ಇಸ್ರಾಯೇಲಿನ ಕುಮಾರ್ತೆ ಯರೇ, ಸೌಲನಿಗೋಸ್ಕರ ಅಳಿರಿ, ನಿಮಗೆ ರಕ್ತಾಂಬರ ವನ್ನು ಸಂಭ್ರಮವಾಗಿ ತೊಡಿಸಿದನಲ್ಲಾ; ನಿಮ್ಮ ಉಡುಗೆ ಗಳ ಮೇಲೆ ಚಿನ್ನದ ಆಭರಣಗಳನ್ನು ಧರಿಸುವಂತೆ ಮಾಡಿದನಲ್ಲಾ.
Cross references
ಅವರು ಓಡಲಿಲ್ಲವೋ? ಕೊಳ್ಳೆಹಂಚಿ ಕೊಳ್ಳಲಿಲ್ಲವೋ? ಒಬ್ಬೊಬ್ಬ ಮನುಷ್ಯನಿಗೆ ಒಂದೆರಡು ಹೆಣ್ಣು, ಸೀಸೆರನಿಗೆ ನಾನಾ ವರ್ಣವುಳ್ಳ ಕೊಳ್ಳೆ, ನಾನಾ ವರ್ಣವುಳ್ಳಂಥ ವಿಚಿತ್ರವಾಗಿ, ಹೊಲಿದಂಥ, ಎರಡು ಪಕ್ಕೆಗಳಲ್ಲಿ ವಿಚಿತ್ರವಾಗಿ ಹೊಲಿದಂಥ, ಕೊಳ್ಳೆ ಹಿಡಿ ಯುವರ ಕಂಠಗಳಿಗೆ ತಕ್ಕಂಥ ನಾನಾ ವರ್ಣವುಳ್ಳ ಕೊಳ್ಳೆ, ಸಿಕ್ಕಲಿಲ್ಲವೋ?ಓ ಕರ್ತನೇ, ಹೀಗೆಯೇ ನಿನ್ನ ಶತ್ರುಗಳೆಲ್ಲರು ನಾಶವಾಗಲಿ, ಆದರೆ ಆತನನ್ನು ಪ್ರೀತಿಮಾಡುವವರು ತನ್ನ ಪರಾಕ್ರಮದಿಂದ ಹೊರ ಡುವ ಸೂರ್ಯನ ಹಾಗೆಯೇ ಇರಲಿ. ದೇಶವು ನಾಲ್ವತ್ತು ವರುಷ ವಿಶ್ರಾಂತಿಯಲ್ಲಿತ್ತು.
ಸೈನ್ಯಗಳ ಅರಸರು ತ್ವರೆಯಾಗಿ ಓಡಿಹೋದರು; ಮನೆಯಲ್ಲಿ ವಾಸಿಸುವವಳು ಕೊಳ್ಳೆ ಯನ್ನು ಪಾಲು ಮಾಡಿಕೊಂಡಳು.
ತನ್ನ ಮನೆಯವರಿಗಾಗಿ ಆಕೆಯು ಹಿಮಕ್ಕೆ ಭಯಪಡುವದಿಲ್ಲ; ಆಕೆಯ ಮನೆಯವ ರೆಲ್ಲರೂ ರಕ್ತಾಂಭರಗಳಿಂದ ಹೊದಿಸಲ್ಪಟ್ಟಿದ್ದಾರೆ.
ಇದಲ್ಲದೆ ಕರ್ತನು ಇಂತೆನ್ನುತ್ತಾನೆ --ಚೀಯೋನ್ ಕುಮಾರ್ತೆಯರು ಅಹಂಕಾರಿಗಳಾಗಿದ್ದು ಕತ್ತು ತೂಗುತ್ತಾ ಕಣ್ಣುಗಳನ್ನು ತಿರುಗಿಸುತ್ತಾ ನಾಜೂಕಿ ನಿಂದ ಹೆಜ್ಜೆಇಡುತ್ತಾ ಕಾಲುಗೆಜ್ಜೆ ಜಣಜಣಿಸುತ್ತಾ ನಡೆ ಯುವವರಾಗಿರುವದರಿಂದ,
ಯುವತಿಯು ತನ್ನ ಆಭರಣಗಳನ್ನೂ ಮದಲಗಿತ್ತಿಯು ತನ್ನ ಒಡ್ಯಾಣವನ್ನೂ ಮರೆತುಬಿಡುವಳೋ? ಆದಾಗ್ಯೂ ನನ್ನ ಜನರು ಲೆಕ್ಕವಿಲ್ಲದಷ್ಟು ದಿನಗಳು ನನ್ನನ್ನು ಮರೆತುಬಿಟ್ಟಿದ್ದಾರೆ.
ಹಾಗೆಯೇ ಸ್ತ್ರೀಯರು ಮಾನಸ್ಥೆಯರಾಗಿಯೂ ಸ್ವಸ್ಥಬುದ್ಧಿಯುಳ್ಳವರಾಗಿಯೂ ಇದ್ದು ಮರ್ಯಾದೆಗೆ ತಕ್ಕ ಉಡುಪನ್ನುಟ್ಟುಕೊಳ್ಳಬೇಕೆಂದು ಅಪೇಕ್ಷಿಸುತ್ತೇನೆ. ಅವರು ಜಡೆ ಚಿನ್ನ ಮುತ್ತುಗಳು ಬೆಲೆಯುಳ್ಳ ವಸ್ತ್ರ ಇವುಗಳಿಂದ ತಮ್ಮನ್ನು ಅಲಂಕರಿಸಿಕೊಳ್ಳದೆ
ಜಡೆ ಹೆಣೆದುಕೊ ಳ್ಳುವದೂ ಚಿನ್ನದ ಒಡವೆಗಳನ್ನು ಇಟ್ಟುಕೊಳ್ಳುವದೂ ಇಲ್ಲವೆ ಉಡಿಗೆಗಳನ್ನು ಧರಿಸಿಕೊಳ್ಳುವದೂ ಈ ಹೊರ ಗಣ ಅಲಂಕಾರವು ಬೇಡ.