Home Bibles 2 ಸಮುವೇಲ 1:2 · ಕನ್ನಡ ಬೈಬಲ್
2 ಸಮುವೇಲ 1:2 · ಕನ್ನಡ ಬೈಬಲ್

ಇಗೋ, ಮೂರನೆಯ ದಿನದಲ್ಲಿ ತನ್ನ ವಸ್ತ್ರಗಳನ್ನು ಹರಿದುಕೊಂಡು ತನ್ನ ತಲೆಯ ಮೇಲೆ ಮಣ್ಣು ಹಾಕಿಕೊಂಡಿದ್ದ ಒಬ್ಬ ಮನುಷ್ಯನು ಸೌಲನ ಬಳಿಯಿಂದಲೂ ಪಾಳೆಯಿಂದಲೂ ಹೊರಟು ದಾವೀ ದನ ಬಳಿಗೆ ಬಂದು ನೆಲದ ಮೇಲೆ ಬಿದ್ದು ಅವ ನಿಗೆ ವಂದಿಸಿದನು.

Cross references

ಆದಿಕಾಂಡ 22:4

ಮೂರನೆಯ ದಿನದಲ್ಲಿ ಅಬ್ರಹಾಮನು ತನ್ನ ಕಣ್ಣುಗಳನ್ನೆತ್ತಿ ಆ ಸ್ಥಳವನ್ನು ದೂರದಿಂದ ನೋಡಿದನು.

ಆದಿಕಾಂಡ 37:7

ಇಗೋ, ನಾವು ಹೊಲದಲ್ಲಿ ಸಿವುಡುಗಳನ್ನು ಕಟ್ಟುತ್ತಾ ಇದ್ದೆವು; ಆಗ ಇಗೋ, ನನ್ನ ಸಿವುಡು ಎದ್ದು ನಿಂತಿತು; ಆಗ ಇಗೋ, ನಿಮ್ಮ ಸಿವುಡುಗಳು ತಿರುಗಿ ಕೊಂಡು ನನ್ನ ಸಿವುಡಿಗೆ ಅಡ್ಡಬಿದ್ದವು ಅಂದನು.

ಆದಿಕಾಂಡ 37:29

ರೂಬೇನನು ತಗ್ಗಿನ ಬಳಿಗೆ ತಿರಿಗಿ ಬಂದಾಗ ಇಗೋ, ಯೋಸೇಫನು ತಗ್ಗಿನಲ್ಲಿ ಇಲ್ಲದ್ದರಿಂದ ತನ್ನ ವಸ್ತ್ರಗಳನ್ನು ಹರಿದು ಕೊಂಡನು.

ಆದಿಕಾಂಡ 37:34

ಆಗ ಯಾಕೋಬನು ತನ್ನ ವಸ್ತ್ರಗಳನ್ನು ಹರಿದುಕೊಂಡು ತನ್ನ ನಡುವಿಗೆ ಗೋಣಿಯನ್ನು ಕಟ್ಟಿಕೊಂಡು ತನ್ನ ಮಗನಿಗೋಸ್ಕರ ಬಹುದಿನ ದುಃಖಪಟ್ಟನು.

ಆದಿಕಾಂಡ 43:28

ಅದಕ್ಕವರು--ನಿನ್ನ ದಾಸರಾದ ನಮ್ಮ ತಂದೆಯು ಕ್ಷೇಮದಿಂದಿದ್ದಾನೆ. ಅವನು ಇನ್ನೂ ಬದುಕಿದ್ದಾನೆ ಎಂದು ಹೇಳಿ ತಮ್ಮ ತಲೆಗಳನ್ನು ಬಾಗಿಸಿ ವಂದಿಸಿದರು.

ಯೆಹೋಶುವ 7:6

ಆಗ ಯೆಹೋಶುವನು ತನ್ನ ವಸ್ತ್ರಗಳನ್ನು ಹರಿದುಕೊಂಡು ತಾನೂ ಇಸ್ರಾಯೇಲಿನ ಹಿರಿಯರೂ ತಮ್ಮ ತಲೆಗಳ ಮೇಲೆ ಧೂಳನ್ನು ಹಾಕಿಕೊಂಡು ಸಾಯಂಕಾಲದ ವರೆಗೆ ಕರ್ತನ ಮಂಜೂಷದ ಮುಂದೆ ನೆಲದಮೇಲೆ ಬೋರಲು ಬಿದ್ದರು.

