Home Bibles 2 ಸಮುವೇಲ 11:21 · ಕನ್ನಡ ಬೈಬಲ್
2 ಸಮುವೇಲ 11:21 · ಕನ್ನಡ ಬೈಬಲ್

ಅವರು ಗೋಡೆ ಯಿಂದ ಎಸೆಯುವರೆಂದು ನಿಮಗೆ ತಿಳಿದಿರಲಿಲ್ಲವೋ? ಯೆರುಬ್ಬೆಷೆತನ ಮಗನಾದ ಅಬೀಮೆಲೆಕನನ್ನು ಕೊಂದ ವರಾರು? ತೇಬೇಚಿನಲ್ಲಿ ಒಬ್ಬ ಹೆಂಗಸು ಗೋಡೆಯ ಮೇಲಿನಿಂದ ಒಂದು ಬೀಸುವ ಕಲ್ಲಿನ ತುಂಡನ್ನು ಅವನ ಮೇಲೆ ಹಾಕಿದಾಗ ಅವನು ಸತ್ತನಲ್ಲವೇ? ನೀವು ಗೋಡೆಗೆ ಇಷ್ಟು ಸವಿಾಪವಾಗಿ ಹೋದದ್ದೇನು ಎಂದು ನಿನ್ನನ್ನು ಕೇಳಿದರೆ ಆಗ ನೀನು--ನಿನ್ನ ಸೇವಕ ನಾದ ಊರೀಯನೆಂಬ ಹಿತ್ತಿಯನು ಸತ್ತನೆಂದು ಹೇಳು ಅಂದನು.

Cross references

ನ್ಯಾಯಾಧಿಪತಿಗಳು 6:32

ಗಿದ್ಯೋ ನನು ಬಾಳನ ಬಲಿಪೀಠವನ್ನು ಕೆಡವಿದ್ದರಿಂದ ಅವನು ಅವನ ಸಂಗಡ ವ್ಯಾಜ್ಯವಾಡಲೆಂದು ಹೇಳಿ ಆ ದಿನದಲ್ಲಿ ಅವನಿಗೆ ಯೆರುಬ್ಬಾಳನೆಂಬ ಹೆಸರಿಟ್ಟನು.

ನ್ಯಾಯಾಧಿಪತಿಗಳು 7:1

ಗಿದ್ಯೋನನೆಂಬ ಯೆರುಬ್ಬಾಳನೂ ಅವನ ಸಂಗಡ ಇದ್ದ ಜನರೆಲ್ಲರೂ ಉದಯದಲ್ಲಿ ಎದ್ದು ಹರೋದಿನ ಬಾವಿಯ ಬಳಿಯಲ್ಲಿ ದಂಡಿಳಿದರು. ಮಿದ್ಯಾನ್ಯರ ದಂಡು ಅವರಿಗೆ ಉತ್ತರಕ್ಕೆ ಮೋರೆ ಬೆಟ್ಟದ ತಗ್ಗಿನಲ್ಲಿ ಇಳಿದಿತ್ತು.

ನ್ಯಾಯಾಧಿಪತಿಗಳು 9:50

ಆಗ ಅಬೀಮೆಲೆಕನು ತೇಬೇಚಿಗೆ ಹೋಗಿ ಅದಕ್ಕೆ ವಿರೋಧವಾಗಿ ದಂಡಿಳಿಸಿ ಅದನ್ನು ಹಿಡಿದನು.

ನ್ಯಾಯಾಧಿಪತಿಗಳು 9:53

ಆದರೆ ಒಬ್ಬ ಸ್ತ್ರೀಯು ಒಂದು ಬೀಸುವ ಕಲ್ಲಿನ ತುಂಡನ್ನು ಅಬೀಮೆಲೆಕನ ತಲೆಯ ಮೇಲೆ ಹಾಕಿ; ಅದರಿಂದ ಅವನ ತಲೆಯನ್ನು ಒಡೆದುಹಾಕಿದಳು.

2 ಸಮುವೇಲ 3:27

ಅಬ್ನೇರನು ಹೆಬ್ರೋನಿಗೆ ತಿರಿಗಿ ಬಂದ ತರುವಾಯ ಯೋವಾಬನು ಬಾಗಲಲ್ಲಿ ಅವನ ಸಂಗಡ ಸಮಾಧಾನವಾಗಿ ಮಾತ ನಾಡಿ ಅವನನ್ನು ಒಂದು ಕಡೆ ಕರಕೊಂಡು ಹೋಗಿ ತನ್ನ ತಮ್ಮನಾದ ಅಸಾಹೇಲನ ರಕ್ತಾಪರಾಧದ ನಿಮಿತ್ತ ಅಲ್ಲಿ ಅವನ ಪಕ್ಕೆಯ ಐದನೇ ಎಲುಬಿನಲ್ಲಿ ಇರಿದು ಕೊಂದುಹಾಕಿದನು.

2 ಸಮುವೇಲ 3:34

ಬುದ್ಧಿಹೀನನು ಸತ್ತ ಹಾಗೆಯೇ ಅಬ್ನೇರನು ಸತ್ತನೋ? ನಿನ್ನ ಕೈಗಳು ಕಟ್ಟಲ್ಪಡಲಿಲ್ಲ, ಇಲ್ಲವೆ ನಿನ್ನ ಕಾಲುಗಳಿಗೆ ಬೇಡಿ ಹಾಕಲ್ಪಡಲಿಲ್ಲ; ಒಬ್ಬನು ದುಷ್ಟರ ಮುಂದೆ ಬೀಳುವ ಹಾಗೆಯೇ ನೀನು ಬಿದ್ದಿದೀ ಅಂದನು. ಆಗ ಜನರೆಲ್ಲರು ತಿರಿಗಿ ಅವನಿಗೋಸ್ಕರ ಅತ್ತರು.

ಕೀರ್ತನೆಗಳು 39:8

ನನ್ನ ಎಲ್ಲಾ ದ್ರೋಹಗಳಿಂದ ನನ್ನನ್ನು ಬಿಡಿಸು; ಬುದ್ಧಿಹೀನನ ನಿಂದೆಗೆ ನನ್ನನ್ನು ಗುರಿಮಾಡಬೇಡ.

ಯೆಶಾಯ 14:10

ಅವರೆಲ್ಲರು ನಿನಗೆ--ನಮ್ಮ ಹಾಗೆ ನೀನು ಸಹ ಬಲಹೀನನಾಗಿದ್ದೀ, ನೀನು ನಮ್ಮ ಸಮಾನನಾಗಿದ್ದೀ ಎಂದು ಮಾತಾಡಿ ಹೇಳುವರು.

ಯೆಹೆಜ್ಕೇಲ 16:51

ಸಮಾರ್ಯವೆಂಬಾಕೆಯು ಸಹ ನೀನು ಮಾಡಿದ ಪಾಪಗಳಲ್ಲಿ ಅರ್ಧವನ್ನೂ ಮಾಡಲಿಲ್ಲ. ನೀನು ನಿನ್ನ ಅಕ್ಕತಂಗಿಯರಿಗಿಂತಲೂ ಅತ್ಯಧಿಕವಾದ ಅಸಹ್ಯವಾದ ಕಾರ್ಯಗಳನ್ನು ಮಾಡಿದಿ, ನೀನು ಮಾಡಿದ ಲೆಕ್ಕವಿಲ್ಲ ದಷ್ಟು ದುರಾಚಾರಗಳಿಂದ ಅವರನ್ನು ನೀತಿವಂತರೆಂದು ತೋರ್ಪಡಿಸಿದೆ.

Interlinear

Choose Theme