ಆದರೆ ಅವನು ಯೆರೂಸಲೇಮಿನಲ್ಲಿ ಆಳದ ಹಾಗೆ ಫರೋಹನೆಕೋ ಎಂಬವನು ಹಮಾತ್ ದೇಶದ ರಿಬ್ಲಾದಲ್ಲಿ ಅವನನ್ನು ಬಂಧಿಸಿ ದೇಶದ ಮೇಲೆ ನೂರು ತಲಾಂತು ಬೆಳ್ಳಿಯನ್ನೂ ಒಂದು ತಲಾಂತು ಬಂಗಾರವನ್ನೂ ದಂಡ ತೆರಬೇಕಾ ಯಿತು.
Cross references
ಮನುಷ್ಯರು ಜಗಳವಾಡುತ್ತಿರಲಾಗಿ ಗರ್ಭಿಣಿ ಯಾದ ಸ್ತ್ರೀಗೆ ಏಟು ತಗಲಿದದರಿಂದ ಅವಳಿಗೆ ಗರ್ಭ ಸ್ರಾವವೇ ಹೊರತಾಗಿ ಬೇರೆ ಯಾವ ಹಾನಿಯೂ ಆಗದೆ ಹೋದರೆ ಸ್ತ್ರೀಯ ಗಂಡನು ನ್ಯಾಯಾಧಿಪತಿಗಳ ಸಮ್ಮತಿಯಿಂದ ಎಷ್ಟು ಹಣವನ್ನು ಗೊತ್ತು ಮಾಡು ತ್ತಾನೋ ಹೊಡೆದವನು ಅಷ್ಟನ್ನು ಕೊಡಬೇಕು.
ಆಗ ಅವರು ಏರಿಹೋಗಿ ಜಿನ್ ಎಂಬ ಅರಣ್ಯ ದಿಂದ ಹಮಾತಿನ ಕಡೆಯಲ್ಲಿರುವ ರೆಹೋಬಿನ ವರೆಗೂ ದೇಶವನ್ನು ಪಾಳತಿ ನೋಡಿದರು.
ಶೆಫಾಮಿನಿಂದ ಮೇರೆ ಆಯಿನಿನ ಪೂರ್ವದಲ್ಲಿರುವ ರಿಬ್ಲಕ್ಕೆ ಇಳಿದು ಕಿನ್ನೆರೆತ್ ಸಮುದ್ರದ ಪೂರ್ವ ತೀರವನ್ನು ಮುಟ್ಟಲಿ.
ಅದೇ ಕಾಲದಲ್ಲಿ ಸೊಲೊಮೋನನೂ ಅವನ ಸಂಗಡ ಹಮಾತಿನ ಪ್ರದೇಶ ಮೊದಲುಗೊಂಡು ಐಗುಪ್ತದ ನದಿಯ ಮಟ್ಟಿಗೂ ಇರುವ ಮಹಾಸಭೆ ಯಾದ ಸಮಸ್ತ ಇಸ್ರಾಯೇಲ್ಯರೂ ನಮ್ಮ ದೇವರಾದ ಕರ್ತನ ಮುಂದೆ ಏಳೇಳು ಹದಿನಾಲ್ಕು ದಿವಸ ಹಬ್ಬವನ್ನು ಮಾಡಿದರು.ಎಂಟನೇ ದಿನದಲ್ಲಿ ಅವನು ಜನರಿಗೆ ಅಪ್ಪಣೆಯನ್ನು ಕೊಟ್ಟನು. ಆಗ ಅವರು ಅರಸನನ್ನು ಆಶೀರ್ವದಿಸಿ ಕರ್ತನು ತನ್ನ ಸೇವಕನಾದ ದಾವೀದನಿ ಗೋಸ್ಕರವೂ ತನ್ನ ಜನರಾದ ಇಸ್ರಾಯೇಲ್ಯರಿಗೋಸ್ಕ ರವೂ ಮಾಡಿದ ಸಮಸ್ತ ಉಪಕಾರದ ನಿಮಿತ್ತ ಸಂತೋಷಪಟ್ಟು ಹೃದಯದಲ್ಲಿ ಆನಂದವುಳ್ಳವರಾಗಿ ತಮ್ಮ ತಮ್ಮ ಡೇರೆಗಳಿಗೆ ಹೋದರು.
ಆಗ ಯೆಹೂದದ ಅರಸನಾದ ಹಿಜ್ಕೀಯನು ಲಾಕೀ ಷನ ಬಳಿಯಲ್ಲಿದ್ದ ಅಶ್ಶೂರಿನ ಅರಸನಿಗೆ--ನಾನು ಪಾಪಮಾಡಿದ್ದೇನೆ; ನನ್ನನ್ನು ಬಿಟ್ಟು ಹಿಂತಿರಿಗಿ ಹೋಗು; ನೀನು ನನ್ನ ಮೇಲೆ ಹೊರಿಸುವದನ್ನು ನಾನು ತಾಳಿಕೊಳ್ಳುತ್ತೇನೆ ಎಂದು ಹೇಳಿ ಕಳುಹಿಸಿ ದನು. ಆಗ ಅಶ್ಶೂರಿನ ಅರಸನು ಯೆಹೂದದ ಅರಸನಾದ ಹಿಜ್ಕೀಯನಿಗೆ ಮುನ್ನೂರು ತಲಾಂತು ಬೆಳ್ಳಿಯನ್ನೂ ಮೂವತ್ತು ತಲಾಂತು ಬಂಗಾರವನ್ನೂ ಕೊಡಲು ನೇಮಕ ಮಾಡಿದನು.