1 ಸಮುವೇಲ 4:12

ಅದೇ ದಿವಸದಲ್ಲಿ ಬೆನ್ಯಾವಿಾನ್ಯನಾದ ಒಬ್ಬ ಮನುಷ್ಯನು ತನ್ನ ವಸ್ತ್ರಗಳನ್ನು ಹರಿದುಕೊಂಡು ತನ್ನ ತಲೆಯ ಮೇಲೆ ಮಣ್ಣುಹಾಕಿಕೊಂಡು ಯುದ್ಧರಂಗ ದಿಂದ ಶೀಲೋವಿಗೆ ಓಡಿಬಂದನು.

1 ಸಮುವೇಲ 4:16

ಏಲಿಯು ತೊಂಬತ್ತೆಂಟು ವರುಷ ಪ್ರಾಯದವ ನಾಗಿದ್ದನು. ಅವನು ನೋಡದ ಹಾಗೆ ಅವನ ಕಣ್ಣುಗಳು ಮೊಬ್ಬಾಗಿದ್ದವು. ಆ ಮನುಷ್ಯನು ಏಲಿಗೆ--ಯುದ್ಧರಂಗ ದಿಂದ ಬಂದವನು ನಾನೇ; ನಾನು ಈ ಹೊತ್ತು ಯುದ್ಧರಂಗದಿಂದ ಓಡಿಬಂದೆ ಅಂದನು. ಆಗ ಅವನು--ನನ್ನ ಮಗನೇ, ಅಲ್ಲಿ ನಡೆದ ವರ್ತಮಾನವೇನು ಅಂದನು.

1 ಸಮುವೇಲ 20:41

ಹುಡುಗನು ಹೋಗುತ್ತಲೇ ದಾವೀದನು ದಕ್ಷಿಣ ಕಡೆಯಿಂದ ಎದ್ದುಬಂದು ಬೋರಲು ಬಿದ್ದು ಮೂರು ಸಾರಿ ವಂದಿಸಿದನು. ಅವರು ಒಬ್ಬರಿಗೊ ಬ್ಬರು ಮುದ್ದಿಟ್ಟುಕೊಂಡು ಒಬ್ಬರನ್ನೊಬ್ಬರು ನೋಡಿ ಅತ್ತರು; ದಾವೀದನು ಬಹಳವಾಗಿ ಅತ್ತನು;ಆಗ ಯೋನಾತಾನನು ದಾವೀದನಿಗೆ--ನೀನು ಸಮಾಧಾನದಿಂದ ಹೋಗು; ಕರ್ತನು ಎಂದೆಂದಿಗೂ ನನಗೂ ನಿನಗೂ ನನ್ನ ಸಂತಾನಕ್ಕೂ ನಿನ್ನ ಸಂತಾ ನಕ್ಕೂ ಮಧ್ಯದಲ್ಲಿ ಕರ್ತನ ಹೆಸರಿನಿಂದ ನಾವಿಬ್ಬರೂ ಪ್ರಮಾಣ ಇಟ್ಟುಕೊಂಡೆವಲ್ಲಾ ಅಂದನು. ಆಗ ದಾವೀದನು ಎದ್ದು ಹೋದನು; ಯೋನಾತಾನನು ಪಟ್ಟಣಕ್ಕೆ ಹೋದನು.

1 ಸಮುವೇಲ 25:23

ಅಬೀಗೈಲಳು ದಾವೀದನನ್ನು ನೋಡಿದ ಕೂಡಲೇ ಕತ್ತೆಯಿಂದಿಳಿದು ದಾವೀದನಿಗೆ ಎದುರಾಗಿ ಹೋಗಿ ಅವನ ಮುಂದೆ ಬೋರಲು ಬಿದ್ದು ನೆಲಕ್ಕೆ ಎರಗಿ ಅವನ ಪಾದಗಳ ಮೇಲೆ ಬಿದ್ದು--ನನ್ನ ಒಡೆ ಯನೇ, ಈ ಅಕ್ರಮವು ನನ್ನ ಮೇಲೆಯೇ ಇರಲಿ.

2 ಸಮುವೇಲ 4:10

ಒಬ್ಬನು ನನಗೆ--ಇಗೋ, ಸೌಲನು ಸತ್ತನೆಂದು ಹೇಳಿದ್ದರಿಂದ ನಾನು ಚಿಕ್ಲಗಿನಲ್ಲಿ ಅವನನ್ನು ಹಿಡಿದು ಕೊಂದುಹಾಕಿದೆನು.

