ಒಬ್ಬನು ಪಲ್ಯವನ್ನು ತರಲು ಅಡವಿಗೆ ಹೋಗಿ ಅಡವಿಯ ಬಳ್ಳಿಯನ್ನು ನೋಡಿ ಅಡವಿಯ ಕಾಯಿ ಗಳನ್ನು ತನ್ನ ಉಡಿಯ ತುಂಬ ಕೂಡಿಸಿಕೊಂಡು ಬಂದು ಅವುಗಳನ್ನು ಕೊಯಿದು ಆಹಾರವಿರುವ ಗಡಿಗೆಯಲ್ಲಿ ಹಾಕಿದನು; ಯಾಕಂದರೆ ಅವರು ಅವುಗಳನ್ನು ಅರಿ ಯದೆ ಇದ್ದರು.
Cross references
ತಿಳುವಳಿಕೆಯಿಲ್ಲದ ಪ್ರಾಣವು ಯುಕ್ತವಲ್ಲ; ತನ್ನ ಪಾದಗಳಿಂದ ದುಡುಕುವ ವನು ಪಾಪಮಾಡುತ್ತಾನೆ.
ನನ್ನ ದ್ರಾಕ್ಷೇ ತೋಟದಲ್ಲಿ ನಾನು ಮಾಡಿದ್ದಕ್ಕಿಂತ ಇನ್ನೂ ಹೆಚ್ಚಾಗಿ ಅದಕ್ಕೆ ಏನು ಮಾಡಬೇಕಾಗಿತ್ತು? ಹೀಗಿರಲು ಅದು ಒಳ್ಳೇ ದ್ರಾಕ್ಷೇ ಫಲವನ್ನು ಫಲಿಸುವದೆಂದು ನಾನು ನಿರೀಕ್ಷಿಸುತ್ತಿರಲು ಅದು ಕಾಡುಹಣ್ಣನ್ನು ಕೊಟ್ಟಿದ್ದು ಯಾಕೆ?
ಆದಾಗ್ಯೂ ನಾನು ನಿನ್ನನ್ನು ಉತ್ತಮ ದ್ರಾಕ್ಷೇಬಳ್ಳಿಯಾಗಿಯೂ ಪೂರ್ಣ ವಾಗಿ ನಿಜ ಬೀಜವಾಗಿಯೂ ನೆಟ್ಟಿದ್ದೆನು; ಆದರೆ ನೀನು ಹೀಗೆ ನನಗೆ ಅನ್ಯ ದ್ರಾಕ್ಷೇ ಬಳ್ಳಿಯ ಹಾಗೆ ಕೆಟ್ಟುಹೋಗಿ ಬದಲಾದಿ?
ಅದಕ್ಕೆ ಆತನು ಪ್ರತ್ಯುತ್ತರವಾಗಿ ಅವರಿಗೆ--ಪರ ಲೋಕದ ನನ್ನ ತಂದೆಯು ನೆಡದೆ ಇರುವ ಪ್ರತಿಯೊ ಂದು ಗಿಡವು ಬೇರು ಸಹಿತವಾಗಿ ಕಿತ್ತುಹಾಕಲ್ಪಡುವದು.
ನಿಮ್ಮಲ್ಲಿ ಯಾವನಾದರೂ ದೇವರ ಕೃಪೆಗೆ ತಪ್ಪಿ ಹೋಗ ದಂತೆಯೂ ಯಾವ ವಿಷವುಳ್ಳ ಬೇರೂ ನಿಮ್ಮಲ್ಲಿ ಚಿಗುರಿ ಕಳವಳ ಹುಟ್ಟಿಸಿ ಅದರಿಂದ ಅನೇಕರು ಅಶುದ್ಧರಾಗ ದಂತೆಯೂ