Home Bibles ☰ Books 2 ಅರಸುಗಳು 4:20 · ಕನ್ನಡ ಬೈಬಲ್
2 ಅರಸುಗಳು 4:20 · ಕನ್ನಡ ಬೈಬಲ್

ಹುಡು ಗನು ಅವನನ್ನು ಅವನ ತಾಯಿಯ ಬಳಿಗೆ ಎತ್ತಿಕೊಂಡು ಹೋದನು. ಅವನು ಮಧ್ಯಾಹ್ನದ ವರೆಗೂ ಅವಳ ತೊಡೆಯ ಮೇಲೆ ಇದ್ದುಕೊಂಡು ಸತ್ತುಹೋದನು.

Cross references

ಆದಿಕಾಂಡ 22:2

ಆಗ ಆತನು --ನೀನು ಪ್ರೀತಿಮಾಡುವ ನಿನ್ನ ಒಬ್ಬನೇ ಮಗನಾದ ಇಸಾಕನನ್ನು ಈಗ ತೆಗೆದುಕೊಂಡು ಮೊರೀಯ ದೇಶಕ್ಕೆ ಹೋಗಿ ಅಲ್ಲಿ ನಾನು ನಿನಗೆ ಹೇಳುವ ಒಂದು ಬೆಟ್ಟದ ಮೇಲೆ ಅವನನ್ನು ದಹನಬಲಿಯಾಗಿ ಅರ್ಪಿಸು ಅಂದನು.

ಆದಿಕಾಂಡ 37:3

ಆದರೆ ಯೋಸೇಫನು ಇಸ್ರಾಯೇಲನಿಗೆ ಮುಪ್ಪಿನಲ್ಲಿ ಹುಟ್ಟಿದ ಮಗನಾಗಿ ದ್ದರಿಂದ ಅವನು ತನ್ನ ಎಲ್ಲಾ ಮಕ್ಕಳಿಗಿಂತ ಅವನನ್ನು ಹೆಚ್ಚು ಪ್ರೀತಿಮಾಡಿ ಅವನಿಗೆ ಅನೇಕ ಬಣ್ಣದ ಅಂಗಿ ಯನ್ನು ಮಾಡಿಸಿದನು.

ಆದಿಕಾಂಡ 37:5

ಯೋಸೇಫನು ಒಂದು ಕನಸನ್ನು ಕಂಡು ತನ್ನ ಸಹೋದರರಿಗೆ ತಿಳಿಸಿದಾಗ ಅವರು ಅವನನ್ನು ಇನ್ನೂ ಹೆಚ್ಚಾಗಿ ದ್ವೇಷಿಸಿದರು.

1 ಅರಸುಗಳು 17:17

ಇವುಗಳ ತರುವಾಯ ಏನಾಯಿತಂದರೆ, ಮನೆಯ ಯಜಮಾನಳಾದ ಆ ಸ್ತ್ರೀಯ ಮಗನು ರೋಗದಲ್ಲಿ ಬಿದ್ದು ಅವನಲ್ಲಿ ಶ್ವಾಸವು ನಿಂತುಹೋಗುವಂತೆ ಅವನ ರೋಗವು ಅಧಿಕವಾಗಿತ್ತು.

ಯೆಶಾಯ 49:15

ತನ್ನ ಗರ್ಭದ ಮಗನ ಮೇಲೆ ಕರುಣಿಸದೆ ಒಬ್ಬ ಹೆಂಗಸು ತನ್ನ ಮೊಲೇ ಕೂಸನ್ನು ಮರೆತಾಳೇ? ಹೌದು, ಅವಳು ಮರೆಯಬಹುದು, ಆದರೂ ನಾನು ನಿನ್ನನ್ನು ಮರೆ ಯುವದಿಲ್ಲ.

ಯೆಶಾಯ 66:13

ಒಬ್ಬ ನನ್ನು ಅವನ ತಾಯಿ ಆದರಿಸುವ ಪ್ರಕಾರವೇ ನಾನು ನಿಮ್ಮನ್ನು ಆದರಿಸುವೆನು; ಯೆರೂಸಲೇಮಿನಲ್ಲಿ ಆದ ರಣೆ ಹೊಂದುವಿರಿ.

ಯೆಹೆಜ್ಕೇಲ 24:16

ಮನುಷ್ಯಪುತ್ರನೇ, ಇಗೋ, ಒಂದೇ ಏಟಿನಿಂದ ನೇತ್ರಾನಂದವಾಗಿರುವದನ್ನು ನಿನ್ನಿಂದ ತೆಗೆಯುತ್ತೇನೆ; ಆದರೆ ನೀನು ದುಃಖಪಡಬೇಡ, ಅಳಬೇಡ, ನಿನ್ನ ಕಣ್ಣೀರು ಹರಿದು ಹೋಗದಿರಲಿ.

ಲೂಕ 2:35

ಅನೇಕರ ಹೃದಯ ಗಳ ಅಲೋಚನೆಗಳು ಪ್ರಕಟವಾಗುವವು. (ಹೌದು, ನಿನ್ನ ಸ್ವಂತ ಪ್ರಾಣವನ್ನು ಸಹ ಕತ್ತಿಯು ತಿವಿಯುವದು) ಅಂದನು.

ಲೂಕ 7:12

ಆತನು ಪಟ್ಟಣ ದ್ವಾರದ ಸವಿಾಪಕ್ಕೆ ಬಂದಾಗ ಇಗೋ, ಸತ್ತುಹೋಗಿದ್ದ ಒಬ್ಬ ಮನುಷ್ಯನನ್ನು ಹೊತ್ತುಕೊಂಡು ಹೋಗುತ್ತಿದ್ದರು. ಅವನು ತನ್ನ ತಾಯಿಗೆ ಒಬ್ಬನೇ ಮಗನು; ಆಕೆಯು ವಿಧವೆಯಾಗಿ ದ್ದಳು. ಪಟ್ಟಣದ ಬಹಳ ಜನರು ಆಕೆಯೊಂದಿಗೆ ಇದ್ದರು.

ಯೋಹಾನ 11:3

ಆದದ ರಿಂದ ಅವನ ಸಹೋದರಿಯರು--ಕರ್ತನೇ, ಇಗೋ, ನೀನು ಪ್ರೀತಿಮಾಡುತ್ತಿರುವವನು ಅಸ್ವಸ್ಥನಾಗಿದ್ದಾನೆ ಎಂದು ಆತನಿಗೆ ಹೇಳಿಕಳುಹಿಸಿದರು.

ಯೋಹಾನ 11:5

ಮಾರ್ಥಳನ್ನೂ ಅವಳ ಸಹೋದರಿಯನ್ನೂ ಲಾಜರನನ್ನೂ ಯೇಸು ಪ್ರೀತಿಸು ತ್ತಿದ್ದನು.

ಯೋಹಾನ 11:14

ಆಗ ಯೇಸು ಸ್ಪಷ್ಟವಾಗಿ ಅವರಿಗೆ--ಲಾಜರನು ಸತ್ತಿದ್ದಾನೆ.

Interlinear

Choose Theme