2 ಸಮುವೇಲ 13:19

ಆಗ ತನ್ನ ತಲೆಯಮೇಲೆ ಬೂದಿಯನ್ನು ಹಾಕಿಕೊಂಡು ತಾನು ಧರಿಸಿಕೊಂಡಿದ್ದ ವಿವಿಧವಾದ ವಸ್ತ್ರವನ್ನು ಹರಿದು ತನ್ನ ಕೈಗಳನ್ನು ತಲೆಯ ಮೇಲೆ ಇಟ್ಟುಕೊಂಡು ಅಳುತ್ತಾ ಹೋದಳು.

2 ಸಮುವೇಲ 14:4

ಹಾಗೆಯೇ ತೆಕೋವಿನವಳಾದ ಆ ಸ್ತ್ರೀಯು ಅರಸನ ಸಂಗಡ ಮಾತನಾಡಿ ನೆಲಕ್ಕೆ ಬಿದ್ದು ಭಕ್ತಿ ಗೌರವದಿಂದ ವಂದಿಸಿ--ಅರಸೇ, ಸಹಾಯಮಾಡು ಎಂದು ಕೇಳಿ ಕೊಂಡಳು.

2 ಸಮುವೇಲ 15:32

ದಾವೀದನು ಪರ್ವತದ ತುದಿಗೆ ಬಂದು ಅಲ್ಲಿ ದೇವರನ್ನು ಆರಾಧಿಸಿ ದಾಗ ಏನಾಯಿತಂದರೆ ಇಗೋ, ಅರ್ಕೀಯನಾದ ಹೂಷೈ ತನ್ನ ಅಂಗಿಯನ್ನು ಹರಿದುಕೊಂಡು ತನ್ನ ತಲೆಯ ಮೇಲೆ ಮಣ್ಣು ಹೊಯ್ದುಕೊಂಡು ಅವನನ್ನು ಎದುರುಗೊಳ್ಳಲು ಬಂದನು.

2 ಸಮುವೇಲ 24:20

ಆದರೆ ಅರೌನನು ಕಣ್ಣೆತ್ತಿ ಅರಸನೂ ಅವನ ಸೇವಕರೂ ತನ್ನ ಬಳಿಗೆ ಬರುವದನ್ನು ನೋಡಿದನು; ಆಗ ಅರೌನನು ಅವರ ಮುಂದೆ ಹೋಗಿ ಅರಸನಿಗೆ ಸಾಷ್ಟಾಂಗ ನಮಸ್ಕಾರ ಮಾಡಿದನು. ಅರೌನನುಅರಸನಾದ ನನ್ನ ಒಡೆಯನು ತನ್ನ ಸೇವಕನ ಬಳಿಗೆ ಬಂದದ್ದೇನು ಅಂದನು.

ಎಸ್ತೇರ್ 4:16

ನಾನೂ ನನ್ನ ದಾಸಿಯರೂ ಹಾಗೆಯೇ ಉಪವಾಸ ಮಾಡುವೆವು. ಅನಂತರ ನಾನು ಆಜ್ಞೆ ವಿಾರಿ ಅರಸನ ಬಳಿಗೆ ಪ್ರವೇಶಿಸುವೆನು. ನಾನು ನಾಶವಾದರೆ ನಾಶವಾಗುವೆನು ಅಂದಳು.ಆಗ ಮೊರ್ದೆಕೈ ಹೊರಟು ಹೋಗಿ ಎಸ್ತೇರಳು ತನಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡಿದನು.

ಎಸ್ತೇರ್ 5:1

ಮೂರನೇ ದಿನದಲ್ಲಿ ಏನಾಯಿತಂದರೆ, ಎಸ್ತೇರಳು ರಾಜ ಭೂಷಣಗಳನ್ನು ಧರಿಸಿ ಕೊಂಡು ಅರಮನೆಗೆ ಎದುರಾಗಿರುವ ಅರಸನ ಮನೆಯ ಅಂಗಳದಲ್ಲಿ ಹೋಗಿ ನಿಂತಳು. ಅರಸನು ರಾಜ ಮನೆ ಯಲ್ಲಿ ಬಾಗಲಿಗೆದುರಾಗಿ ತನ್ನ ರಾಜ ಸಿಂಹಾಸನದ ಮೇಲೆ ಕುಳಿತಿದ್ದನು.

