Home Bibles ☰ Books 2 ಸಮುವೇಲ 1:23 · ಕನ್ನಡ ಬೈಬಲ್
2 ಸಮುವೇಲ 1:23 · ಕನ್ನಡ ಬೈಬಲ್

ಸೌಲನೂ ಯೋನಾತಾನನೂ ಜೀವದಿಂದಿದ್ದಾಗ ಪ್ರಿಯಕರವಾಗಿಯೂ ಸಂತೋಷಕರವಾಗಿಯೂ ಇದ್ದರು; ತಮ್ಮ ಮರಣದಲ್ಲಿಯೂ ಅಗಲಿ ಹೋಗದೆ ಇದ್ದರು. ಅವರು ಹದ್ದುಗಳಿಗಿಂತ ವೇಗವುಳ್ಳವರೂ ಸಿಂಹಗಳಿಗಿಂತ ಬಲ ವುಳ್ಳವರೂ ಆಗಿದ್ದರು.

Cross references

ದ್ವಿತೀಯೋಪದೇಶಕಾಂಡ 28:49

ಕರ್ತನು ದೂರದಿಂದ ಅಂದರೆ ಭೂಮಿಯ ಅಂತ್ಯದಿಂದ ಹಾರುವ ಹದ್ದಿಗೆ ಸಮಾನವಾದ ಜನಾಂಗ ವನ್ನೂ ನಿನಗೆ ತಿಳಿಯದ ಭಾಷೆಯ ಜನಾಂಗವನ್ನೂ

ನ್ಯಾಯಾಧಿಪತಿಗಳು 14:18

ಆದದ ರಿಂದ ಏಳನೇ ದಿನದಲ್ಲಿ ಸೂರ್ಯನು ಮುಳುಗುವದ ಕ್ಕಿಂತ ಮುಂಚೆ ಆ ಊರಿನವರು ಅವನಿಗೆ--ಜೇನಿಗಿಂತ ಸಿಹಿಯಾದದ್ದೇನು? ಸಿಂಹಕ್ಕಿಂತ ಬಲವಾದದ್ದೇನು? ಎಂದು ಹೇಳಿದರು. ಅವನು ಅವರಿಗೆ--ನೀವು ನನ್ನ ಕಡಸಿನಿಂದ ಉಳದಿದ್ದರೆ ನನ್ನ ಒಗಟನ್ನು ಗ್ರಹಿಸಲಾರಿರಿ ಅಂದನು.

1 ಸಮುವೇಲ 18:1

ದಾವೀದನು ಸೌಲನ ಸಂಗಡ ಮಾತನಾಡಿ ತೀರಿಸಿದಾಗ ಯೋನಾತಾನನ ಪ್ರಾಣವು ದಾವೀದನ ಪ್ರಾಣದ ಸಂಗಡ ಒಂದಾಯಿತು. ಯೋನಾತಾನನು ಅವನನ್ನು ತನ್ನ ಪ್ರಾಣದ ಹಾಗೆಯೇ ಪ್ರೀತಿಮಾಡಿದನು.

1 ಸಮುವೇಲ 20:2

ಅವನು ಇವನಿಗೆ--ಅದು ಆಗಬಾರದು; ನೀನು ಸಾಯುವದಿಲ್ಲ; ಇಗೋ, ನನ್ನ ತಂದೆಯು ನನಗೆ ತಿಳಿಸದೆ ಯಾವ ಚಿಕ್ಕ ಕಾರ್ಯವನ್ನಾದರೂ ದೊಡ್ಡ ಕಾರ್ಯವನ್ನಾದರೂ ಮಾಡುವದಿಲ್ಲ. ಈ ಕಾರ್ಯವನ್ನು ಯಾಕೆ ನನ್ನ ತಂದೆಯು ನನಗೆ ಬಚ್ಚಿಟ್ಟನು? ಹಾಗೆ ಆಗದು ಅಂದನು.

1 ಸಮುವೇಲ 31:1

ಆದರೆ ಫಿಲಿಷ್ಟಿಯರು ಇಸ್ರಾಯೇಲ್ಯರ ಸಂಗಡ ಯುದ್ಧಮಾಡಿದರು. ಆಗ ಇಸ್ರಾಯೇಲ್‌ ಜನರು ಫಿಲಿಷ್ಟಿಯರ ಎದುರಿನಿಂದ ಓಡಿಹೋಗಿ ಗಿಲ್ಬೋವ ಬೆಟ್ಟದಲ್ಲಿ ಕೊಲ್ಲಲ್ಪಟ್ಟವರಾಗಿ ಬಿದ್ದರು.

