Home Bibles 2 ಅರಸುಗಳು 5:1 · ಕನ್ನಡ ಬೈಬಲ್
2 ಅರಸುಗಳು 5:1 · ಕನ್ನಡ ಬೈಬಲ್

ಅರಾಮ್ಯರ ಅರಸನ ಸೈನ್ಯಾಧಿಪತಿಯಾದ ನಾಮಾನನು ತನ್ನ ಯಜಮಾನನ ಮುಂದೆ ದೊಡ್ಡವನಾಗಿಯೂ ಘನವುಳ್ಳವನಾಗಿಯೂ ಇದ್ದನು. ಕರ್ತನು ಅವನಿಂದ ಅರಾಮ್ಯರಿಗೆ ಬಿಡುಗಡೆಯನ್ನು ಉಂಟುಮಾಡಿದ್ದನು; ಇದಲ್ಲದೆ ಅವನು ಪರಾಕ್ರಮ ಶಾಲಿಯಾಗಿದ್ದನು. ಆದರೆ ಅವನು ಕುಷ್ಠರೋಗಿಯಾ ಗಿದ್ದನು.

Cross references

ನಿರ್ಗಮಕಾಂಡ 11:3

ಇದಲ್ಲದೆ ಕರ್ತನು ಐಗುಪ್ತ್ಯರ ದೃಷ್ಟಿಯಲ್ಲಿ ಜನರಿಗೆ ದಯೆದೊರಕುವಂತೆ ಮಾಡಿದನು. ಆ ಮನುಷ್ಯನಾದ ಮೋಶೆಯು ಐಗುಪ್ತದೇಶದಲ್ಲಿಯೂ ಫರೋಹನ ಸೇವಕರ ದೃಷ್ಟಿಯಲ್ಲಿಯೂ ಜನರ ದೃಷ್ಟಿಯಲ್ಲಿಯೂ ಬಹು ದೊಡ್ಡವನಾಗಿದ್ದನು.

ಲೇವ್ಯಕಾಂಡ 13:2

ಒಬ್ಬ ಮನುಷ್ಯನಿಗೆ ತನ್ನ ಶರೀರದ ಚರ್ಮದ ಮೇಲೆ ಬಾವಾಗಲಿ ಕಜ್ಜಿಯಾಗಲಿ ಹೊಳಪಿನ ಮಚ್ಚೆಯಾಗಲಿ ಮತ್ತು ಅವನ ಶರೀರದ ಚರ್ಮದಲ್ಲಿ ಕುಷ್ಠದ ವ್ಯಾಧಿ ಯಂತಿದ್ದರೆ ಅವನು ಯಾಜಕನಾದ ಆರೋನನ ಬಳಿ ಗಾದರೂ ಇಲ್ಲವೆ ಯಾಜಕರಾದ ಅವನ ಕುಮಾರರಲ್ಲಿ ಒಬ್ಬನ ಬಳಿಗಾದರೂ ತರಲ್ಪಡಬೇಕು.

ಲೇವ್ಯಕಾಂಡ 13:44

ವ್ಯಾಧಿಯು ಅವನ ತಲೆಯಲ್ಲಿದೆ ಯೆಂದೂ ಖಂಡಿತವಾಗಿ ಅಶುದ್ಧನೆಂದೂ ಯಾಜಕನು ಹೇಳಬೇಕು.

ಅಂಕೆಗಳ ಪುಸ್ತಕ 12:10

ಆ ಮೇಘವು ಗುಡಾರದ ಮೇಲಿನಿಂದ ತೊಲಗಿ ಹೋಯಿತು; ಆಗ ಇಗೋ, ಮಿರ್ಯಾಮಳು ಹಿಮದ ಹಾಗೆ ಕುಷ್ಠವುಳ್ಳವಳಾದಳು. ಆರೋನನು ಮಿರ್ಯಾಮಳ ಕಡೆಗೆ ನೋಡಿದಾಗ ಇಗೋ, ಅವಳು ಕುಷ್ಠರೋಗಿ ಯಾಗಿದ್ದಳು.

ದ್ವಿತೀಯೋಪದೇಶಕಾಂಡ 2:37

ಅಮ್ಮೋನಿಯರ ಮಕ್ಕಳ ದೇಶಕ್ಕೂ ಯಬ್ಬೋಕ್‌ ನದಿಯ ಯಾವ ದೊಂದು ಸ್ಥಳಕ್ಕೂ ಪರ್ವತ ಪಟ್ಟಣಗಳಿಗೂ ನಮ್ಮ ದೇವರಾದ ಕರ್ತನು ನಮಗೆ ಬೇಡವೆಂದ ಯಾವ ಸ್ಥಳಕ್ಕೂ ನೀನು ಮಾತ್ರ ಬರಲಿಲ್ಲ.