ಕೀರ್ತನೆಗಳು 66:3

ದೇವರಿಗೆ--ನಿನ್ನ ಕೆಲಸಗಳಿಂದ ನೀನು ಎಷ್ಟು ಭಯಂಕರನಾಗಿದ್ದೀ ಎಂದು ಹೇಳಿರಿ. ನಿನ್ನ ಮಹಾಬಲದ ನಿಮಿತ್ತ ನಿನ್ನ ಶತ್ರುಗಳು ತಾವೇ ನಿನಗೆ ಅಧೀನರಾಗುವರು;

ಹೊಶೇಯ 6:2

ಆತನು ಎರಡು ದಿನಗಳಾದ ಮೇಲೆ ನಮ್ಮನ್ನು ಪುನರ್ಜೀವಿಸ ಮಾಡುವನು; ಮೂರನೆಯ ದಿನದಲ್ಲಿ ಆತನೇ ನಮ್ಮನ್ನು ಎಬ್ಬಿಸುವನು; ನಾವು ಆತನ ದೃಷ್ಟಿಯಲ್ಲಿ ಜೀವಿಸುವೆವು.

ಯೋವೇಲ 2:13

ನಿಮ್ಮ ಬಟ್ಟೆಗಳನ್ನಲ್ಲ, ನಿಮ್ಮ ಹೃದಯವನ್ನು ಹರಕೊಂಡು ನಿಮ್ಮ ದೇವರಾದ ಕರ್ತನ ಕಡೆಗೆ ತಿರುಗಿಕೊಳ್ಳಿರಿ; ಆತನು ದಯೆ ಕರುಣೆ ದೀರ್ಘಶಾಂತಿ ಮಹಾ ಕೃಪೆಯೂ ಉಳ್ಳವನಾಗಿ ಕೇಡಿಗೆ ಪಶ್ಚಾತ್ತಾಪಪಡುತ್ತಾನೆ.

ಮತ್ತಾಯ 12:40

ಯಾಕಂದರೆ ಯೋನನು ಮೂರು ಹಗಲು ಮತ್ತು ಮೂರು ರಾತ್ರಿ ಮಾನಿನ ಹೊಟ್ಟೆಯಲ್ಲಿ ಇದ್ದ ಹಾಗೆಯೇ ಮನುಷ್ಯಕುಮಾರನು ಮೂರು ಹಗಲು ಮತ್ತು ಮೂರು ರಾತ್ರಿ ಭೂಗರ್ಭ ದಲ್ಲಿರುವನು.

ಮತ್ತಾಯ 16:21

ತಾನು ಯೆರೂಸಲೇಮಿಗೆ ಹೋಗಿ ಹೇಗೆ ಹಿರಿಯರಿಂದಲೂ ಪ್ರಧಾನ ಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಶ್ರಮೆಗಳನ್ನು ಅನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ತಿರಿಗಿ ಎದ್ದು ಬರುವದು ಅವಶ್ಯವಾಗಿದೆ ಎಂದು ಯೇಸು ಅಂದಿನಿಂದ ತನ್ನ ಶಿಷ್ಯರಿಗೆ ತಿಳಿಸಲಾರಂಭಿಸಿದನು.

ಪ್ರಕಟನೆ 3:9

ಇಗೋ, ಯೆಹೂದ್ಯ ರಲ್ಲದವರಾಗಿದ್ದರೂ ತಾವು ಯೆಹೂದ್ಯರೆಂದು ಸುಳ್ಳಾಗಿ ಹೇಳಿಕೊಳ್ಳುವ ಸೈತಾನನ ಸಭಾಮಂದಿರದವರನ್ನು ಬರಮಾಡಿ, ಇಗೋ, ಅವರನ್ನು ನಿನ್ನ ಪಾದಗಳ ಮುಂದೆ ಆರಾಧಿಸುವಂತೆ ಮಾಡುವೆನು, ಇದರಿಂದ ನಾನು ನಿನ್ನನ್ನು ಪ್ರೀತಿಸಿದ್ದೇನೆಂದು ಅವರು ತಿಳುಕೊಳ್ಳುವಂತೆ ಮಾಡು

Interlinear

Choose Theme