ಅವನು ಒಳಗೆ ಹೋಗಿ ತಿಂದು ಕುಡಿದ ಮೇಲೆ ಅವರಿಗೆ -- ನೀವು ಹೋಗಿ ಆ ಶಪಿಸಲ್ಪಟ್ಟವಳನ್ನು ನೋಡಿಕೊಂಡು ಹೂಣಿಡಿರಿ; ಅವಳು ಅರಸನ ಮಗಳು ಅಂದನು.
Cross references
ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳಲ್ಲಿ ನಡೆಯು ವದು ಅವನಿಗೆ ಅಲ್ಪವಾಗಿತ್ತು; ಅವನು ಚೀದೋನ್ಯರ ಅರಸನಾಗಿರುವ ಎತ್ಬಾಳನ ಮಗಳಾದ ಈಜೆಬೆಲಳನ್ನು ಮದುವೆಯಾಗಿ ಬಾಳನನ್ನು ಸೇವಿಸಿ ಅವನಿಗೆ ಅಡ್ಡ ಬಿದ್ದನು.
ಎಲೀಯನು ಅಹಾಬನಿಗೆ--ನೀನು ಹೋಗಿ ತಿಂದು ಕುಡಿ; ಯಾಕಂದರೆ ಬಹು ಮಳೆಯ ಶಬ್ದವು ಆಯಿತು ಅಂದನು.
ಆದರೆ ತನ್ನ ಹೆಂಡತಿಯಾದ ಈಜೆಬೆಲಳಿಂದ ಪ್ರೇರೇಪಿಸಲ್ಪಟ್ಟು ಕರ್ತನ ಸಮ್ಮುಖದಲ್ಲಿ ಕೆಟ್ಟತನವನ್ನು ಮಾಡಲು ತನ್ನನ್ನು ಮಾರಿಬಿಟ್ಟ ಅಹಾಬನ ಹಾಗೆ ಯಾವನೂ ಇರಲಿಲ್ಲ.
ಅಂಚೆ ಯವರು ಅರಸನ ಆಜ್ಞೆಯಿಂದ ತ್ವರೆಯಾಗಿ ಹೊರಟು ಹೋದರು. ಶೂಷನ್ ಅರಮನೆಯಲ್ಲಿ ಆ ಆಜ್ಞೆಯು ಕೊಡಲ್ಪಟ್ಟಿತು. ಅರಸನೂ ಹಾಮಾನನೂ ಕುಡಿಯಲು ಕುಳಿತುಕೊಂಡರು. ಆದರೆ ಶೂಷನ್ ಪಟ್ಟಣವು ತಳ ಮಳಗೊಂಡಿತು.
ನೀತಿ ವಂತರ ಸ್ಮರಣೆಯು ಧನ್ಯಕರವಾಗಿದೆ; ದುಷ್ಟರ ಹೆಸರು ಕೊಳೆಯುತ್ತದೆ.
ನಾನು ಆದುಕೊಂಡವರಿಗೆ ನಿಮ್ಮ ಹೆಸರನ್ನು ಶಾಪವಾಗಿ ಉಳಿ ಸುವಿರಿ; ಕರ್ತನಾದ ಯೆಹೋವನು ನಿಮ್ಮನ್ನು ಕೊಂದು ಹಾಕಿ, ತನ್ನ ಸೇವಕರಿಗೆ ಬೇರೆ ಹೆಸರನ್ನು ಇಡುವನು.
ದಂತದ ಮಂಚಗಳ ಮೇಲೆ ಮಲಗಿಕೊಳ್ಳು ತ್ತಾರೆ; ತಮ್ಮ ಹಾಸಿಗೆಗಳ ಮೇಲೆ ಹಾಯಾಗಿ ಒರಗಿ ಕೊಳ್ಳುತ್ತಾರೆ; ಮಂದೆಯೊಳಗಿಂದ ಕುರಿಮರಿಗಳನ್ನು, ಹಟ್ಟಿಯ ಮಂದೆಯೊಳಗಿಂದ ಕರುಗಳನ್ನು ತಿನ್ನುತ್ತಾರೆ.
ಆತನು ಎಡಗಡೆ ಯಲ್ಲಿರುವವರಿಗೆ--ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧ ಮಾಡಲ್ಪಟ್ಟ ನಿತ್ಯ ಬೆಂಕಿಯೊಳಗೆ ಹೋಗಿರಿ.