Home Bibles 2 ಅರಸುಗಳು 4:2 · ಕನ್ನಡ ಬೈಬಲ್
2 ಅರಸುಗಳು 4:2 · ಕನ್ನಡ ಬೈಬಲ್

ಎಲೀ ಷನು ಅವಳಿಗೆ--ನಾನು ನಿನಗೆ ಏನು ಮಾಡಬೇಕು? ಮನೆಯಲ್ಲಿ ನಿನಗೆ ಏನು ಉಂಟು, ನನಗೆ ತಿಳಿಸು ಅಂದನು. ಅವಳು--ನಿನ್ನ ಸೇವಕಳಿಗೆ ಒಂದು ಮೊಗೆ ಎಣ್ಣೆ ಅಲ್ಲದೆ ಮನೆಯಲ್ಲಿ ಮತ್ತೊಂದಿಲ್ಲ ಅಂದಳು.

Cross references

ನಿರ್ಗಮಕಾಂಡ 4:2

ಕರ್ತನು ಅವನಿಗೆ--ನಿನ್ನ ಕೈಯಲ್ಲಿರುವದೇನು ಅಂದದ್ದಕ್ಕೆ ಅವನು--ಕೋಲು ಅಂದನು.

1 ಅರಸುಗಳು 17:12

ಅದಕ್ಕೆ ಅವಳು--ನಿನ್ನ ದೇವರಾದ ಕರ್ತನ ಜೀವದಾಣೆ, ಮಡಕೆಯಲ್ಲಿ ಒಂದು ಹಿಡಿ ಹಿಟ್ಟೂ ತಂಬಿಗೆಯಲ್ಲಿ ಸ್ವಲ್ಪ ಎಣ್ಣೆಯ ಹೊರತಾಗಿ ನನಗೆ ಬೇರೇನೂ ಇಲ್ಲ. ಇಗೋ, ನಾನೂ ನನ್ನ ಕುಮಾರನೂ ಅದನ್ನು ತಿಂದು ಸತ್ತುಹೋಗುವ ಹಾಗೆ ಅದನ್ನು ನನಗೂ ಅವನಿಗೂ ಸಿದ್ಧ ಮಾಡಲು ಎರಡು ಕಟ್ಟಿಗೆಗಳನ್ನು ಕೂಡಿಸಿಕೊಂಡಿದ್ದೇನೆ ಅಂದಳು.

2 ಅರಸುಗಳು 2:9

ಅವರು ದಾಟಿಹೋದ ತರುವಾಯ ಆದದ್ದೇ ನಂದರೆ, ಎಲೀಯನು ಎಲೀಷನಿಗೆ--ನಾನು ನಿನ್ನ ಬಳಿ ಯಿಂದ ತಕ್ಕೊಳ್ಳಲ್ಪಡುವದಕ್ಕಿಂತ ಮುಂಚೆ ನಿನಗೋಸ್ಕರ ನಾನು ಮಾಡಬೇಕಾದದ್ದನ್ನು ಕೇಳು ಅಂದನು. ಅದಕ್ಕೆ ಎಲೀಷನು ದಯಮಾಡಿ ನಿನಗಿರುವ ಆತ್ಮದಲ್ಲಿ ನನಗೆ ಎರಡು ಪಾಲನ್ನು ಅನುಗ್ರಹಿಸು ಅಂದನು.

2 ಅರಸುಗಳು 6:26

ಇಸ್ರಾ ಯೇಲಿನ ಅರಸನು ಗೋಡೆಯ ಮೇಲೆ ಹಾದು ಹೋಗುತ್ತಿರುವಾಗ ಒಬ್ಬ ಸ್ತ್ರೀಯು ಅವನನ್ನು ಬೇಡುವ ವಳಾಗಿ--ನನ್ನ ಯಜಮಾನನೇ, ಅರಸನೇ, ಸಹಾಯ ಮಾಡು ಅಂದಳು.

ಮತ್ತಾಯ 15:34

ಆಗ ಯೇಸು ಅವರಿಗೆ--ನಿಮ್ಮ ಹತ್ತಿರ ಎಷ್ಟು ರೊಟ್ಟಿಗಳಿವೆ ಎಂದು ಕೇಳಿದನು. ಅವರು--ಏಳು ರೊಟ್ಟಿಗಳು ಮತ್ತು ಕೆಲವು ಚಿಕ್ಕ ಮಾನುಗಳಿವೆ ಅಂದರು.

ಯೋಹಾನ 6:5

ಜನರ ದೊಡ್ಡ ಗುಂಪು ತನ್ನ ಕಡೆಗೆ ಬರುವದನ್ನು ಯೇಸು ಕಣ್ಣೆತ್ತಿ ನೋಡಿ ಫಿಲಿಪ್ಪ ನಿಗೆ--ಇವರು ಊಟ ಮಾಡುವಂತೆ ನಾವು ರೊಟ್ಟಿ ಯನ್ನು ಎಲ್ಲಿಂದ ಕೊಂಡು ತರೋಣ ಅಂದನು.

ಅಪೋಸ್ತಲರ ಕೃತ್ಯಗಳು 3:6

ಆಗ ಪೇತ್ರನು--ಬೆಳ್ಳಿಬಂಗಾರವಂತೂ ನನ್ನಲ್ಲಿಲ್ಲ. ಆದರೆ ನನಗಿರುವದನ್ನು ನಿನಗೆ ಕೊಡುತ್ತೇನೆ; ನಜರೇತಿನ ಯೇಸು ಕ್ರಿಸ್ತನ ಹೆಸರಿನಲ್ಲಿ ಎದ್ದು ನಡೆದಾಡು ಎಂದು ಹೇಳಿ

2 ಕೊರಿಂಥದವರಿಗೆ 6:10

ದುಃಖಪಡುವ ವರಾಗಿದ್ದರೂ ಯಾವಾಗಲೂ ಸಂತೋಷಪಡು ವವರೂ ಬಡವರಾಗಿದ್ದರೂ ಅನೇಕರಿಗೆ ಐಶ್ವರ್ಯ ವನ್ನುಂಟು ಮಾಡುವವರೂ ಏನೂ ಇಲ್ಲದವ ರಾಗಿದ್ದರೂ ಎಲ್ಲಾ ಇದ್ದವರೂ ಆಗಿದ್ದೇವೆ.

ಯಾಕೋಬ 2:5

ನನ್ನ ಪ್ರಿಯ ಸಹೋದರರೇ, ಕೇಳಿರಿ; ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವ ರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯ ರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?

Interlinear

Choose Theme