ಆಗ ಅರಸನೂ ಅವನ ಸಂಗಡ ಯೆಹೂದದ ಜನರೆಲ್ಲರೂ ಯೆರೂ ಸಲೇಮಿನ ನಿವಾಸಿಗಳೆಲ್ಲರೂ ಯಾಜಕರೂ ಪ್ರವಾದಿ ಗಳೂ ಹಿರಿಕಿರಿಯರಾದ ಎಲ್ಲಾ ಜನರೂ ಕರ್ತನ ಆಲಯಕ್ಕೆ ಹೋದರು. ಅವರು ಕೇಳುವ ಹಾಗೆ ಕರ್ತನ ಆಲಯದಲ್ಲಿ ಸಿಕ್ಕಿದ ಒಡಂಬಡಿಕೆಯ ಪುಸ್ತಕದ ಮಾತುಗಳನೆಲ್ಲಾ ಅವನು ಓದಿದನು.
Cross references
ಬಾಗಲಲ್ಲಿದ್ದ ಮನುಷ್ಯರನ್ನು ಕಿರಿಯರಿಂದ ಹಿರಿಯರ ವರೆಗೆ ಕುರುಡರನ್ನಾಗಿ ಮಾಡಿದರು. ಆಗ ಅವರು ಬಾಗಲನ್ನು ಕಂಡುಕೊಳ್ಳಲಾರದೆ ಬೇಸರಗೊಂಡರು.
ಮೋಶೆಯು ಅವರಿಗೆ--ಪ್ರತಿ ಏಳು ವರುಷಗಳ ಕೊನೆಯಲ್ಲಿರುವ ಬಿಡುಗಡೆಯ ಪರಿಶುದ್ಧವಾದ ವರುಷದಲ್ಲಿ, ಅಂದರೆ ಗುಡಾರಗಳ ಹಬ್ಬದಲ್ಲಿ
ನಿನ್ನ ದೇವರಾದ ಕರ್ತನ ಸನ್ನಿಧಿಯಲ್ಲಿ, ಆತನು ಆದು ಕೊಳ್ಳುವ ಸ್ಥಳದಲ್ಲಿ ಇಸ್ರಾಯೇಲಿನವರೆಲ್ಲರು ಕಾಣಿಸಿ ಕೊಳ್ಳುವದಕ್ಕೆ ಬಂದಾಗ ನೀನು ಈ ನ್ಯಾಯಪ್ರಮಾಣ ವನ್ನು ಇಸ್ರಾಯೇಲಿನವರೆಲ್ಲರ ಮುಂದೆ ಅವರು ಕೇಳುವಹಾಗೆ ಓದಬೇಕು.
ನ್ಯಾಯ ಪ್ರಮಾಣದ ಈ ಪುಸ್ತಕವನ್ನು ತಕ್ಕೊಂಡು ನಿಮ್ಮ ದೇವ ರಾದ ಕರ್ತನ ಒಡಂಬಡಿಕೆಯ ಮಂಜೂಷದ ಒಂದು ಪಾರ್ಶ್ವದಲ್ಲಿ ಇಡಿರಿ; ಅದು ನಿಮಗೆ ವಿರೋಧವಾದ ಸಾಕ್ಷಿಗೆ ಅಲ್ಲಿ ಇರಲಿ.
ಆದರೆ ಅವರು ಅದನ್ನು ಸುತ್ತಿ ತಂದ ತರುವಾಯ ಕರ್ತನ ಕೈ ಆ ಪಟ್ಟಣದ ಮೇಲೆ ಬಂದು ಮಹಾ ದೊಡ್ಡನಾಶ ಮಾಡಿತು. ಇದಲ್ಲದೆ ಕರ್ತನು ಚಿಕ್ಕವರಿಂದ ಹಿರಿಯರ ವರೆಗೂ ಆ ಪಟ್ಟಣದ ಮನುಷ್ಯರನ್ನು ಹೊಡೆದನು; ಅವರಿಗೆ ಗಡ್ಡೆರೋಗ ಹುಟ್ಟಿತು.