2 ಸಮುವೇಲ 3:29

ಅದು ಯೋವಾಬನ ತಲೆಯ ಮೇಲೆಯೂ ಅವನ ತಂದೆಯ ಮನೆತನದವರ ಮೇಲೆಯೂ ಇರಲಿ. ಯೋವಾಬನ ಮನೆಯಲ್ಲಿ ರಕ್ತ ಸ್ರಾವ ರೋಗದವನೂ ಕುಷ್ಠರೋಗಿಯೂ ಕೋಲು ಹಿಡಿದು ನಡೆಯುವವನೂ ಕತ್ತಿಯಿಂದ ಬೀಳುವವನೂ ರೊಟ್ಟಿಯ ಕೊರತೆಯುಳ್ಳ ಯಾವನೂ ತಪ್ಪಿಸಿಕೊಳ್ಳ ಲಾರದೆ ಇರಲಿ ಅಂದನು.

2 ಅರಸುಗಳು 4:8

ಆ ಕಾಲದಲ್ಲಿ ಏನಾಯಿತಂದರೆ, ಎಲೀಷನು ಶೂನೇ ಮಿಗೆ ಹೋದನು. ಅಲ್ಲಿ ಘನವುಳ್ಳ ಒಬ್ಬ ಸ್ತ್ರೀಯು ಇದ್ದಳು. ಅವಳು ಅವನನ್ನು ರೊಟ್ಟಿ ತಿನ್ನಲು ಬಲವಂತ ಮಾಡಿದಳು. ಹಾಗೆಯೇ ಅವನು ಆ ಮಾರ್ಗವಾಗಿ ಹೋಗುವಾಗೆಲ್ಲಾ ಅಲ್ಲಿ ರೊಟ್ಟಿ ತಿನ್ನಲು ಹೋಗುತ್ತಿ ದ್ದನು.

2 ಅರಸುಗಳು 5:27

ಆದದರಿಂದ ನಾಮಾನನ ಕುಷ್ಠರೋಗವು ನಿನಗೂ ನಿನ್ನ ಸಂತಾನಕ್ಕೂ ನಿತ್ಯವಾಗಿ ಹತ್ತುವದು ಅಂದನು. ಆಗ ಅವನು ಮಂಜಿನ ಹಾಗೆಯೇ ಕುಷ್ಠರೋಗಿಯಾಗಿ ಅವನ ಸಮ್ಮುಖದಿಂದ ಹೊರಟುಹೋದನು.

2 ಅರಸುಗಳು 7:3

ಆಗ ಊರು ಬಾಗಲ ದ್ವಾರದಲ್ಲಿ ನಾಲ್ಕುಮಂದಿ ಕುಷ್ಠರೋಗಿಗಳು ಇದ್ದರು. ಅವರು ಒಬ್ಬರಿಗೊಬ್ಬರುನಾವು ಸಾಯುವ ವರೆಗೂ ಇಲ್ಲಿ ಕುಳಿತುಕೊಂಡಿ ರುವದೇನು?

2 ದಿನವೃತ್ತಾಂತ 26:19

ಆಗ ಉಜ್ಜೀಯನು ಕೋಪಿಸಿ ಕೊಂಡನು; ಧೂಪವನ್ನು ಸುಡಲು ಅವನ ಕೈಯಲ್ಲಿ ಧೂಪಾರತಿ ಇತ್ತು. ಅವನು ಯಾಜಕರ ಮೇಲೆ ಕೋಪ ಮಾಡುವಾಗ ಕರ್ತನ ಮಂದಿರದಲ್ಲಿರುವ ಧೂಪಪೀಠದ ಬಳಿಯಲ್ಲಿ ನಿಂತ ಯಾಜಕರ ಮುಂದೆ ಅವನ ಹಣೆಯಲ್ಲಿ ಕುಷ್ಠವು ಎದ್ದಿತು.

ಎಸ್ತೇರ್ 9:4

ಮೊರ್ದೆಕೈ ಅರಮನೆಯಲ್ಲಿ ದೊಡ್ಡವನಾಗಿದ್ದನು. ಅವನ ಕೀರ್ತಿಯು ಸಮಸ್ತ ಪ್ರಾಂತ್ಯಗಳ ಮೇಲೆ ವ್ಯಾಪಿಸಿತು. ಈ ಮೊರ್ದೆಕೈ ಅಧಿಕಾಧಿಕವಾಗಿ ದೊಡ್ಡವನಾದನು.

