Home Bibles 2 ಪೇತ್ರ 2:8 · ಕನ್ನಡ ಬೈಬಲ್
2 ಪೇತ್ರ 2:8 · ಕನ್ನಡ ಬೈಬಲ್

ಆ ನೀತಿವಂತನು ಅವರ ಮಧ್ಯದಲ್ಲಿ ಇದ್ದುಕೊಂಡು ಅವರ ಅನ್ಯಾಯ ಕೃತ್ಯಗಳನ್ನು ನೋಡುತ್ತಾ ಕೇಳುತ್ತಾ ಅವುಗಳ ನಿಮಿತ್ತ ದಿನೇ ದಿನೇ ತನ್ನ ನೀತಿಯುಳ್ಳ ಆತ್ಮದಲ್ಲಿ ವೇದನೆಗೊಂಡನು.

Cross references

ಕೀರ್ತನೆಗಳು 119:136

ಅವರು ನಿನ್ನ ನ್ಯಾಯಪ್ರಮಾಣವನ್ನು ಕೈ ಕೊಳ್ಳದ ನಿಮಿತ್ತ ಹೊಳೆಗಳಂತೆ ನನ್ನ ಕಣ್ಣೀರು ಹರಿಯುತ್ತದೆ.

ಕೀರ್ತನೆಗಳು 119:139

ನನ್ನ ವೈರಿಗಳು ನಿನ್ನ ವಾಕ್ಯಗಳನ್ನು ಮರೆತುಬಿಡುವದರಿಂದ ನನ್ನ ಆಸಕ್ತಿಯು ನನ್ನನ್ನು ದಹಿಸಿಯದೆ.

ಕೀರ್ತನೆಗಳು 119:158

ನಿನ್ನ ವಾಕ್ಯವನ್ನು ಕೈಕೊಳ್ಳದ ಅಪರಾಧಿಗಳನ್ನು ನೋಡಿ ದುಃಖಪಟ್ಟಿದ್ದೇನೆ.

ಸಾಮೇತಿಗಳು 25:26

ದುಷ್ಟರ ಮುಂದೆ ನೀತಿವಂತನು ಬೀಳುವದು, ಕದಲಿ ಸಲ್ಪಟ್ಟ ಬುಗ್ಗೆ, ಕೊಳಕಾದ ಒರತೆ ಇದ್ದಂತೆ.

ಸಾಮೇತಿಗಳು 28:12

ನೀತಿವಂತರು ಉಲ್ಲಾಸಿಸಿ ದರೆ ದೊಡ್ಡ ಘನತೆ ಇರುವದು; ದುಷ್ಟರಿಗೆ ಏಳಿಗೆ ಯಾದರೆ ಮನುಷ್ಯನು ಅಡಗಿಕೊಳ್ಳುತ್ತಾನೆ.

ಯೆಹೆಜ್ಕೇಲ 9:4

ಕರ್ತನು ಅವನಿಗೆ ಹೇಳಿದ್ದೇನಂದರೆ--ಯೆರೂ ಸಲೇಮಿನ ಪಟ್ಟಣದ ಮಧ್ಯೆ ಹಾದುಹೋಗಿ ಅವರ ಮಧ್ಯೆ ನಡೆಯುವ ಎಲ್ಲಾ ಅಸಹ್ಯವಾದವುಗಳ ನಿಮಿತ್ತ ನಿಟ್ಟುಸಿರು ಬಿಡುತ್ತಾ ಅಳುತ್ತಿರುವವರೆಲ್ಲರ ಹಣೆಯ ಮೇಲೆ ಗುರುತು ಹಾಕು ಅಂದನು.

ಯೆಹೆಜ್ಕೇಲ 9:6

ವೃದ್ಧ ಯುವಕ ಯುವತಿ ಯರನ್ನು ಎಳೆಕೂಸುಗಳನ್ನು ಮತ್ತು ಹೆಂಗಸರನ್ನು ಸಂಪೂರ್ಣವಾಗಿ ಕೊಂದುಹಾಕಿರಿ. ಆದರೆ ಗುರುತು ಯಾವನ ಮೇಲೆ ಇದೆಯೋ ಅವನ ಹತ್ತಿರ ಹೋಗ ಬೇಡಿರಿ; ನನ್ನ ಪರಿಶುದ್ಧ ಸ್ಥಳದಿಂದಲೇ ಪ್ರಾರಂಭಿಸಿರಿ ಅಂದಾಗ, ಅವರು ಆಲಯದ ಮುಂದಿದ್ದ ಹಿರಿಯರಿಂದ ಪ್ರಾರಂಭಿಸಿದರು.

ಮಲಾಕಿ 3:15

ಈಗ ನಾವು ಗರ್ವಿಷ್ಠ ರನ್ನು ಭಾಗ್ಯವಂತರೆಂದನ್ನುತ್ತೇವೆ; ಹೌದು, ದುಷ್ಟತ್ವ ಮಾಡುವವರು ಅಭಿವೃದ್ಧಿಯಾಗುತ್ತಾರೆ; ಹೌದು, ದೇವರನ್ನು ಪರೀಕ್ಷಿಸುವವರೇ ರಕ್ಷಿಸಲ್ಪಟ್ಟಿದ್ದಾರೆ ಎಂದು ಹೇಳಿದ್ದೀರಿ.

1 ತಿಮೋಥೆಯ 1:9

ನ್ಯಾಯಪ್ರಮಾಣವು ನೀತಿ ವಂತರಿಗೋಸ್ಕರ ಅಲ್ಲ, ಆದರೆ ಅದು ಅಕ್ರಮ ಗಾರರಿಗೂ ಅವಿಧೇಯರಿಗೂ ಭಕ್ತಿಹೀನರಿಗೂ ಪಾಪಿಷ್ಠ ರಿಗೂ ಅಶುದ್ಧರಿಗೂ ಅಪವಿತ್ರಮಾಡುವವರಿಗೂ ತಂದೆತಾಯಿಗಳನ್ನು ಕೊಲ್ಲುವವರಿಗೂ ನರಹತ್ಯ ಮಾಡುವವರಿಗೂ

ಯಾಕೋಬ 5:16

ನೀವು ಸ್ವಸ್ಥವಾಗಬೇಕಾದರೆ ನಿಮ್ಮ ತಪ್ಪುಗಳನ್ನು ಒಬ್ಬರಿಗೊಬ್ಬರು ಅರಿಕೆಮಾಡಿ ಒಬ್ಬರಿ ಗೋಸ್ಕರ ಒಬ್ಬರು ಪ್ರಾರ್ಥಿಸಿರಿ; ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಫಲಕಾರಿಯಾಗುತ್ತದೆ.

Interlinear

Choose Theme