ಅದರಲ್ಲಿದ್ದ ಸ್ತ್ರೀಯರನ್ನು ಸೆರೆಹಿಡಿದು ಹಿರಿಯರ ನ್ನಾದರೂ ಕಿರಿಯರನ್ನಾದರೂ ಕೊಂದುಹಾಕದೆ ಅವ ರನ್ನು ಸೆರೆಯಾಗಿ ತೆಗೆದುಕೊಂಡು ತಮ್ಮ ಮಾರ್ಗ ವಾಗಿ ಹೊರಟುಹೋದರು.
ಇಸ್ರಾಯೇಲ್ ಮಕ್ಕಳು ಐಗುಪ್ತ ದೇಶದೊಳಗಿಂದ ಬಂದ ಕಾಲದಲ್ಲಿ ಕರ್ತನು ಅವರಿಗೆ ಒಡಂಬಡಿಕೆ ಮಾಡಿದಾಗ ಮೋಶೆಯು ಹೋರೇಬಿನ ಬಳಿಯಲ್ಲಿ ಮಂಜೂಷದೊಳಗೆ ಇಟ್ಟ ಕಲ್ಲಿನ ಎರಡು ಹಲಿಗೆಗಳ ಹೊರತಾಗಿ ಅದರಲ್ಲಿ ಮತ್ತೇನೂ ಇರಲಿಲ್ಲ.
ಆಗ ಪ್ರಧಾನ ಯಾಜಕನಾದ ಹಿಲ್ಕೀಯನು ಲೇಖಕ ನಾದ ಶಾಫಾನನಿಗೆ--ನಾನು ಕರ್ತನ ಮನೆಯಲ್ಲಿ ನ್ಯಾಯಪ್ರಮಾಣದ ಪುಸ್ತಕವನ್ನು ಕಂಡುಕೊಂಡಿದ್ದೇನೆ ಅಂದನು; ಹಿಲ್ಕೀಯನು ಆ ಪುಸ್ತಕವನ್ನು ಶಾಫಾನನಿಗೆ ಕೊಟ್ಟನು; ಅವನು ಅದನ್ನು ಓದಿದನು.
ಯಾವನಾದರೂ ಇಸ್ರಾ ಯೇಲಿನ ದೇವರಾದ ಕರ್ತನನ್ನು ಹುಡುಕದೆ ಹೋದರೆ ಹಿರಿಯನಾದರೂ ಕಿರಿಯನಾದರೂ ಪುರುಷನಾದರೂ ಸ್ತ್ರೀಯಾದರೂ ಸಾಯಬೇಕೆಂದೂ ಒಡಂಬಡಿಕೆಯನ್ನು ಮಾಡಿಕೊಂಡರು.
ಇವರು ಯೆಹೂದದಲ್ಲಿ ಬೋಧಿಸಿದರು. ಅವರ ಬಳಿಯಲ್ಲಿ ಕರ್ತನ ನ್ಯಾಯಪ್ರಮಾಣದ ಪುಸ್ತಕ ಇತ್ತು; ಯೆಹೂದದ ಸಮಸ್ತ ಪಟ್ಟಣಗಳನ್ನು ಸಂಚರಿಸಿ ಜನರಿಗೆ ಬೋಧಿಸಿದರು.
ಜನರೆಲ್ಲರು ಏಕವಾಗಿ ನೀರು ಬಾಗಲಿಗೆ ಎದುರಾಗಿರುವ ಬೀದಿಯಲ್ಲಿ ಕೊಡಿ ಕೊಂಡು ಕರ್ತನು ಇಸ್ರಾಯೇಲ್ಯರಿಗೆ ಆಜ್ಞಾಪಿಸಿದ ಮೋಶೆಯ ನ್ಯಾಯ ಪ್ರಮಾಣದ ಪುಸ್ತಕವನ್ನು ತಕ್ಕೊಂಡು ಬರಲು ಶಾಸ್ತ್ರಿಯಾದ ಎಜ್ರನಿಗೆ ಹೇಳಿದರು.