ಎಸ್ತೇರ್ 10:3

ಯಾಕಂದರೆ ಯೆಹೂದ್ಯನಾದ ಮೊರ್ದೆಕೈ ಅರಸನಾದ ಅಹಷ್ವೇರೋಷನಿಗೆ ಎರಡನೆಯವನೂ ಯೆಹೂದ್ಯ ರಲ್ಲಿ ದೊಡ್ಡವನೂ ತನ್ನ ಸಹೋದರರ ಸಮೂಹದಲ್ಲಿ ಸಮರ್ಪಕನೂ ತನ್ನ ಜನರ ಮೇಲನ್ನು ಹುಡುಕುವ ವನೂ ತನ್ನ ಸಮಸ್ತ ಸಂತಾನದವರಿಗೆ ಸಮಾಧಾನವನ್ನು ಮಾತನಾಡುವವನೂ ಆಗಿದ್ದನು.

ಸಾಮೇತಿಗಳು 21:31

ಯುದ್ಧದ ದಿನಕ್ಕಾಗಿ ಕುದುರೆಯು ಸಿದ್ಧವಾಗಿರುತ್ತದೆ; ಭದ್ರತೆಯು ಕರ್ತನಿಂದಲೇ.

ಯೆಶಾಯ 10:5

ಓ ನನ್ನ ಕೋಪದ ಕೋಲಾದ ಅಶ್ಶೂರವೇ, ಕೈಯಲ್ಲಿರುವ ಬೆತ್ತವು ನನ್ನ ರೌದ್ರವೇ.

ಯೆರೆಮಿಯ 27:5

ಆಗ ಪ್ರವಾದಿಯಾದ ಯೆರೆವಿಾಯನು ಯಾಜಕರ ಮುಂದೆಯೂ ಕರ್ತನ ಆಲಯದಲ್ಲಿ ನಿಂತಿರುವ ಜನರೆಲ್ಲರ ಮುಂದೆಯೂ ಪ್ರವಾದಿಯಾದ ಹನನ್ಯ ನಿಗೆ ಹೇಳಿದ್ದೇನಂದರೆ--

ಲೂಕ 4:27

ಪ್ರವಾದಿಯಾದ ಎಲೀಷನ ಕಾಲ ದಲ್ಲಿ ಅನೇಕ ಕುಷ್ಠರೋಗಿಗಳು ಇಸ್ರಾಯೇಲಿನಲ್ಲಿ ದ್ದಾಗ್ಯೂ ಸಿರಿಯದವನಾದ ನಾಮಾನನ ಹೊರತು ಅವರಲ್ಲಿ ಒಬ್ಬನಾದರೂ ಶುದ್ಧನಾಗಲಿಲ್ಲ ಅಂದನು.

ಯೋಹಾನ 19:11

ಅದಕ್ಕೆ ಯೇಸು--ಮೇಲಿನಿಂದ ನಿನಗೆ ಕೊಡಲ್ಪಡದಿದ್ದರೆ ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಾದ ಪಾಪ ಉಂಟು ಎಂದು ಉತ್ತರ ಕೊಟ್ಟನು.

ರೋಮಾಪುರದವರಿಗೆ 15:18

ಮಾತಿ ನಿಂದಲೂ ಕ್ರಿಯೆಯಿಂದಲೂ ಬಲವಾದ ಸೂಚಕ ಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ದೇವರಾತ್ಮನ ಬಲದಿಂದಲೂ ಅನ್ಯಜನಗಳವರು ವಿಧೇಯರಾಗುವಂತೆ ಕ್ರಿಸ್ತನು ನನ್ನ ಮೂಲಕ ಮಾಡ ದಿರುವವುಗಳನ್ನು ಮಾತನಾಡಲು ನಾನು ಧೈರ್ಯ ಪಡುವದಿಲ್ಲ.

2 ಕೊರಿಂಥದವರಿಗೆ 12:7

ಇದಲ್ಲದೆ ಹೇರಳವಾದ ಪ್ರಕಟಣೆಗಳ ಮೂಲಕ ನಾನು ಮಿತಿವಿಾರಿ ಹೆಚ್ಚಿಸಿ ಕೊಳ್ಳಬಾರದೆಂದು ನನ್ನನ್ನು ಗುದ್ದುವದಕ್ಕಾಗಿ ಸೈತಾನನ ದೂತನಂತೆ ನನ್ನ ಶರೀರದಲ್ಲಿ ಒಂದು ಮುಳ್ಳು ನನಗೆ ಕೊಡಲ್ಪಟ್ಟಿದೆ; ಹೀಗೆ ನಾನು ಮಿತಿವಿಾರಿ ಹೆಚ್ಚಿಸಿ ಕೊಳ್ಳಲಾರದಂತೆ ಇದಾಯಿತು.

Interlinear

Choose Theme