2 ಸಮುವೇಲ 2:18

ಚೆರೂಯಳ ಮೂವರು ಮಕ್ಕಳಾದ ಯೋವಾ ಬನೂ ಅಬಿಷೈಯೂ ಅಸಾಹೇಲನೂ ಅಲ್ಲಿ ಇದ್ದರು. ಅಸಾಹೇಲನು ಅಡವಿಯ ಜಿಂಕೆಯ ಹಾಗೆ ಪಾದ ತ್ವರಿತನಾಗಿದ್ದನು.

2 ಸಮುವೇಲ 23:20

ಕಬ್ಜಯೇಲಿನಲ್ಲಿದ್ದ ಪರಾಕ್ರಮಶಾಲಿಯ ಮಗನಾದ ಯೆಹೋಯಾದಾ ವನ ಮಗನಾಗಿರುವ ಬೆನಾಯನು ಅನೇಕ ಶೂರ ಕೃತ್ಯಗಳನ್ನು ಮಾಡಿದ್ದನು. ಅವನು ಸಿಂಹದಹಾಗಿರುವ ಮೋವಾಬಿನ ಇಬ್ಬರು ಮನುಷ್ಯರನ್ನು ಕೊಂದುಬಿಟ್ಟನು. ಇದಲ್ಲದೆ ಹಿಮಕಾಲದಲ್ಲಿ ಕುಣಿಯೊಳಗೆ ಇಳಿದು ಒಂದು ಸಿಂಹವನ್ನು ಕೊಂದುಬಿಟ್ಟನು.

1 ದಿನವೃತ್ತಾಂತ 12:8

ಇದಲ್ಲದೆ ಅರಣ್ಯದಲ್ಲಿ ಬಲವಾದ ಸ್ಥಳದಲ್ಲಿರುವ ದಾವೀದನ ಬಳಿಯಲ್ಲಿ ತಮ್ಮನ್ನು ಪ್ರತ್ಯೇಕಿಸಿದ ಗಾದ್ಯರು ಇದ್ದರು. ಇವರು ಖೇಡ್ಯವನ್ನೂ ಭಲ್ಲೆಯನ್ನೂ ಹಿಡಿದು ಪರಾಕ್ರಮಶಾಲಿಗಳಾಗಿಯೂ ಯುದ್ಧಕ್ಕೆ ತಕ್ಕ ಸೈನಿಕರಾಗಿಯೂ ಇದ್ದರು; ಅವರ ಮುಖಗಳು ಸಿಂಹದ ಮುಖಗಳ ಹಾಗಿದ್ದವು ಮತ್ತು ಪರ್ವತಗಳ ಮೇಲೆ ಇರುವ ಜಿಂಕೆಗಳ ಹಾಗೆ ವೇಗವುಳ್ಳವರಾಗಿದ್ದರು.

ಯೋಬ 9:26

ಹದ್ದು ಆಹಾರದ ಮೇಲೆ ಎರಗುವ ಪ್ರಕಾರವೂ ತೀವ್ರವಾದ ಹಡಗುಗಳ ಹಾಗೆಯೇ ಅವು ದಾಟಿ ಹೋಗುತ್ತವೆ.

ಸಾಮೇತಿಗಳು 30:30

ಮೃಗಗಳಲ್ಲಿ ಬಲಿಷ್ಠವಾಗಿ ರುವ ಸಿಂಹವು ಯಾವದಕ್ಕೂ ಹೆದರುವುದಿಲ್ಲ.

ಯೆರೆಮಿಯ 4:13

ಇಗೋ, ಮೇಘಗಳ ಹಾಗೆ ಏರಿ ಬರುವನು; ಆತನ ರಥಗಳು ಬಿರುಗಾಳಿಯ ಹಾಗೆ ಇರುವವು, ಆತನ ಕುದುರೆಗಳು ಹದ್ದುಗಳಿಗಿಂತ ತೀವ್ರವಾಗಿವೆ. ನಮಗೆ ಅಯ್ಯೋ, ಹಾಳಾದೆವು.

ವಿಲಾಪಗಳು 4:19

ನಮ್ಮನ್ನು ಹಿಂಸಿಸುವವರು ಆಕಾಶದಲ್ಲಿ ಹಾರುವ ಹದ್ದುಗಳಿಗಿಂತ ತೀವ್ರ ವಾಗಿದ್ದಾರೆ; ಅವರು ಪರ್ವತಗಳ ಮೇಲೆ ನಮ್ಮನ್ನು ಹಿಂದಟ್ಟಿ ಅರಣ್ಯದಲ್ಲಿ ಹೊಂಚುಹಾಕಿದರು.

Interlinear

Choose Theme