Home Bibles 2 ಅರಸುಗಳು 24:15 · ಕನ್ನಡ ಬೈಬಲ್
2 ಅರಸುಗಳು 24:15 · ಕನ್ನಡ ಬೈಬಲ್

ಯೆಹೋಯಾಖೀನನನ್ನು ಬಾಬೆ ಲಿಗೆ ಒಯ್ದನು; ಅವನು ಅರಸನ ತಾಯಿಯನ್ನೂ ಅರಸನ ಹೆಂಡತಿಯರನ್ನೂ ಅವನ ಅಧಿಕಾರಿಗಳನ್ನೂ ದೇಶದ ಬಲಶಾಲಿಗಳನ್ನೂ ಯೆರೂಸಲೇಮಿನಿಂದ ಬಾಬೆಲಿಗೆ ಸೆರೆಯಾಗಿ ಒಯ್ದನು.

Cross references

2 ಅರಸುಗಳು 20:18

ನಿನ್ನಿಂದ ಹುಟ್ಟುವ ನಿನ್ನ ಮಕ್ಕಳಲ್ಲಿ ಕೆಲವರನ್ನು ತೆಗೆದುಕೊಂಡು ಹೋಗುವರು. ಅವರು ಬಾಬೆಲಿನ ಅರಸನ ಮನೆಯಲ್ಲಿ ಕಂಚುಕಿಯರಾಗಿರು ವರು ಅಂದನು.

2 ಅರಸುಗಳು 24:8

ಯೆಹೋಯಾಖೀನನು ಆಳಲು ಆರಂಭಿಸಿದಾಗ ಹದಿನೆಂಟು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಮೂರು ತಿಂಗಳು ಆಳಿದನು. ಅವನ ತಾಯಿಯು ಯೆರೂಸಲೇಮಿನ ಎಲ್ನಾತಾನನ ಮಗಳಾಗಿದ್ದು ನೆಹು ಷ್ಟಾಳೆಂಬವಳು.

2 ಅರಸುಗಳು 25:12

ಆದರೆ ಕಾವಲಿನ ಅಧಿಪತಿಯು ದ್ರಾಕ್ಷೇತೋಟ ಮಾಡುವ ಹಾಗೆಯೂ ಬೇಸಾಯ ಮಾಡುವ ಹಾಗೆಯೂ ದೇಶದ ಬಡವರನ್ನು ಉಳಿಸಿಬಿಟ್ಟನು.

2 ಅರಸುಗಳು 25:21

ಬಾಬೆಲಿನ ಅರಸನು ಹಮಾತ್‌ ರಿಬ್ಲ ದಲ್ಲಿ ಅವರನ್ನು ಹೊಡೆದು ಕೊಂದುಹಾಕಿದನು. ಈ ಪ್ರಕಾರವೇ ಯೆಹೂದ್ಯರು ತಮ್ಮ ದೇಶದಲ್ಲಿಂದ ಸೆರೆ ಯಾಗಿ ಒಯ್ಯಲ್ಪಟ್ಟರು.

1 ದಿನವೃತ್ತಾಂತ 9:1

ಹೀಗೆಯೇ ಇಸ್ರಾಯೇಲಿನವರೆಲ್ಲರೂ ವಂಶಾವಳಿಗಳ ಪ್ರಕಾರ ಲೆಕ್ಕಿಸಲ್ಪಟ್ಟಿದ್ದರು. ಇಗೋ, ತಮ್ಮ ಅಪರಾಧಗಳ ನಿಮಿತ್ತ ಬಾಬೆಲಿಗೆ ಸೆರೆಯಾಗಿ ಒಯ್ಯಲ್ಪಟ್ಟ ಇಸ್ರಾಯೇಲ್‌ ಯೆಹೂದಗಳ ಅರಸರ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.

2 ದಿನವೃತ್ತಾಂತ 36:10

ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು. ಆದರೆ ಒಂದು ವರುಷವು ತೀರಿದ ಮೇಲೆ ಅರಸನಾದ ನೆಬೂಕದ್ನೆಚ್ಚರನು ಜನರನ್ನು ಕಳುಹಿಸಿ ಅವನನ್ನೂ ಕರ್ತನ ಆಲಯದ ಬೆಲೆಯುಳ್ಳ ಪಾತ್ರೆಗಳನ್ನೂ ಬಾಬೆ ಲಿಗೆ ತಕ್ಕೊಂಡು ತರಿಸಿಕೊಂಡು ಅವನ ಸಹೋದರ ನಾದ ಚಿದ್ಕೀಯನನ್ನು ಯೆಹೂದ ಯೆರೂಸಲೇಮಿನ ಮೇಲೆ ಅರಸನಾಗಿ ಮಾಡಿದನು.

