ನನ್ನ ಸಹೋದರನಾದ ಯೋನಾತಾನನೇ, ನಾನು ನಿನ ಗೋಸ್ಕರ ಸಂಕಟಪಡುತ್ತೇನೆ; ನೀನು ನನಗೆ ಬಹಳ ಮನೋಹರನಾಗಿದ್ದೀ. ನಿನ್ನ ಪ್ರೀತಿ ನನ್ನ ಮೇಲೆ ಆಶ್ಚರ್ಯವಾಗಿತ್ತು. ಅದು ಸ್ತ್ರೀಯರ ಪ್ರೀತಿಗಿಂತ ಅಧಿಕವಾದದ್ದು.ಪರಾಕ್ರಮಶಾಲಿಗಳು ಹೇಗೆ ಯುದ್ಧದಲ್ಲಿ ಬಿದ್ದಿದ್ದಾರೆ; ಯುದ್ಧದ ಆಯುಧಗಳು ನಾಶವಾಗಿ ಹೋದವಲ್ಲಾ.
Cross references
ದಾವೀದನು ಸೌಲನ ಸಂಗಡ ಮಾತನಾಡಿ ತೀರಿಸಿದಾಗ ಯೋನಾತಾನನ ಪ್ರಾಣವು ದಾವೀದನ ಪ್ರಾಣದ ಸಂಗಡ ಒಂದಾಯಿತು. ಯೋನಾತಾನನು ಅವನನ್ನು ತನ್ನ ಪ್ರಾಣದ ಹಾಗೆಯೇ ಪ್ರೀತಿಮಾಡಿದನು.
ಆದರೆ ಸೌಲನ ಮಗನಾದ ಯೋನಾತಾನನು ದಾವೀದನನ್ನು ಬಹಳವಾಗಿ ಪ್ರೀತಿ ಸುತ್ತಿದ್ದನು; ಯೋನಾತಾನನು ದಾವೀದನಿಗೆ--ನನ್ನ ತಂದೆಯಾದ ಸೌಲನು ನಿನ್ನನ್ನು ಕೊಲ್ಲಬೇಕೆಂದು ಹುಡುಕುತ್ತಾನೆ; ನೀನು ನಾಳೆ ಬೆಳಗಿನವರೆಗೆ ಎಚ್ಚರಿಕೆ ಯಾಗಿದ್ದು ಮರೆಯಾದ ಸ್ಥಳಗಳಲ್ಲಿ ಅಡಗಿಕೋ.
ಯೋನಾತಾನನು ದಾವೀದನನ್ನು ಪ್ರೀತಿ ಮಾಡಿದ್ದರಿಂದ ತಿರಿಗಿ ಅವನಿಂದ ಪ್ರಮಾಣ ತೆಗೆದುಕೊಂಡನು; ಅವನು ತನ್ನ ಪ್ರಾಣವನ್ನು ಪ್ರೀತಿ ಮಾಡಿದ ಹಾಗೆಯೇ ಅವನನ್ನು ಪ್ರೀತಿ ಮಾಡಿದನು.
ಹುಡುಗನು ಹೋಗುತ್ತಲೇ ದಾವೀದನು ದಕ್ಷಿಣ ಕಡೆಯಿಂದ ಎದ್ದುಬಂದು ಬೋರಲು ಬಿದ್ದು ಮೂರು ಸಾರಿ ವಂದಿಸಿದನು. ಅವರು ಒಬ್ಬರಿಗೊ ಬ್ಬರು ಮುದ್ದಿಟ್ಟುಕೊಂಡು ಒಬ್ಬರನ್ನೊಬ್ಬರು ನೋಡಿ ಅತ್ತರು; ದಾವೀದನು ಬಹಳವಾಗಿ ಅತ್ತನು;ಆಗ ಯೋನಾತಾನನು ದಾವೀದನಿಗೆ--ನೀನು ಸಮಾಧಾನದಿಂದ ಹೋಗು; ಕರ್ತನು ಎಂದೆಂದಿಗೂ ನನಗೂ ನಿನಗೂ ನನ್ನ ಸಂತಾನಕ್ಕೂ ನಿನ್ನ ಸಂತಾ ನಕ್ಕೂ ಮಧ್ಯದಲ್ಲಿ ಕರ್ತನ ಹೆಸರಿನಿಂದ ನಾವಿಬ್ಬರೂ ಪ್ರಮಾಣ ಇಟ್ಟುಕೊಂಡೆವಲ್ಲಾ ಅಂದನು. ಆಗ ದಾವೀದನು ಎದ್ದು ಹೋದನು; ಯೋನಾತಾನನು ಪಟ್ಟಣಕ್ಕೆ ಹೋದನು.
ಆಗ ಸೌಲನ ಮಗನಾದ ಯೋನಾತಾನನು ಎದ್ದು ಅರಣ್ಯದಲ್ಲಿರುವ ದಾವೀದನ ಬಳಿಗೆ ಹೋಗಿ ದೇವರಲ್ಲಿ ಅವನ ಕೈಯನ್ನು ಬಲಪಡಿಸಿ ಅವನಿಗೆ--ಭಯಪಡಬೇಡ;
ಸ್ನೇಹಿತರಿದ್ದವನು ಸ್ನೇಹವಾಗಿ ನಡೆದುಕೊಳ್ಳಬೇಕು. ಸಹೋದರನಿಗಿಂತ ಹತ್ತಿರ ಹೊಂದಿಕೊಳ್ಳುವ ಸ್ನೇಹಿತನಿದ್ದಾನೆ.