ಅವನ ದಿವಸಗಳಲ್ಲಿ ಐಗುಪ್ತದ ಅರಸನಾದ ಫರೋಹನೆಕೋ ಎಂಬವನು ಅಶ್ಶೂರಿನ ಅರಸನ ಮೇಲೆ ಯೂಫ್ರೇ ಟೀಸ್ ನದಿಗೆ ಹೋದನು; ಅರಸನಾದ ಯೋಷೀ ಯನು ಅವನ ಮೇಲೆ ಹೋದನು; ಅವನು ಇವನನ್ನು ನೋಡಿದಾಗ ಮೆಗಿದ್ದೋವಿನ ಬಳಿಯಲ್ಲಿ ಕೊಂದು ಹಾಕಿದನು.
ಅವನ ದಂಡೆಲ್ಲಾ ಅವನ ಕಡೆಯಿಂದ ಚದರಿ ಹೋಯಿತು. ಅವರು ಅರಸನನ್ನು ಹಿಡಿದು ಕೊಂಡು, ರಿಬ್ಲದಲ್ಲಿರುವ ಬಾಬೆಲಿನ ಅರಸನ ಬಳಿಗೆ ತಕ್ಕೊಂಡು ಬಂದು ಅವನ ಮೇಲೆ ನ್ಯಾಯವನ್ನು ನಿರ್ಣಯಿಸಿದರು.
ಐಗುಪ್ತದ ಅರಸನು ಯೆರೂಸಲೇ ಮಿನಲ್ಲಿ ಅವನನ್ನು ತೆಗೆದುಹಾಕಿ ದೇಶದಿಂದ ನೂರು ತಲಾಂತು ಬೆಳ್ಳಿಯನ್ನೂ ಒಂದು ತಲಾಂತು ಬಂಗಾರ ವನ್ನೂ ದಂಡ ತಕ್ಕೊಂಡನು.
ಮಹಾಕೋಪಿಷ್ಠನು ಶಿಕ್ಷೆಯನ್ನು ಅನುಭವಿಸುವನು; ಅವನನ್ನು ನೀನು ಬಿಡಿಸಿದರೆ ತಿರುಗಿ ನೀನು ಅದನ್ನು ಮಾಡಬೇಕಾಗುತ್ತದೆ.
ಯೆರೆವಿಾಯನು ಇನ್ನು ಹಿಂತಿ ರುಗದೆ ಇರುವಾಗ ನೆಬೂಜರದಾನನು ಹೇಳಿದ್ದೇ ನಂದರೆ--ಬಾಬೆಲಿನ ಅರಸನು ಯೆಹೂದದ ಪಟ್ಟಣ ಗಳ ಮೇಲೆ ಅಧಿಕಾರಿಯಾಗಿ ಇಟ್ಟ ಶಾಫಾನನ ಮಗ ನಾದ ಅಹೀಕಾಮನ ಮಗನಾದ ಗೆದಲ್ಯನ ಬಳಿಗೆ ತಿರುಗಿಕೋ, ಅವನ ಸಂಗಡ ಜನರೊಳಗೆ ವಾಸ ಮಾಡು; ಇಲ್ಲವೆ ಎಲ್ಲಿ ಹೋಗುವದಕ್ಕೆ ನಿನಗೆ ಸರಿಯಾಗಿ ಕಾಣುತ್ತದೋ ಅಲ್ಲಿಗೆ ಹೋಗು ಅಂದನು. ಆಗ ಕಾವಲಿನವರ ಅಧಿಪತಿಯು ಅವನಿಗೆ ಆಹಾರವನ್ನೂ ಬಹುಮಾನವನ್ನೂ ಕೊಟ್ಟು ಕಳುಹಿಸಿಬಿಟ್ಟನು.
ತನ್ನ ಮರಿಗಳಲ್ಲಿ ಒಂದನ್ನು ಬೆಳೆಸಿದಳು; ಇದು ಪ್ರಾಯದ ಸಿಂಹವಾಯಿತು, ಇದು ಕೊಳ್ಳೆ ಹೊಡೆಯು ವದನ್ನು ಕಲಿತು ಮನುಷ್ಯರನ್ನು ನುಂಗಿಬಿಟ್ಟಿತು.
ಅವರ ಅರಮನೆಗಳನ್ನು ಹಾಳು ಮಾಡಿತು; ಅವರ ನಗರಗಳನ್ನೂ ನಾಶಮಾಡಿತು. ಅದರ ಗರ್ಜನೆಯ ಶಬ್ದದಿಂದಾಗಿ ದೇಶವೂ ಅದರ ಪರಿಪೂರ್ಣತೆಯೂ ಬೀಡಾಗಿದ್ದನ್ನು ಅದು ತಿಳಿದುಕೊಂಡಿತು.
ಅದಕ್ಕೆ ಸಂಕೋಲೆಗಳನ್ನು ತೊಡಿಸಿ, ಕಾವಲಿರಿಸಿ, ಬಾಬೆಲಿನ ಅರಸನ ಬಳಿಗೆ ತೆಗೆದುಕೊಂಡು ಹೋದರು. ಅದರ ಶಬ್ದವು ಇನ್ನು ಮೇಲೆ ಇಸ್ರಾ ಯೇಲಿನ ಪರ್ವತಗಳ ಮೇಲೆ ಕೇಳಲ್ಪಡದ ಹಾಗೆ ಅದನ್ನು ದುರ್ಗದಲ್ಲಿರಿಸಿದರು.