ಎಸ್ತೇರ್ 2:5

ಆದರೆ ಶೂಷನಿನ ಅರಮನೆಯಲ್ಲಿ ಬೆನ್ಯಾವಿಾನ ನವನಾದ ಕೀಷನ ಮಗನಾದ ಶಿವ್ಗೆಾ ಮಗನಾದ ಯಾಯಾರನ ಮಗನಾದ ಮೊರ್ದೆಕೈ ಎಂಬ ಹೆಸರುಳ್ಳ ಒಬ್ಬ ಯೆಹೂದ್ಯನಿದ್ದನು.

ಎಸ್ತೇರ್ 2:6

ಅವನು ಬಾಬೆಲಿನ ಅರಸ ನಾದ ನೆಬೂಕದ್ನೆಚರನು ಸೆರೆಯಾಗಿ ತಂದ ಯೆಹೂ ದದ ಅರಸನಾಗಿರುವ ಯೆಹೋಯಾಕೀನನ ಸಂಗಡ ಯೆರೂಸಲೇಮಿನಿಂದ ಸೆರೆಯಾಗಿ ಒಯ್ಯಲ್ಪಟ್ಟವರಲ್ಲಿ ಒಬ್ಬನಾಗಿದ್ದನು.

ಯೆರೆಮಿಯ 22:24

ನಾನು ಅವನನ್ನು ನೋಡದ ಹಾಗೆ ಒಬ್ಬನು ಮರೆಯಾದ ಸ್ಥಳಗಳಲ್ಲಿ ತನ್ನನ್ನು ಅಡಗಿಸಿಕೊ ಳ್ಳಬಹುದೋ ಎಂದು ಕರ್ತನು ಅನ್ನುತ್ತಾನೆ; ನಾನು ಆಕಾಶದಲ್ಲಿಯೂ ಭೂಮಿಯಲ್ಲಿಯೂ ವ್ಯಾಪಿಸಿರುವವ ನಲ್ಲವೋ? ಎಂದು ಕರ್ತನು ಅನ್ನುತ್ತಾನೆ.

ಯೆಹೆಜ್ಕೇಲ 17:3

ಹೇಳತಕ್ಕದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ. ದೊಡ್ಡ ರೆಕ್ಕೆಗಳೂ ಉದ್ದವಾದ ರೆಕ್ಕೆಗಳೂ ಉಳ್ಳಂಥ ವಿಧವಿಧವಾದ ಬಣ್ಣ ಬಣ್ಣದ ಪುಕ್ಕಗಳಿಂದ ತುಂಬಿದ್ದಂಥ ಒಂದು ದೊಡ್ಡ ಹದ್ದು ಲೆಬನೋನಿಗೆ ಬಂದು, ದೇವದಾರಿನ ಮರದ ಮೇಲ್ಗಡೆಯ ಕೊಂಬೆಯನ್ನು ಕಿತ್ತುಹಾಕಿತು.

ಯೆಹೆಜ್ಕೇಲ 17:12

ಇದರ ಅಭಿಪ್ರಾಯ ನಿಮಗೆ ತಿಳಿಯುವದಿಲ್ಲವೋ? ಅವರಿಗೆ ಎದುರು ಬೀಳುವ ಮನೆಯವರಿಗೆ ಹೀಗೆ ಹೇಳು--ಇಗೋ, ಬಾಬೆಲಿನ ಅರಸನು ಯೆರೂಸಲೇಮಿಗೆ ಬಂದು ಅದರ ಅರಸ ನನ್ನೂ ಅದರ ಪ್ರಧಾನರನ್ನೂ ಕರೆದುಕೊಂಡು ತನ್ನ ಬಳಿಗೆ ಬಾಬೆಲಿಗೆ ಒಯ್ದಿದ್ದಾನೆ.

Interlinear

Choose Theme