ಹೀಗೆಯೇ ಅವರು ದೇವರ ನ್ಯಾಯಪ್ರಮಾಣದ ಪುಸ್ತಕವನ್ನು ಸ್ಪಷ್ಟವಾಗಿ ಓದಿ ಅದರ ಅರ್ಥವನ್ನು ಹೇಳಿ ಓದಿದ್ದನ್ನು ಜನರಿಗೆ ತಿಳಿಯುವಂತೆ ಮಾಡಿದರು.
ಅವರು ತಮ್ಮ ಸ್ಥಳಗಳಲ್ಲಿ ನಿಂತು ಒಂದು ಜಾವ ತಮ್ಮ ದೇವರಾಗಿರುವ ಕರ್ತನ ನ್ಯಾಯ ಪ್ರಮಾಣದ ಪುಸ್ತಕವನ್ನು ಓದಿ ಮತ್ತೊಂದು ಜಾವ ತಮ್ಮ ಪಾಪಗಳನ್ನು ಅರಿಕೆಮಾಡಿ ತಮ್ಮ ದೇವರಾಗಿ ರುವ ಕರ್ತನನ್ನು ಆರಾಧಿಸಿದರು.
ಅದೇ ದಿವಸದಲ್ಲಿ ಜನರು ಕೇಳುವ ಹಾಗೆ ಮೋಶೆಯ ಪುಸ್ತಕದೊಳಗೆ ಓದುವಾಗ ಅಮ್ಮೋನ್ಯರೂ ಮೋವಾಬ್ಯರೂ ಎಂದಿಗೂ ದೇವರ ಸಭೆಗೆ ಬರಕೂಡದೆಂದು ಅದರಲ್ಲಿ ಬರೆದದ್ದು ಸಿಕ್ಕಿತು.
ಆ ದಿವಸಗಳು ತೀರಿದ ತರುವಾಯ ಅರಸನು ಶೂಷನಿನ ಅರಮನೆ ಯಲ್ಲಿರುವ ಹಿರಿಕಿರಿಯರಾದ ಸಮಸ್ತ ಜನರಿಗೂ ಏಳು ದಿವಸಗಳ ವರೆಗೆ ಅರಸನ ಅರಮನೆಯ ತೋಟದ ಅಂಗಳದಲ್ಲಿ ಔತಣವನ್ನು ಮಾಡಿಸಿದನು.
ಕಿರಿಯನು ಹಿರಿಯನು ಅಲ್ಲಿ ಇದ್ದಾರೆ. ದಾಸನು ಯಜಮಾನನಿಂದ ಬಿಡುಗಡೆ ಯಾಗಿದ್ದಾನೆ.
ಕರ್ತನಿಗೆ ಭಯ ಪಡುವವರಾದ ಹಿರಿಯರ ಸಂಗಡ ಕಿರಿಯರನ್ನು ಆಶೀರ್ವದಿಸುವನು.
ಹೀಗೆ ನಾನು ದೇವರ ಸಹಾಯವನ್ನು ಹೊಂದಿ ಈ ದಿವಸದವರೆಗೆ ಜೀವದಿಂದಿದ್ದು ಪ್ರವಾದಿಗಳೂ ಮೋಶೆಯೂ ಸಂಭವಿಸುವವೆಂದು ಹೇಳಿದವುಗಳನ್ನೇ ಹೊರತು ಮತ್ತೆ ಯಾವ ವಿಷಯಗಳನ್ನೂ ಹೇಳದೆ ಚಿಕ್ಕವರಿಗೂ ದೊಡ್ಡವರಿಗೂ ಸಾಕ್ಷೀಕರಿಸುವವ ನಾಗಿದ್ದೇನೆ.
ಇದಲ್ಲದೆ ಸತ್ತವರಾದ ಚಿಕ್ಕವರೂ ದೊಡ್ಡವರೂ ದೇವರ ಮುಂದೆ ನಿಂತಿರುವದನ್ನು ನಾನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು; ಜೀವಗ್ರಂಥವೆಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು; ಆ ಪುಸ್ತಕಗಳಲ್ಲಿ ಬರೆದ ಪ್ರಕಾರ ಅವರವರ ಕೃತ್ಯಗಳಿಗೆ ತಕ್ಕಂತೆ ಸತ್ತವರಿಗೆ