ಳ ಒಬ್ಬ ಕುಮಾರನು ಹುಟ್ಟುವನು; ಅವನು ನಿನ್ನ ಮೇಲೆ ಧೂಪವನ್ನರ್ಪಿಸುವ ಉನ್ನತ ಸ್ಥಳಗಳ ಯಾಜಕರನ್ನು ಬಲಿಯಾಗಿ ಅರ್ಪಿಸುವನು; ಮನುಷ್ಯರ ಎಲುಬುಗಳು ನಿನ್ನ ಮೇಲೆ ಸುಡಲ್ಪಡುವವೆಂದು ಕರ್ತನು ಹೇಳುತ್ತಾನೆ ಅಂದನು.
ಅವನು ಬೇತೇಲಿನಲ್ಲಿರುವ ಬಲಿಪೀಠಕ್ಕೆ ವಿರೋಧವಾಗಿಯೂ ಸಮಾರ್ಯ ಪಟ್ಟಣಗಳಲ್ಲಿರುವ ಉನ್ನತ ಸ್ಥಳಗಳ ಸಮಸ್ತ ಮನೆಗಳಿಗೆ ವಿರೋಧವಾಗಿಯೂ ಕರ್ತನ ಮಾತಿನಂತೆ ನಿಶ್ಚಯವಾಗಿ ಆಗುವದು ಅಂದನು.
ಆಕಾಶವೂ ಭೂಮಿಯೂ ಅಳಿದುಹೋಗುವವು; ಆದರೆ ನನ್ನ ಮಾತುಗಳು ಅಳಿದುಹೋಗುವದೇ ಇಲ್ಲ.
ಹಾಗಾದರೆ ದೇವರವಾಕ್ಯವನ್ನು ಹೊಂದಿದವರು ದೇವರುಗಳೆಂದು ಆತನು ಕರೆದಿರುವಲ್ಲಿ ಬರಹವು ವ್ಯರ್ಥವಾಗಲಾರದಷ್ಟೆ.