Home Bibles 2 ಅರಸುಗಳು 25:13 · ಕನ್ನಡ ಬೈಬಲ್
2 ಅರಸುಗಳು 25:13 · ಕನ್ನಡ ಬೈಬಲ್

ಇದಲ್ಲದೆ ಕರ್ತನ ಮನೆಯಲ್ಲಿದ್ದ ಹಿತ್ತಾಳೆ ಸ್ತಂಭಗಳನ್ನೂ ಆಧಾರಗಳನ್ನೂ ಕರ್ತನ ಮನೆಯಲ್ಲಿದ್ದ ಹಿತ್ತಾಳೆ ಸಮುದ್ರವೆಂಬ ಪಾತ್ರೆ ಯನ್ನೂ ಕಸ್ದೀಯರು ಒಡೆದು ಹಾಕಿ ಅದರ ಹಿತ್ತಾಳೆ ಯನ್ನು ಬಾಬೆಲಿಗೆ ಒಯ್ದರು.

Cross references

ನಿರ್ಗಮಕಾಂಡ 27:3

ಅದರ ಬೂದಿಗಾಗಿ ತಟ್ಟೆಗಳನ್ನು ಸಲಿಕೆಗಳನ್ನು ಬೋಗುಣಿಗಳನ್ನು ಮುಳ್ಳುಗಳನ್ನು ಅಗ್ನಿಪಾತ್ರೆಗಳನ್ನು ಎಲ್ಲಾ ಉಪಕರಣಗಳನ್ನು ಹಿತ್ತಾಳೆಯಿಂದ ಮಾಡಬೇಕು.

1 ಅರಸುಗಳು 7:15

ಅವನು ಎರಡು ತಾಮ್ರದ ಸ್ತಂಭಗಳನ್ನು ಮಾಡಿ ದನು. ಒಂದೊಂದು ಸ್ತಂಭ ಹದಿನೆಂಟು ಮೊಳ ಉದ್ದ; ಒಂದೊಂದು ಸ್ತಂಭದ ಸುತ್ತಳತೆ ಹನ್ನೆರಡು ಮೊಳ ಇತ್ತು.

1 ಅರಸುಗಳು 7:23

ಇದಲ್ಲದೆ ಎರಕದ ಸಮುದ್ರವನ್ನು ಮಾಡಿದನು. ಅದು ದುಂಡಾಗಿ ಈ ಅಂಚಿನಿಂದ ಆ ಅಂಚಿಗೆ ಹತ್ತು ಮೊಳವೂ ಅದರ ಎತ್ತರ ಐದು ಮೊಳವೂ ಸುತ್ತಳತೆ ಮೂವತ್ತು ಮೊಳವೂ ಆಗಿತ್ತು. ಅದರ ಅಂಚಿನ ಕೆಳ ಭಾಗದಲ್ಲಿ ಅದರ ಸುತ್ತಲೂ ಮೊಗ್ಗುಗಳಿದ್ದವು.

1 ಅರಸುಗಳು 7:27

ಹತ್ತು ತಾಮ್ರದ ಆಧಾರಗಳನ್ನು ಮಾಡಿದನು. ಒಂದೊಂದು ಆಧಾರವು ನಾಲ್ಕು ಮೊಳ ಉದ್ದವೂ ನಾಲ್ಕು ಮೊಳ ಅಗಲವೂ ಮೂರು ಮೊಳ ಎತ್ತರವೂ ಆಗಿತ್ತು.

2 ಅರಸುಗಳು 20:17

ಇಗೋ, ದಿನಗಳು ಬರುವವು; ಆಗ ನಿನ್ನ ಮನೆಯಲ್ಲಿ ಇರುವದೆಲ್ಲವೂ ನಿನ್ನ ತಂದೆಗಳು ಇಂದಿನ ವರೆಗೂ ಸಂಪಾದಿಸಿ ಇಟ್ಟದ್ದದ್ದೆಲ್ಲವೂ ಬಾಬೆಲಿಗೆ ಒಯ್ಯ ಲ್ಪಡುವದು. ಒಂದೂ ಉಳಿಯುವದಿಲ್ಲವೆಂದು ಕರ್ತನು ಹೇಳುತ್ತಾನೆ;

2 ದಿನವೃತ್ತಾಂತ 4:2

ಅವನು ಎರಕದ ಸಮುದ್ರವನ್ನು ಮಾಡಿಸಿದನು; ಅದು ಸುತ್ತಲಾಗಿ ಈ ಅಂಚಿನಿಂದ ಆ ಅಂಚಿಗೆ ಹತ್ತು ಮೊಳ, ಅದರ ಎತ್ತರ ಐದು ಮೊಳ, ಸುತ್ತಳತೆ ಮೂವತ್ತು ಮೊಳ ನೂಲಳತೆಯಾಗಿತ್ತು.

2 ದಿನವೃತ್ತಾಂತ 4:12

ಎರಡು ಸ್ತಂಭಗಳನ್ನೂ ಎರಡು ಸ್ತಂಭ ಗಳ ಮೇಲಿರುವ ಬೋದಿಗೆಗಳನ್ನೂ ಬೋದಿಗೆಗಳ ಮೇಲೆ ಮುಚ್ಚುವ ಎರಡು ಜಾಲರು ಹಣಿತೆಗಳನ್ನೂ

2 ದಿನವೃತ್ತಾಂತ 36:18

ಇದಲ್ಲದೆ ದೊಡ್ಡವೂ ಸಣ್ಣವೂ ಆದ ಕರ್ತನ ಮನೆಯ ಎಲ್ಲಾ ಸಾಮಾನುಗಳು ಕರ್ತನ ಆಲಯದ ಬೊಕ್ಕಸಗಳು ಅರಸನ ಬೊಕ್ಕಸಗಳು ಅವನ ಪ್ರಧಾನರ ಬೊಕ್ಕಸಗಳು ಇವುಗಳನ್ನೆಲ್ಲಾ ಬಾಬೆಲಿಗೆ ತರಿಸಿದನು.

ಯೆರೆಮಿಯ 20:5

ನಾನೇ ಚಾಚಿದ ಕೈಯಿಂದಲೂ ಬಲವಾದ ತೋಳಿನಿಂದಲೂ ಕೋಪ ದಿಂದಲೂ ಉಗ್ರದಿಂದಲೂ ಮಹಾರೌದ್ರದಿಂದಲೂ ನಿಮಗೆ ವಿರೋಧವಾಗಿ ಯುದ್ಧಮಾಡುವೆನು.

ವಿಲಾಪಗಳು 1:10

ವೈರಿಯು ಆಕೆಯ ಎಲ್ಲಾ ರಮ್ಯವಾದ ವಸ್ತುಗಳ ಮೇಲೆ ತನ್ನ ಕೈ ಚಾಚಿದ್ದಾನೆ. ನಿನ್ನ ಸಭೆಯಲ್ಲಿ ಸೇರ ಬಾರದೆಂದು ನೀನು ಆಜ್ಞಾಪಿಸಿದ ಅನ್ಯ ಜನಾಂಗಗಳು ತನ್ನ ಪರಿಶುದ್ಧ ಸ್ಥಳದಲ್ಲಿ ಸೇರಿರುವದನ್ನು ನೋಡಿದ್ದಾಳೆ.

Interlinear

Choose Theme