Home Bibles 2 ಸಮುವೇಲ 11:25 · ಕನ್ನಡ ಬೈಬಲ್
2 ಸಮುವೇಲ 11:25 · ಕನ್ನಡ ಬೈಬಲ್

ಆಗ ದಾವೀದನು ಆ ದೂತನಿಗೆ--ನೀನು ಯೋವಾಬನಿಗೆ--ಈ ಕಾರ್ಯ ನಿನಗೆ ಮೆಚ್ಚಿಗೆ ಯಿಲ್ಲದ್ದಾಗಿ ಕಾಣಬಾರದು. ಯಾಕಂದರೆ ಕತ್ತಿಯು ಇವನನ್ನಾದರೂ ಸರಿ ಅವನನ್ನಾದರೂ ಸರಿ ತಿಂದು ಬಿಡುವದು. ನೀನು ಪಟ್ಟಣವನ್ನು ನಿರ್ಮೂಲಮಾಡುವ ಹಾಗೆ ಅದರ ಮೇಲೆ ನಿನ್ನ ಯುದ್ಧವು ಹೆಚ್ಚು ಬಲವಾಗಿರಲಿ ಎಂದು ಹೇಳಿ ಅವನನ್ನು ಬಲಪಡಿಸು ಅಂದನು.

Cross references

ಯೆಹೋಶುವ 7:8

ಓ ಕರ್ತನೇ, ಈಗ ನಾನೇನು ಹೇಳಲಿ? ಇಸ್ರಾಯೇಲ್ಯರು ತಮ್ಮ ಶತ್ರುಗಳಿಗೆ ಬೆನ್ನು ತಿರುಗಿಸಿದ್ದಾರಲ್ಲಾ.

ನ್ಯಾಯಾಧಿಪತಿಗಳು 20:22

ಇಸ್ರಾಯೇಲ್‌ ಮನುಷ್ಯರಾದ ಜನರು ಬಲ ಗೊಂಡು ಮೊದಲನೇ ದಿನ ಯುದ್ಧಕ್ಕೆ ವ್ಯೂಹಕಟ್ಟಿದ ಸ್ಥಳದಲ್ಲಿ ತಿರಿಗಿ ವ್ಯೂಹ ಕಟ್ಟಿದರು. (ಇಸ್ರಾಯೇಲ್‌ ಮಕ್ಕಳು ಕರ್ತನ ಬಳಿಗೆ ಹೋಗಿ ಆತನ ಮುಂದೆ ಸಾಯಂಕಾಲದ ವರೆಗೆ ಅತ್ತು--ನಮ್ಮ ಸಹೋದರನಾದ ಬೆನ್ಯಾವಿಾನನ ಮಕ್ಕಳ ಸಂಗಡ ಯುದ್ಧಮಾಡುವದಕ್ಕೆ ಹೋಗಬೇಕೋ ಎಂದು ಕರ್ತನನ್ನು ಕೇಳಿದರು.

1 ಸಮುವೇಲ 6:9

ಅದು ತನ್ನ ಮೇರೆಯಾದ ಬೇತ್ಷೆಮೆಷಿನ ಮಾರ್ಗವನ್ನು ಹಿಡಿದು ಹೋದರೆ ಆತನು ಈ ದೊಡ್ಡ ಕೇಡನ್ನು ನಮಗೆ ಮಾಡಿದ್ದಾನೆ; ಇಲ್ಲದೆ ಹೋದರೆ ಆತನ ಹಸ್ತವು ನಮ್ಮನ್ನು ಮುಟ್ಟಲಿಲ್ಲ; ಅದು ನಮಗೆ ಪ್ರಾಪ್ತಿಯಾಯಿತೆಂದು ತಿಳುಕೊಳ್ಳಿರಿ ಅಂದರು.

2 ಸಮುವೇಲ 12:26

ಯೋವಾಬನು ಅಮ್ಮೋನನ ಮಕ್ಕಳ ರಬ್ಬದ ಮೇಲೆ ಯುದ್ಧಮಾಡಿ ರಾಜ್ಯದ ಪಟ್ಟಣವನ್ನು ಹಿಡಿದನು.

ಸಭಾಪ್ರಸಂಗಿ 9:1

ನಾನು ಇವೆಲ್ಲವುಗಳ ಮೇಲೆ ಮನಸ್ಸಿಟ್ಟು ಇವೆಲ್ಲವುಗಳಲ್ಲಿ ನಾನು ತೀರ್ಮಾನಿಸಿ ದ್ದೇನಂದರೆ--ನೀತಿವಂತನು ಮತ್ತು ಜ್ಞಾನಿ ಇವರ ಕೆಲಸಗಳು ದೇವರ ಕೈಯಲ್ಲಿವೆ; ಯಾವ ಮನುಷ್ಯನೂ ಅವರ ಮುಂದಿರುವ ಎಲ್ಲವುಗಳನ್ನು, ಅಂದರೆ ಪ್ರೀತಿ ಯನ್ನು ಅಥವಾ ದ್ವೇಷವನ್ನು ತಿಳಿಯಲಾರನು.

ಸಭಾಪ್ರಸಂಗಿ 9:11

ನಾನು ತಿರುಗಿಕೊಂಡು ಸೂರ್ಯನ ಕೆಳಗೆ ನೋಡಿದ್ದೇನಂದರೆ, ವೇಗಿಗಳಿಗೆ ಓಟವೂ ಪರಾಕ್ರಮ ಶಾಲಿಗಳಿಗೆ ಯುದ್ಧವೂ ಜ್ಞಾನಿಗಳಿಗೆ ರೊಟ್ಟಿಯೂ ವಿವೇಕಿಗಳಿಗೆ ಐಶ್ವರ್ಯವೂ ಪ್ರವೀಣರಿಗೆ ದಯೆಯೂ ಸಿಗುವದಿಲ್ಲ. ಕಾಲವೂ ಗತಿಯೂ ಅವರೆಲ್ಲರಿಗೆ ಸಂಭವಿ ಸುತ್ತವೆ.

Interlinear

Choose Theme