ಆದದರಿಂದ ಒಬ್ಬನು ಕುದುರೆಯನ್ನು ಹತ್ತಿ ಅವನಿಗೆ ಎದುರಾಗಿ ಹೋಗಿ--ಸಮಾಧಾನವೋ ಎಂದು ಅರಸನು ಕೇಳು ತ್ತಾನೆ ಅಂದನು. ಅದಕ್ಕೆ ಯೇಹುವು--ಸಮಾಧಾನ ನಿನಗೆ ಏನು? ನನ್ನ ಹಿಂದಕ್ಕೆ ಹೋಗು ಅಂದನು. ಆಗ ಕಾವಲುಗಾರನು -- ಸೇವಕನು ಅವರ ಬಳಿಗೆ ಹೋಗಿ ತಿರಿಗಿ ಬರಲಿಲ್ಲ ಅಂದನು.
Cross references
ಆಗ ಬೇರೆ ರಾಹುತನನ್ನು ಕಳುಹಿಸಿದನು. ಇವನು ಅವರ ಬಳಿಗೆ ಹೋಗಿ--ಸಮಾಧಾನವೋ ಎಂದು ಅರಸನು ಕೇಳು ತ್ತಾನೆ ಅಂದನು. ಅದಕ್ಕೆ ಯೇಹುವು--ಸಮಾಧಾನ ನಿನಗೆ ಏನು--ನನ್ನ ಹಿಂದಕ್ಕೆ ಹೋಗು ಅಂದನು.
ಯೋರಾಮನು ಯೇಹು ವನ್ನು ನೋಡಿದಾಗ--ಯೇಹುವೇ, ಸಮಾಧಾನವೋ ಅಂದನು. ಅದಕ್ಕವನು--ನಿನ್ನ ತಾಯಿಯಾದ ಈಜೆ ಬೆಲಳ ಜಾರತ್ವವೂ ಅವಳ ಮಾಟಗಳೂ ಅಧಿಕವಾಗಿರು ವಾಗ ಸಮಾಧಾನವೇನು ಅಂದನು.
ದುಷ್ಟರಿಗೆ ಸಮಾಧಾನವೇ ಇಲ್ಲ ಎಂದು ಕರ್ತನು ನುಡಿಯುತ್ತಾನೆ.
ಸಮಾ ಧಾನದ ಮಾರ್ಗವನ್ನರಿಯರು; ಅವರ ದಾರಿಗಳಲ್ಲಿ ನ್ಯಾಯವಿಲ್ಲ; ತಮ್ಮ ಹಾದಿಗಳನ್ನು ಡೊಂಕು ಮಾಡಿ ಕೊಂಡಿದ್ದಾರೆ; ಅವುಗಳಲ್ಲಿ ನಡೆಯುವವರೆಲ್ಲರು ಸಮಾ ಧಾನವನ್ನರಿಯರು.
ಕರ್ತನು ಹೀಗೆ ಹೇಳುತ್ತಾನೆ--ಮನುಷ್ಯನಲ್ಲಿ ನಂಬಿಕೆ ಇಟ್ಟು ಅವನನ್ನು ತನ್ನ ಬಾಹುವನ್ನಾಗಿ ಮಾಡಿ ಕೊಂಡು ಕರ್ತನ ಕಡೆಯಿಂದ ಯಾವನ ಹೃದಯವು ತೊಲಗುವದೋ ಅವನು ಶಾಪಗ್ರಸ್ತನು.
ಅವರು ಸಮಾಧಾನದ ಮಾರ್ಗ ವನ್ನೇ ಅರಿತವರಲ್ಲ;