ಪಟ್ಟಣದಲ್ಲಿ ಉಳಿದ ಜನ ರನ್ನೂ ಬಾಬೆಲಿನ ಅರಸನ ಕಡೆಗೆ ಬಿದ್ದವರನ್ನೂ ಗುಂಪಿ ನಲ್ಲಿ ಮಿಕ್ಕ ಜನರನ್ನೂ ಕಾವಲಿನ ಅಧಿಪತಿಯಾದ ನೆಬೂಜರದಾನನು ಸೆರೆಯಾಗಿ ಒಯ್ದನು.
Cross references
ಇದ ಲ್ಲದೆ ಕತ್ತಿಗೆ ತಪ್ಪಿದವರನ್ನು ಅವನು ಬಾಬೆಲಿಗೆ ಒಯ್ದನು. ಅವರು ಅಲ್ಲಿ ಪಾರಸಿಯ ರಾಜ್ಯದ ಆಳ್ವಿಕೆಯ ಪರ್ಯಂತರ, ದೇಶವು ಅದರ ಸಬ್ಬತ್ತುಗಳನ್ನು ಅನುಭವಿ ಸುವ ಪರ್ಯಂತರ, ಯೆರೆವಿಾಯನ ಮುಖಾಂತರವಾಗಿ ಹೇಳಿದ ಕರ್ತನ ವಾಕ್ಯವು ಈಡೇರುವದಕ್ಕೆ ಅವನಿಗೂ ಅವನ ಮಕ್ಕಳಿಗೂ ಸೇವಕರಾಗಿದ್ದರು.
ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--
ಆಗ ಶಾಫಾನನ ಮಗನಾದ ಅಹೀಕಾಮನ ಮಗನಾದ ಗೆದಲ್ಯನು ಅವರಿಗೂ ಅವರ ಮನುಷ್ಯರಿಗೂ ಪ್ರಮಾಣಮಾಡಿ ಹೇಳಿದ್ದೇನಂದರೆ--ಕಸ್ದೀಯರಿಗೆ ಸೇವೆ ಮಾಡುವದಕ್ಕೆ ಭಯಪಡಬೇಡಿರಿ; ದೇಶದಲ್ಲಿ ವಾಸವಾಗಿದ್ದು ಬಾಬೆ ಲಿನ ಅರಸನಿಗೆ ಸೇವೆಮಾಡಿರಿ; ಆಗ ನಿಮಗೆ ಒಳ್ಳೇದಾ ಗುವದು.
ಅದರ ಮೂರನೆಯ ಪಾಲನ್ನು ನಗರದ ಮಧ್ಯದಲ್ಲಿ ಮುತ್ತಿಗೆಯ ದಿವಸಗಳು ಮುಗಿದ ಮೇಲೆ ಬೆಂಕಿಯಿಂದ ಸುಡಬೇಕು, ಮೂರನೆಯ ಪಾಲನ್ನು ತೆಗೆದುಕೊಂಡು ಖಡ್ಗದಿಂದ ಸುತ್ತಲೂ ಕಡಿಯಬೇಕು; ಉಳಿದ ಮೂರನೆಯ ಪಾಲನ್ನು ಗಾಳಿಗೆ ಚೆಲ್ಲಬೇಕು ಮತ್ತು ನಾನು ಅವುಗಳ ಹಿಂದೆ ಕತ್ತಿಯನ್ನು ಬೀಸುವೆನು
ಹೀಗೆ ಹೇಳು--ನಾನು ನಿಮಗೆ ಗುರುತಾಗಿದ್ದೇನೆ. ನಾನು ಮಾಡಿದ ಹಾಗೆ ಅವರಿಗೆ ಮಾಡಲ್ಪಡುವದು, ಅವರು ಸಾಗಿ ಸೆರೆಗೆ ಹೋಗುವರು.
ನಾನು ಅವರನ್ನು ಜನಾಂಗಗಳಲ್ಲಿ ಚದರಿಸಿ ದೇಶಗಳ ಮೇಲೆ ಚದರಿಸುವಾಗ ನಾನೇ ಕರ್ತನು ಎಂದು ಅವರು ತಿಳಿದುಕೊಳ್ಳುವರು.
ನಿನ್ನನ್ನು ಅನ್ಯ ಜನಾಂಗಗಳಲ್ಲಿ ಚದರಿಸಿ, ದೇಶಗಳಲ್ಲಿ ಹರಡಿಸುವೆನು; ನಿನ್ನ ಅಶುದ್ಧತ್ವವನ್ನು ನಿನ್ನಿಂದ ತೆಗೆದು ನಾಶಮಾಡುವೆನು.